Kannada literary
ಸಾಹಿತಿ ಮೊಗಳ್ಳಿ ಗಣೇಶ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ವೈಚಾರಿಕ ವಿಮರ್ಶಕ,ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ ಡಾ. ಮೊಗಳ್ಳಿ ಗಣೇಶ್ (೬೨) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯು ಇಂದು (ಭಾನುವಾರ) ಸಂಜೆ ಹುಟ್ಟೂರು ಮೊಗಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬ ತಿಳಿಸಿದೆ. 1963ರ ಜುಲೈ 1 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂತೆಗೇನ ಹಳ್ಳಿಯಲ್ಲಿ ಡಾ. ಮೊಗಳ್ಳಿ ಗಣೇಶ್ ಜನಿಸಿ, ಮೈಸೂರು


