kannada news
ಮಂಡ್ಯದ ಶಿವನಸಮುದ್ರ ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ!
ಮಂಡ್ಯದ ಶಿವನ ಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 3 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ್ದಾರೆ. ಶಿವನಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆ ಹೊರಗೆ ಬರಲು ಆಗದೇ ಕಳೆದೆರಡು ದಿನಗಳಿಂದ ಬಳಲುತ್ತಿತ್ತು. ಎರಡು ದಿನಗಳಿಂದ ಆಹಾರ ಇಲ್ಲದೇ ಹಾಗೂ ಸೊಂಡಿಲಿಗೆ ಸೋಂಕು ತಗುಲಿದ್ದರಿಂದ ಆನೆ ಪರದಾಟ ನೋಡಲು ಆಗುತ್ತಿರಲಿಲ್ಲ. ನಾಲೆಯಲ್ಲಿ ಆನೆ ಸಿಲುಕಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸತತ ಮೂರು ಗಂಟಗಳ ಕಾರ್ಯಾಚರಣೆ
ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಕ್ವಾಂಟಮ್ ಟೆಕ್ನಾಲಜಿ ರೌಂಡ್‌ಟೇಬಲ್: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ನವೆಂಬರ್ 19 ರಂದು ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ “ಕ್ವಾಂಟಮ್ ಟೆಕ್ನಾಲಜಿ ರೌಂಡ್ ಟೇಬಲ್” ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ನವೆಂಬರ್ 19 ರಂದು
ಬಳ್ಳಾರಿಯ 36 ಜೀನ್ಸ್ ಘಟಕಗಳಿಗೆ ಬೀಗ ಜಡಿದ ಜಿಲ್ಲಾಡಳಿತ!
ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬಳ್ಳಾರಿಯ 36 ಘಟಕಗಳಿಗೆ ಬೀಗ ಜಡಿಯಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಬಳ್ಳಾರಿ
ಮೇಕೆದಾಟು ಯೋಜನೆಗೆ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಪ್ರವಾಹ ಪರಿಹಾರ, ನೀರಾವರಿ ಯೋಜನೆಗೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ
ಜಾರ್ಖಂಡ್ ಸಿಎಂ ಹೆಸರಲ್ಲಿ ಡಿಕೆ ಶಿವಕುಮಾರ್ ದಂಪತಿಗೆ ಕರೆ ಮಾಡಿ ಕಿರುಕುಳ: ಎಫ್ ಐಆರ್ ದಾಖಲು
ಬೆಂಗಳೂರು: ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೆಸರನ್ನು ದುರುಪಯೋಗಪಡಿಸಿಕೊಂಡು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿಗೆ ದುಷ್ಕರ್ಮಿಯೊಬ್ಬ ಕರೆ ಮಾಡಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಅನ್ವಯ
ಮೆಟ್ರೊ ಯೋಜನೆಯನ್ನು ಬೇಗ ಪೂರ್ಣಗೊಳಿಸಿ: ಆರ್.ಅಶೋಕ
ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆಗಾಗಿ
ಸಾಂಬಾರ್ ಗೆ ವಿಷ ಬೆರೆಸಿ ಕೊಲೆಗೆ ಯತ್ನ: ಒಂದೇ ಕುಟುಂಬದ 8 ಮಂದಿ ಅಸ್ವಸ್ಥ
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ವಿಷ ಬೆರೆಸಿದ ಸಾಂಬಾರ್ ಸೇವಿಸಿ ಅಸ್ವಸ್ಥರಾಗಿದ್ದ 9 ಮಂದಿಯಲ್ಲಿ ಒಂದೇ ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸಾಂಬಾರಿಗೆ ವಿಷ ಬೆರೆಸಿದ್ದ ಪಾಪಿ ದೇವಿರೆಡ್ಡಿಪಲ್ಲಿಯ ಮದ್ದರೆಡ್ಡಿ ಮತ್ತು ಪಾಪಿರೆಡ್ಡಿ ಎಂಬುವವರು ಅಕ್ಕಪಕ್ಕದ ಮನೆಯವರಾಗಿದ್ದು, ಎರಡು
ಮಂಗಳೂರಿನಲ್ಲಿ 2 ಅಪಘಾತ, 6 ಮಂದಿ ದುರ್ಮರಣ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ಸರ್ಕಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ
ಸರ್ಕಾರಿ ಗೌರವದೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ಬೆಂಗಳೂರು: ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ




