kannada news
ರೀಲ್ಸ್ ವ್ಯಸನ: ವೃದ್ಧರನ್ನು ಕೊರಿಯರ್ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಕುಟುಂಬ
ರೀಲ್ಸ್ ಮಾಡುವ ವ್ಯಸನಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೂರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರು ಮಂಗಳವಾರ ವೈಯ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೂರಿಯರ್ ಕಚೇರಿಗೆ ದೊಡ್ಡ ಪ್ಯಾಕೇಜ್ ಹೊತ್ತು ತಂದಿದ್ದಾರೆ. ಇಷ್ಟು ದೊಡ್ಡ ಚೀಲ ನೋಡಿ ಒಳಗೆ ಏನಿದೆ ಎಂದು ಸಿಬ್ಬಂದಿ ಪ್ರಶ್ನಿಸಿದ್ದು, ಕುಟುಂಬದವರು ಉತ್ತರಿಸಿಲ್ಲ. ಅನುಮಾನಗೊಂಡ ಸಿಬ್ಬಂದಿ ಪ್ಯಾಕೇಜ್ ಓಪನ್ ಮಾಡಿ ನೋಡಿ
ವೀಸಾ ಮುಗಿದಿದ್ದರೂ ಬೆಂಗಳೂರಿನಲ್ಲಿ 542 ವಿದೇಶಿಗರು ಅಕ್ರಮ ವಾಸ
ವೀಸಾ ಅವಧಿ ಮೀರಿ ವಾಸಿಸುತ್ತಿರುವ 588 ವಿದೇಶಿಗರಲ್ಲಿ, ಹೆಚ್ಚಿನವರು ಬೆಂಗಳೂರು ನಗರದಲ್ಲೇ 542 ಮಂದಿ ಪತ್ತೆಯಾಗಿದ್ದಾರೆ. ಇನ್ನುಳಿದಂತೆ ಮೈಸೂರಿನಲ್ಲಿ 26, ಮಂಗಳೂರಿನಲ್ಲಿ 1, ಹುಬ್ಬಳ್ಳಿ-ಧಾರವಾಡದಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 11, ರಾಮನಗರದಲ್ಲಿ 4, ಉತ್ತರ ಕನ್ನಡ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ
ವಸತಿ ಕಟ್ಟಡದಲ್ಲಿ ಬೆಂಕಿ ದುರಂತ: ಎಂಟು ಮಂದಿ ಸಾವು
ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ. ಮುಂಜಾನೆ ಏಳು ಗಂಟೆಯಷ್ಟೊತ್ತಿಗೆ ಅಗ್ನಿ ದುರಂತದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ
ಪ್ರಜ್ವಲ್ ರೇವಣ್ಣ ವೀಡಿಯೊ ಕೇಸ್: ಪೆನ್‌ಡ್ರೈವ್ ಹಂಚಿಕೆಯಲ್ಲಿ 39 ಜನರ ವಿರುದ್ಧ ಆರೋಪ ಸಾಬೀತುಪಡಿಸಿದ ಎಸ್‌ಐಟಿ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, 52 ಜನರ ಹೆಸರು ಉಲ್ಲೇಖಿಸಲಾಗಿದೆ. 39
ರಾಜ್ಯ ನೀರಾವರಿ ಯೋಜನೆ: ಸರ್ವಪಕ್ಷ ಸಂಸದರ ನಿಯೋಗದಿಂದ ಪ್ರಧಾನಿ ಭೇಟಿ ತೀರ್ಮಾನವೆಂದ ಡಿಕೆ ಶಿವಕುಮಾರ್
“ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ನಂತರ ಮತ್ತೊಮ್ಮೆ ಸಭೆ ಸೇರಿ ಸರ್ವಪಕ್ಷ ನಿಯೋಗವು ಪ್ರಧಾನಿ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಬೇಕು ಎಂದು ರಾಜ್ಯ ಸಂಸದರ ಸಭೆಯಲ್ಲಿ ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿ
ಪಿತೃತ್ವ ರಜೆ ಕಾನೂನು ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಮಗುವಿನ ಪಾಲನೆ ತಾಯಿಯ ಜವಾಬ್ದಾರಿ ಮಾತ್ರವಲ್ಲ, ಪೋಷಕರಿಬ್ಬರ ಹಂಚಿಕೆಯ ಹೊಣೆಗಾರಿಕೆ ಎಂದಿರುವ ಸುಪ್ರೀಂ ಕೋರ್ಟ್, ಪಿತೃತ್ವ ರಜೆಯನ್ನು ಒಂದು ಸೌಲಭ್ಯವನ್ನಾಗಿ ನೋಡದೆ ‘ಸಾಮಾಜಿಕ ಭದ್ರತಾ ಹಕ್ಕು’ ಎಂದು ಪರಿಗಣಿಸಿ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತಂದೆ ಮತ್ತು ಮಗು ಇಬ್ಬರ
ಮುಂದುವರಿದ ಇರಾನ್-ಇಸ್ರೇಲ್ ಸಂಘರ್ಷ: ಮಧ್ಯಪ್ರಾಚ್ಯದ ಪರಿಸ್ಥಿತಿ ಭೀಕರ
ಇರಾನ್ ಮೇಲೆ ಇಸ್ರೇಲ್- ಅಮೆರಿಕ ದಾಳಿ ಮತ್ತು ಇರಾನ್ ಪ್ರತಿದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಬೆಳವಣಿಗೆ ಆತಂಕ ಹುಟ್ಟಿಸಿದ್ದು, ಶಾಂತಿ ಕಾಪಾಡುವಂತೆ ಹಲವು ರಾಷ್ಟ್ರಗಳು ಕರೆ ನೀಡಿವೆ. ಯುದ್ಧ ಆರಂಭಗೊಂಡು ೧೮ ದಿನಗಳಾಗುತ್ತಿದ್ದು,
ವಿವಾಹಿತ ಸೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಕೊಲೆ
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಇತ್ತೀಚೆಗೆ ನಡೆದಿದ್ದ ಯುವಕನ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆ ಮಾಡಿದ ಆರೋಪಿ ಯಾರು, ಯಾಕೆ ಕೊಲೆ ಮಾಡಿದ್ದ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತನ್ನ ಸಹೋದರಿಯ ಜೊತೆ ಸ್ನೇಹಿತ ಅಕ್ರಮ
ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ
ಹೆಲ್ಮೆಟ್ ಧರಿಸದೆ ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ ಅಂಡ್ ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯವು ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ ವಿಧಿಸಿದೆ. ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ನು ಸಾಕಷ್ಟು ಸಲ
ಕಾಂಗ್ರೆಸ್‌ನಿಂದ ದಾವಣಗೆರೆ ದಕ್ಷಿಣ ಕಿತ್ತುಕೊಳ್ಳಲು ಬಿಜೆಪಿ ರಣತಂತ್ರ
“ಈ ಬಾರಿ ದಕ್ಷಿಣದಲ್ಲಿ ಬಿಜೆಪಿ” ಎಂಬ ಘೋಷವಾಕ್ಯದೊಂದಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸಿದೆ. ಅಭಿವೃದ್ಧಿ ಅಜೆಂಡಾ ಮತ್ತು ಬೂತ್ ಮಟ್ಟದ ಸಂಘಟನೆಯೊoದಿಗೆ ಕಣಕ್ಕಿಳಿಯಲು ಸಜ್ಜಾಗಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ತಿಳಿಸಿದ್ದಾರೆ. ಸೋಮವಾರ




