kannada news
ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾತೀತ ಬೆಂಬಲ: ಸಿಎಂ
ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಗುರುವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ ಬಿ.ಕೆ.ಹರಿಪ್ರಸಾದ್, ಮಳವಳ್ಳಿ ಶಿವಣ್ಣ, ಪಿ.ವಿ.ಮೋಹನ್, ವಿನಯ್ ಕಾರ್ತಿಕ್, ತಿಪ್ಪಣ್ಣಪ್ಪ ಕಮಕನೂರು ಅವರನ್ನು ವಿಧಾನಸೌಧದಲ್ಲಿ
ಕಾರ್ಮಿಕ ವಿವಾದಗಳಲ್ಲಿ ಎಸ್‌ಸಿ ಎಸ್ಟಿ ಕಾಯ್ದೆ ದುರ್ಬಳಕೆ ಸಲ್ಲದು: ಹೈಕೋರ್ಟ್
ಕಾರ್ಮಿಕ ಮತ್ತು ಸಿವಿಲ್ ಪ್ರಕರಣಗಳಿಗೆ ಕ್ರಿಮಿನಲ್ ರೂಪ ನೀಡಿ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದ
ರಾಜ್ಯಸಭೆಯಲ್ಲಿ ಎನ್‌ಡಿಎ ಸಂಖ್ಯಾ ಬಲ ಇನ್ನಷ್ಟು ಹೆಚ್ಚಳ
ಜಾರ್ಖಂಡ್ ರಾಜ್ಯಸಭಾ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ್ ನತ್ಲಾನಿ ಅವರ ಗೆಲುವಿನೊಂದಿಗೆ, ಮೇಲ್ಮನೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಂಖ್ಯಾಬಲವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಪ್ರಮುಖ ಸಾಂವಿಧಾನಿಕ ತಿದ್ದುಪಡಿಗಳನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತದ ಗಡಿಗೆ ಎನ್‌ಡಿಎ
ವಿಧಾನ ಪರಿಷತ್ ನ ಏಳು ಸ್ಥಾನಗಳಲ್ಲಿ ಐದು ಕಾಂಗ್ರೆಸ್ ಪಾಲು
ಭಾರಿ ಕುತೂಹಲ ಮೂಡಿಸಿದ್ದ ವಿಧಾನಸಭೆಯಿಂದ ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಪರಾಭವಗೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ನಿಂದ ಅಡ್ಡ ಮತದಾನ( ಕ್ರಾಸ್ ವೋಟಿಂಗ್)
ನೆಲಮಂಗಲದಲ್ಲಿ ಆಟವಾಡುತ್ತಿದ್ದ ಮಗು ಮಹಡಿಯಿಂದ ಬಿದ್ದು ಸಾವು
ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ. ಟಿ.ದಾಸರಹಳ್ಳಿ ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿಯ ಎರಡು ವರ್ಷದ ಮಗು ದೀಕ್ಷಿತ್ (2) ಮೃತಪಟ್ಟಿದೆ. ಆಟವಾಡುವಾಗ ಮೆಟ್ಟಿಲ ಮೇಲಿಂದ ಮಗು
ಅತ್ಯಾಚಾರ, ಚಿತ್ರಹಿಂಸೆ ನೀಡಿ ಮಹಿಳೆಯ ಆಸ್ತಿ ಕಬಳಿಸಿದ ಸ್ವಯಂಘೋಷಿತ ಗುರು ಅರೆಸ್ಟ್
ಅನಾರೋಗ್ಯ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವುದಾಗಿ ನಂಬಿಸಿದ ಸ್ವಯಂಘೋಷಿತ ಗುರುವೊಬ್ಬನನ್ನು ಮಹಿಳೆಯ ಮೇಲೆ ೧೫ ವರ್ಷ ಲೈಂಗಿಕ ದೌರ್ಜನ್ಯ ಜೊತೆಗೆ ಮೂತ್ರ ಕುಡಿಸಿ ವಿದ್ಯುತ್ ಶಾಕ್ ನೀಡಿರುವ ಆರೋಪದಡಿ ಏಳು ಮಂದಿ ಸಹಚರರೊಂದಿಗೆ ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಮುಖ ಆರೋಪಿಯನ್ನು
ಮೇಕೆದಾಟು ದಕ್ಷಿಣ ಭಾರತದ ಹೃದಯ, ತಮಿಳುನಾಡು ಜೊತೆ ಚರ್ಚೆಗೆ ಸಿದ್ಧ: ಸಿಎಂ
“ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ
ಪತ್ನಿಯ ಕಿರುಕುಳ ಆರೋಪ: ಹುಬ್ಬಳ್ಳಿಯಲ್ಲಿ ಪತಿ ಸುಸೈಡ್
ಪತ್ನಿಯಿಂದ ಕಿರುಕುಳವೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಹರಿಜನ ಕಾಲೋನಿಯಲ್ಲಿ ನಡೆದಿದೆ. ಸಂತೋಷ್ ಅಳ್ಳೂರು (39) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ಹೋಗಿದ್ದರು, ಆಕೆಯ
ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಮತ ಚಲಾಯಿಸಿದೆ ಎಂದ ಶಾಸಕ ಎಸ್.ಟಿ ಸೋಮಶೇಖರ್
ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆಯ ಮತದಾನದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಮೈತ್ರಿಕೂಟವನ್ನು ಪರಿಗಣಿಸದೆ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ವ್ಯಕ್ತಿಯ ಕೊಲೆಗೈದು ಬೈಕ್‌ನಲ್ಲಿ ಶವ ಸಾಗಿಸುವಾಗ ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಸ್ನೇಹಿತ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸ್ನೇಹಿತರು ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿ ಶವವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಸಾಗಿಸುವ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ. ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ




