kannada news
ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮ: ಇಂದು ರಾತ್ರಿ ಮೂರು ಗಂಟೆವರೆಗೆ ಮೆಟ್ರೋ ಸಂಚಾರ
ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಬೆಂಗಳೂರಿಗರಿಗೆ ಡಿಸೆಂಬರ್ 31 (ಇಂದು) ರಂದು ಮೆಟ್ರೂ ರೈಲು ಸೇವೆ ರಾತ್ರಿ ಮೂರು ಗಂಟೆವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಯಾವ ಮಾರ್ಗಗಳಲ್ಲಿ ಎಷ್ಟು ಗಂಟೆಗೆ ಕೊನೆಯ ಮೆಟ್ರೋ ಸಂಚಾರ ಮಾಡಲಿದೆ ಎಂಬ ಮಾಹಿತಿ ಜೊತೆಗೆ ಯಾವ ನಿಲ್ದಾಣದಿಂದ ಕೊನೆಯ ರೈಲು ಎಷ್ಟು ಗಂಟೆಗೆ ಹೊರಡಲಿದೆ ಎಂದೂ ತಿಳಿಸಿದೆ.’ 31 ಡಿಸೆಂಬರ್ 2025ರ ಮಧ್ಯರಾತ್ರಿಯ ನಂತರ 1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ
ಉದಯಕಾಲ ಸಿಇಒ ಡಿ.ಬಿ. ಬಸವರಾಜು ಅವರಿಗೆ “ಪ್ರೈಡ್ ಆಫ್ ಕರ್ನಾಟಕ” ಪ್ರದಾನ
ಕನ್ನಡ ಜನಮಾನಸದ ಪತ್ರಿಕೆ ಉದಯಕಾಲದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಿ.ಬಿ. ಬಸವರಾಜು ಅವರು ಬೆಂಗಳೂರು ಪ್ರೆಸ್ ಕ್ಲಬ್‌ನ ಪ್ರತಿಷ್ಠಿತ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಸ್ವೀಕರಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಡಿ.ಬಿ.ಬಸವರಾಜು
ದಾರಿ ತಪ್ಪಿಸುವ ಪತ್ರಕರ್ತರಿಗೆ ತರಬೇತಿ ಅಗತ್ಯ, ಜರ್ನಲಿಸ್ಟ್‌ಸ್ ಟ್ರೈನಿಂಗ್ ಕಾಲೇಜಿಗಾಗಿ ಒಂದು ಎಕರೆ ಘೋಷಿಸಿದ ಡಿಸಿಎಂ
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ ಒಂದು ಎಕರೆ ಜಾಗ ನೀಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು
ಬಯೋಕಾನ್ ಕಂಪನಿ ಉದ್ಯೋಗಿ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ
ಬೆಂಗಳೂರು: ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬನಶಂಕರಿಯ ಅನಂತ್ ಕುಮಾರ್(35) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನಂತ್
ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ನಗರದ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿರುವುದರಿಂದ ಪ್ರಕರಣದಲ್ಲಿ ಜೈಲು ಸೇರಿದ ನಾಲ್ಕು ತಿಂಗಳ
ಕೋಗಿಲು ವಿವಾದ: ಪಾಕಿಸ್ತಾನದ ಕ್ಯಾತೆಗೆ ಭಾರತ ತಿರುಗೇಟು
ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್ನಲ್ಲಿ 200ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಅಕ್ರಮ ಮನೆಗಳನ್ನು ಧ್ವಂಸ ಮಾಡಿದ ಪ್ರಕರಣ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಬೆಂಗಳೂರಿನ ಕೋಗಿಲು ಬಳಿ ಅಕ್ರಮ ವಲಸಿಗರ ಮನೆಗಳನ್ನು ನೆಲಸಮ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಪಕ್ಕದ
ಜಿಬಿಎ ಚುನಾವಣೆಗೆ ಈಗಿನಿಂದಲೇ ತಯಾರಿ: ಸಚಿವ ಬೈರತಿ ಸುರೇಶ್
ಬೆಂಗಳೂರು: ಮುಂಬರುವ ಜಿಬಿಎ ಚುನಾವಣೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲಾ 11 ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಕೋಗಿಲುನಲ್ಲಿ ಮನೆ ಕಳೆದುಕೊಂಡ ಕರ್ನಾಟಕದವರಿಗೆ ಮಾತ್ರ ಮನೆ: ಸಚಿವ ಜಮೀರ್ ಅಹ್ಮದ್
ಕೋಗಿಲು ಅಕ್ರಮ ಮನೆ ತೆರವು ಮತ್ತು ಪರ್ಯಾಯ ಮನೆ ಹಂಚಿಕೆ ವಿಚಾರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದು, ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಕೋಗಿಲು ಅಕ್ರಮ ಮನೆ ತೆರವು
ರಾಯಬಾಗದಲ್ಲಿ ಲಾರಿ ಪಲ್ಟಿ: ವಿದ್ಯಾರ್ಥಿ ಬಲಿ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಉರುಳಿದ ಪರಿಣಾಮವಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಹಾರೂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಚಿ ಕಡೆಯಿಂದ ಹಾರೂಗೇರಿ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ತಿರುವಿನಲ್ಲಿ ಶಾಲೆಗೆ
ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ದೇವಸ್ಥಾನಗಳಿಗೆ ಹರಿದು ಬಂದ ಭಕ್ತಸಾಗರ
ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ. ಅರಸೀಕೆರೆ




