kannada news
ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶ
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ
ಪಿಯು, ಡಿಗ್ರಿ ಮುಗಿಸಿದ ನಕಲಿ ವೈದ್ಯರಿಂದ ಸಿಸೇರಿಯನ್: ಮಹಿಳೆ ಸಾವು
ಉತ್ತರ ಪ್ರದೇಶದ ಲಕ್ನೋದ ಅಂಬೇಡ್ಕರ್ ನಗರದಲ್ಲಿ ಪಿಯುಸಿ ವಿದ್ಯಾರ್ಥಿ ಮತ್ತು ಬಿಎ ಪದವೀಧರ ಐದು ವರ್ಷಗಳಿಂದ ಅಕ್ರಮ ಆಸ್ಪತ್ರೆಯೊಂದರಲ್ಲಿ ವೈದ್ಯರಾಗಿದ್ದು, ಗರ್ಭಿಣಿಗೆ ಸಿಸೇರಿಯನ್ ಮಾಡಲು ಹೋಗಿ ಪ್ರಾಣ ಕಸಿದಿದ್ದಾರೆ. ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೆ-ಸೆಕ್ಷನ್
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಏಳು ಕಾರ್ಮಿಕರು ಸಜೀವ ದಹನ
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಭಿವಾಡಿ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಏಳು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಕಾರ್ಖಾನೆಯೊಳಗೆ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಘಟನೆ ನಡೆದಾಗ 25 ಕಾರ್ಮಿಕರು ಸ್ಥಳದಲ್ಲಿದ್ದರು ಎನ್ನಲಾಗಿದೆ. ಈ ಕಾರ್ಖಾನೆಯನ್ನು ವ್ಯಕ್ತಿಯೊಬ್ಬರು
ಚಿತ್ರದುರ್ಗದ ಶಾಲೆಯಲ್ಲಿ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಚಿತ್ರದುರ್ಗದ ಭರಮಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸತಿ ಶಾಲೆಯ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡವ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿಯವನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆತ 3ನೇ ಮಹಡಿಯಿಂದ
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ
ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿದೆ. ತೋಟದಲ್ಲಿ ಅವರು ನಡೆದುಕೊಂಡು ಹೋಗುತ್ತಿರುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕಾಡಾನೆಯ ಈ ದಾಳಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್
ರಾಜ್ಯದ ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ
ರಾಜ್ಯದಲ್ಲಿ ಹಲವು ನ್ಯಾಯಾಲಯಗಳಿಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಧಾರವಾಡ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಕ್ರಮ ಕೈಗೊಂಡಿವೆ. ಈ ಹಿಂದೆ
ಪೊಲೀಸ್ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್ ಖಾತೆ: ವಂಚನೆಗೆ ಯತ್ನ
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರು ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ವಂಚಿಸಲು ಪ್ರಯತ್ನ ನಡೆಸಿರುವ ಘಟನೆ ಬಹಿರಂಗಗೊಂಡಿದೆ. ಸೀಮಂತ್ ಕುಮಾರ್ ಸಿಂಗ್ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು
ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಇಂದಿನಿಂದ ಲಗೇಜ್ ದರ ಏರಿಕೆ
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಪರಿಷ್ಕರಿಸಲಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಡೀಸೆಲ್, ಸಿಬ್ಬಂದಿ ಹಾಗೂ ಇತರ ವೆಚ್ಚಗಳಲ್ಲಿ ತೀವ್ರ ಹೆಚ್ಚಳವಾಗಿರುವ ಹಿನ್ನೆಲೆ ನಿಗಮವು ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರವನ್ನು ಪರಿಷ್ಕರಿಸಿದೆ. ಈ ಹಿಂದೆ ಶೇ.15 ಬಸ್ ಪ್ರಯಾಣ
ಟಿವಿ ನೋಡೋದು ಕಮ್ಮಿ ಮಾಡು ಅಂದಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಬಾಲಕಿ ಸುಸೈಡ್
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಸರಿಕಟ್ಟೆ ಸಮೀಪದ ಹೊನ್ನಗುಂಡಿ ಗ್ರಾಮದಲ್ಲಿ ಟಿವಿ ನೋಡೋದನ್ನು ಕಮ್ಮಿ ಮಾಡು ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವೇಲ್ನಿಂದ ನೇಣು ಬಿಗಿದುಕೊಂಡು ಸುಪ್ರಿತಾ ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗುರುತಿಸಲಾಗಿದೆ. ಬಾಲಕಿ
ಕೊಳ್ಳೇಗಾಲದಲ್ಲಿ ಹುಲಿ ಮೃತದೇಹ ಪತ್ತೆ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಗುಂಡಾಲ್ ಅಣೆಕಟ್ಟು ಸಮೀಪ ಹುಲಿಯ ಮೃತದದೇಹ ಪತ್ತೆಯಾಗಿದೆ. ಮಲೆ ಮಹದೇಶ್ವರ ಸಂರಕ್ಷಿತ ಅರಣ್ಯದಲ್ಲಿ ಇತ್ತೀಚೆಗೆ ಒಟ್ಟು ಐದು ಹುಲಿಗಳು ಮೃತಪಟ್ಟಿದ್ದವು. ಈಗ ಹುಲಿಯ ಸಾವಿನ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ




