kannada news
ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಇಂದು ಸಂಜೆ ಪ್ರಮಾಣ ವಚನ
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು (ಜೂನ್ 3) ಸಂಜೆ 4 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ವ ಸಿದ್ಧತೆಗಳು ನಡೆದಿವೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಸರಳವಾಗಿ, ಶಿಸ್ತುಬದ್ಧವಾಗಿ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ಶಿವಕುಮಾರ್ ಅವರ ಕಟೌಟ್ ಹಾಗೂ ಬ್ಯಾನರ್‌ಗಳು ಕಂಗೊಳಿಸುತ್ತಿವೆ. ಇದೇ ಮೊದಲ ಬಾರಿಗೆ ಪೂರ್ವಾಭಿಮುಖವಾಗಿ ಲೋಕಭವನದ ವೇದಿಕೆ ಸಜ್ಜುಗೊಂಡಿದೆ. ಶಾಂತಿ ಮತ್ತು
ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ
ಇರಾನ್‌ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಬುಧವಾರ ಮುಂಜಾನೆ ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್‌ನ ಸಶಸ್ತ್ರ ಪಡೆಗಳು ಹೇಳಿಕೊಂಡಿದೆ, ಆದರೆ ಅಮೆರಿಕ ಸೇನೆಯು ಈ ಎಲ್ಲ ವರದಿಗಳನ್ನು ನಿರಾಕರಿಸಿದೆ.
ಸಾಲ ವಾಪಸ್ ಬರದೆ ಸಂಕಷ್ಟ, ನ್ಯಾಯ ಕೇಳಿದ್ರೆ ಪೊಲೀಸರಿಂದ ಬೆದರಿಕೆ: ಡಿವೈಎಸ್‌ಪಿ, ಪಿಎಸ್‌ಐ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಕೊಟ್ಟ ಸಾಲದ ಹಣ ವಾಪಸ್ ಬಾರದೆ ಸಂಕಷ್ಟ ಒಂದೆಡೆಯಾದರೆ, ಅತ್ತ ನ್ಯಾಯ ಕೇಳಲು ಹೋದಾಗ ಪೊಲೀಸರಿಂದಲೇ ಬೆದರಿಕೆ ಎದುರಿಸಿ ಮನನೊಂದ ವ್ಯಕ್ತಿಯೊಬ್ಬರು ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ ಹಾಗೂ ಪಿಎಸ್‌ಐ ಹೆಸರನ್ನುಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.
ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರ ಈಡೇರಿಸುವೆ: ಡಿಕೆ ಶಿವಕುಮಾರ್
ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಬದ್ಧನಾಗಿದ್ದೇನೆ, ಬಹಳಷ್ಟು ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರಗಳನ್ನು ಈಡೇರಿಸುತ್ತೇನೆ. ದಾರಿ ಅಷ್ಟು ಸುಲಭವಾಗಿಲ್ಲ. ಆದರೂ ನಿರ್ವಹಿಸಬೇಕು. ನನ್ನ ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ, ಸಮರ್ಪಣಾಭಾವದಿಂದ ಮಾಡುತ್ತೇನೆ ಎಂದು ನಿಯೋಜಿತ ಸಿಎಂ ಡಿಕೆ ಶಿವಕುಮಾರ್
ಬಾಲಕ ಕಳವು ಮಾಡಿದ್ದ 4.20 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ
ಮೊಬೈಲ್ ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಬಾಲಕನನ್ನು ಹೆಣ್ಣೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು 4.20 ಲಕ್ಷ ರೂ. ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ. 4 ದ್ವಿಚಕ್ರ ವಾಹನಗಳು, 7 ಮೊಬೈಲ್ ,9 ಗ್ರಾಂ ಚಿನ್ನಾಭರಣ ಸೇರಿ 4.20 ಲಕ್ಷ ಮೌಲ್ಯದ
ಸ್ಪೀಕರ್ ಸ್ಥಾನಕ್ಕೆ ಖಾದರ್ ನಾಳೆ ರಾಜೀನಾಮೆ? ಮಂತ್ರಿ ಆಗಲಿದ್ದಾರ?
ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಂತ್ರಿ ಆಗುವ ಎಲ್ಲ ಸಾಧ್ಯತೆ ಇವೆ ಎಂದು ಮೂಲಗಳು
ಆರು ತಿಂಗಳಲ್ಲಿ ವಿಧಾನಮಂಡಲ ಆಗಲಿದೆಯಂತೆ ಪೇಪರ್‌ಲೆಸ್
ರಾಜ್ಯ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಹಾಗೂ ವಿಧಾನಪರಿಷತ್ ಸಂಪೂರ್ಣ ಕಾಗದರಹಿತ ವ್ಯವಸ್ಥೆಗೆ ಪರಿವರ್ತನೆ ಆಗಲಿವೆ ಎಂದು ಸ್ಪೀಕರ್ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದ ವೇಳೆ ಸದಸ್ಯರಿಗೆ
ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ: ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ ಮೂರರಂದು ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆ ಹೆಚ್ಚಿನ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಸುಗಮ ಸಂಚಾರ ವ್ಯವಸ್ಥೆಗೊಳಿಸುವ ನಿಟ್ಟಿನಲ್ಲಿ
ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ
ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭಾ ಸ್ಥಾನವನ್ನೂ ನಿರಾಕರಿಸಿ ಪಕ್ಷ ತೊರೆದಿದ್ದಾರೆ. ಜೂನ್ 4 ಅಣ್ಣಾಮಲೈ ಹುಟ್ಟುಹಬ್ಬ ಇದ್ದು, ಅಂದೇ
ನೀರು ಅಕ್ರಮ ಸೋರಿಕೆ ತಡೆಗೆ ಎಐ, ರೋಬೊಟಿಕ್ ತಂತ್ರಜ್ಞಾನಗಳ ಮೂಲಕ BWSSB ಬ್ರೇಕ್
ನೀರಿನ ಕಳ್ಳತನ ಹಾಗೂ ನೀರು ಸೋರಿಕೆ ತಡೆಗೆ ಎಐ (AI) ಮತ್ತು ರೋಬೋಟಿಕ್ ತಂತ್ರಜ್ಞಾನದ ಅಳವಡಿಕೆಗೆ ಬೆಂಗಳೂರು ಜಲಮಂಡಳಿ ಮುಂದಾಗಿದೆ. ಬೆಂಗಳೂರು ನಗರದ ಭವಿಷ್ಯದ ನೀರಿನ ಸವಾಲುಗಳನ್ನು ಎದುರಿಸಲು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ.




