Menu

ಫೆ.15ರಂದು ಭಾರತ-ಪಾಕ್‌ ಕ್ರಿಕೆಟ್‌ ಪಂದ್ಯ ಯಾರೂ ವೀಕ್ಷಿಸಬೇಡಿ; ಪ್ರಮೋದ್‌ ಮುತಾಲಿಕ್‌

ಟಿ-20 ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನವನ್ನು ಫೆ. 15 ರಂದು ಎದುರಿಸುತ್ತಿದೆ. ಪೆಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಗೆ 26 ಜನ ಪ್ರಾಣ ತೆತ್ತಿದ್ದಾರೆ. ಅವರ ಮನೆಯವರ ಕಣ್ಣೀರು  ಇನ್ನೂ ಆರಿಲ್ಲ. ಹೀಗಿರುವಾಗ ಅವರ ವಿರುದ್ದ ಪಂದ್ಯ ಆಡುವುದು ಸರಿಯಲ್ಲ. ಇದು ಮೋಸದ ಆಟವಾಗಿದೆ. ದೇಶಾಭಿಮಾನ ಬಿಟ್ಟು ಹೆಣಗಳ ಮೇಲೆ ಕ್ರಿಕೆಟ್ ಆಡುವುದು ಸರಿಯಲ್ಲ. ಭಾರತೀಯರು ಫೆಬ್ರುವರಿ 15 ರಂದು ನಡೆಯುವ ಪಂದ್ಯವನ್ನು ಯಾರೂ ವೀಕ್ಷಿಸಬಾರದು ಎಂದು ಶ್ರೀರಾಮ್ ಸೇನೆ ರಾಷ್ಟ್ರೀಯ

ಬ್ಯಾಂಕಾಕ್‌ನಿಂದ ಕ್ಯಾಂಡಿಗಳಲ್ಲಿ ಬೆಂಗಳೂರಿಗೆ ಬಂತು ಡ್ರಗ್ಸ್‌

ಬೆಂಗಳೂರು ದೇವನಹಳ್ಳಿಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳುಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಕ್ಯಾಂಡಿ ಪ್ಯಾಕೆಟ್‌ಗಳಲಿ ಅಡಗಿಸಿಟ್ಟಿದ್ದ ಒಟ್ಟು 3.43 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದ

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆಗಳ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳಿಗೆ ಲೋಕಾಯುಕ್ತ ಏಕಕಾಲಕ್ಕೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬವರಿಗೆ ಸೇರಿದ ಮೈಸೂರಿನ ಐದು ಸ್ಥಳ, ಬೆಂಗಳೂರಿನ ಆರು ಕಡೆ ದಾಳಿ

ಕಾರ್ಮಿಕ ಸಂಘಟನೆಗಳಿಂದ ಇಂದು ಭಾರತ್‌ ಬಂದ್‌

ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಇಂದು (ಗುರುವಾರ) ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳ ರದ್ದು  ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ,

ಬಿಜೆಪಿಯ ಭೂಕಾಂತ್‌ ಸಚಿವ ಸ್ಥಾನಮಾನ ವಾಪಸ್‌ ಪಡೆದ ಸರ್ಕಾರ

ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್‌ಗೆ ನೀಡಲಾಗಿದ್ದ ರಾಜ್ಯ ಸಚಿವ ಸಂಪುಟದ ಸ್ಥಾನವಮಾನವನ್ನು ಸರ್ಕಾರ ವಾಪಸ್‌ ಪಡೆದಿದೆ. ಬಿಜೆಪಿ ನಾಯಕ ಭೂಕಾಂತ್‌ಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕಾರ್ಯಕರ್ತರು

ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಕಡ್ಡಾಯ

‘ವಂದೇ ಮಾತರಂ’ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆ ಹಾಡಬೇಕು ಅಥವಾ ನುಡಿಸಬೇಕು ಎಂದು ಹೊಸ ಮಾರ್ಗಸೂಚಿ ಹೊರಡಿಸಿದೆ. ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ್ದು, ಪದ್ಮ ಪ್ರಶಸ್ತಿ

ಗುತ್ತಿಗೆದಾರರಿಂದ ಲಂಚ: ಪಿಡಬ್ಲ್ಯುಡಿ ಎಂಜಿನಿಯರ್‌ ಲೋಕಾಯುಕ್ತ ಬಲೆಗೆ

ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಈ

ಕಾರಿನ ಇಎಂಐಗಾಗಿ ದೊಡ್ಡಮ್ಮ ಕೆಲಸಕ್ಕಿದ್ದ ಬೆಂಗಳೂರಿನ ಮನೆಯಲ್ಲೆ ಕಳವುಗೈದು ಅರೆಸ್ಟ್‌ ಆದ ಯುವಕ

ಕಾರಿನ ಇಎಂಐ ಕಟ್ಟಲು ಹಣಕ್ಕಾಗಿ ಯುವಕನೊಬ್ಬ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆಯಲ್ಲೇ ಕಳ್ಳತನ ಮಾಡಿ ಈಗ ಅರೆಸ್ಟ್‌ ಆಗಿದ್ದಾನೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿಯ ದೊಡ್ಡಮ್ಮ 25 ವರ್ಷಗಳಿಂದ ಕೆಲಸ

ಹಾವೇರಿಯ ಯುವಕನ ವಂಚಿಸಿ ಮದುವೆಯಾದ ಎರಡು ಮಕ್ಕಳ ತಾಯಿ

ಇಬ್ಬರು ಮಕ್ಕಳ ತಾಯಿಯಾಗಿರುವ ವಿವಾಹಿತ ಮಹಿಳೆಯೊಬ್ಬಳು ಈ ಬಗ್ಗೆ ಯಾವುದೇ ಸುಳಿವು ನೀಡದೆ ಯುವಕನಿಗೆ ಮೋಸ ಮಾಡಿ ಆತನನ್ನು ಮದುವೆಯಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ವಂಚಕ ಮಹಿಳೆ ಯುವಕನ ಮದುವೆಯಾಗಿದ್ದಲ್ಲದೆ 2.5 ಲಕ್ಷ ರೂಪಾಯಿ ವಧು

ರಾಜ್ಯ ಬಜೆಟ್‌ನಲ್ಲಿ ಮತ್ತಷ್ಟು ಗ್ಯಾರಂಟಿ ಸ್ಕೀಂ?

ರಾಜ್ಯದ ಮುಂಬರುವ ಹಣಕಾಸು ಸಾಲಿನ ಬಜೆಟ್‌ನಲ್ಲಿ ಒಂದಷ್ಟು ಗ್ರಾಮೀಣರಿಗೆ ಮತ್ತು ಕೆಲವಷ್ಟು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ವಾಸವಾಗಿರುವ ಪ್ರಜೆಗಳಿಗೆ ನೆರವಾಗುವಂತಹ ಜನಪ್ರಿಯ ಯೋಜನೆಗಳು ಆದ್ಯತೆ ಪಡೆದುಕೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಆಯ-ವ್ಯಯ ಮಂಡನೆಯ ದಿನವನ್ನು ಘೋಷಿಸುವುದಾಗಿ ಹೇಳಿದ್ದಾರೆ.