Thursday, November 13, 2025
Menu

9 ಅತ್ಯಾಚಾರಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಚೆನ್ನೈ: ಹಲವು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ತಮಿಳುನಾಡಿನ ಪೊಲಾಚ್ಚಿ ಪ್ರಕರಣದ ಎಲ್ಲಾ 9 ಆರೋಪಿಗಳಿಗೆ ಮದ್ರಾಸ್ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಆರ್.ನಂದಿನಿ ದೇವಿ ನೇತೃತ್ವದ ಪೀಠ, ಮಹಿಳೆಯರನ್ನು ಬ್ಲಾಕ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದೂ ಅಲ್ಲದೇ ಪದೇಪದೇ ಅತ್ಯಾಚಾರ ಎಸಗಿ ದೌರ್ಜನ್ಯ ಎಸಗಿದ ಪ್ರಕರಣದ ಎಲ್ಲಾ 9 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಶಬರಿರಾಜ್ ಅಲಿಯಾಸ್ ರಿಶ್ವಂತ್ (32),

ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ

ನವದೆಹಲಿ:  2025ನೇ ಸಾಲಿನ ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.88.39ರಷ್ಟು ಫಲಿತಾಂಶ ಹೊರಬಂದಿದೆ. ಮಂಗಳವಾರ ಬೆಳಿಗ್ಗೆ ಫಲಿತಾಂಶ ಪ್ರಕಟವಾಗಿದ್ದು, ಶೇ.5ರಷ್ಟು ಅಂಕದಿಂದ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ವಿಜಯವಾಡ ಶೇ.99.60 ಫಲಿತಾಂಶದೊಂದಿಗೆ ಇಡೀ ದೇಶದಲ್ಲೇ ಅಗ್ರಸ್ಥಾನ ಪಡೆದಿದೆ. ಸಿಬಿಎಸ್

ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!

ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ

ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ಪುಲಕೇಶಿನಗರ

8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ: ಸಿಎಂ

ಹೆಚ್.ಡಿ.ಕೋಟೆ: ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜಾತಿ-ಧರ್ಮದ

ಪಹಲ್ಗಾಮ್ ಸಂತ್ರಸ್ತರಿಗೆ ನ್ಯಾಯ ಕೊಡಿಸಿದ್ದೇವೆ: ಭಾರತೀಯ ಸೇನಾಧಿಕಾರಿಗಳು

ಪಾಕಿಸ್ತಾನದ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿ ಪೆಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನಾಧಿಕಾರಿಗಳು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇ 9ರಂದು ಆರಂಭಿಸಿದ ಪಾಕಿಸ್ತಾನದ ಮೇಲಿನ ಯುದ್ಧದ ವಿವರಗಳನ್ನು ನೀಡಿದ ಭಾರತೀಯ ಸೇನಾಧಿಕಾರಿಗಳು, ಪಾಕಿಸ್ತಾನದ ಪಿಎಲ್-15

ದೇಶದಲ್ಲಿ ಆಹಾರ ಧಾನ್ಯ ಕೊರತೆ ಬಗ್ಗೆ ಆತಂಕ ಬೇಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಇಲ್ಲ. ಈ ಬಗ್ಗೆ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಹಾರ ಧಾನ್ಯಗಳ ದಾಸ್ತಾನು

ಪಾಕಿಸ್ತಾನದ 8 ಸೇನಾ ನೆಲೆ ಧ್ವಂಸಗೊಳಿಸಿದ್ದೇವೆ: ಕರ್ನಲ್ ಸೋಫಿಯಾ ಖುರೇಷಿ

ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ

ಉಗ್ರರ ದಾಳಿಯನ್ನು ಯುದ್ಧವೆಂದು ಪರಿಗಣಿಸಲು ಕೇಂದ್ರ ಸರ್ಕಾರ ನಿರ್ಧಾರ

ಮುಂದಿನ ದಿನಗಳಲ್ಲಿ ದೇಶದಲ್ಲಿನ ಉಗ್ರರ ಚಟುವಟಿಕೆಗಳನ್ನು ಯುದ್ಧವೆಂದು ಪರಿಗಣಿಸಿ ಸೂಕ್ತ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ಉಂಟಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ

ರಾಜ್ಯದ ಪೊಲೀಸರ ರಜೆ ರದ್ದು: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದ ಸೂಚನೆ ಮೇರೆಗೆ ರಾಜ್ಯದ ಪೊಲೀಸರ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದಿಂದ ಸೂಚನೆ