kannada news
ಪತ್ನಿ ಸುಪರ್ದಿಗೆ ಮಕ್ಕಳ ನೀಡಲು ಕೋರ್ಟ್ ಆದೇಶ: ಮಕ್ಕಳ ಸಾಯಿಸಿ ತಾಯಿ ಜೊತೆ ವ್ಯಕ್ತಿ ಆತ್ಮಹತ್ಯೆ
ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶಿಸಿದ್ದಕ್ಕೆ ವ್ಯಕ್ತಿ ಎರಡು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ಬಳಿಕ ತಾಯಿ ಜೊತೆ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಮಗಳು ಹಿಮಾ(6), ಮಗ ಕಣ್ಣನ್‌ಗೆ(2) ವಿಷ ನೀಡಿದ ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದುಕೊಂಡಿದ್ದಾನೆ. ರಾಮಂತಳಿಯ ಸೆಂಟ್ರಲ್ ನಿವಾಸಿ ಕಲಾಧರನ್ ಹಾಗೂ ಪತ್ನಿ ಜೊತೆಗಿರಲಿಲ್ಲ. ಎರಡು ಮಕ್ಕಳು ಕಲಾಧರನ್ ಜೊತೆಗಿದ್ದರು. ವಿಚ್ಛೇದನ ಕೇಸ್ ವಿಚಾರಣೆ ನಡೆಸಿದ ಕೋರ್ಟ್
ಮಾರ್ಚ್‌ಗೆ ಕೋರಮಂಗಲ- ಸರ್ಜಾಪುರ ಬಫರ್ ರಸ್ತೆ ಕಾಮಗಾರಿ ಪೂರ್ಣ: ಡಿಸಿಎಂ
“ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ 5.50 ಕಿ.ಮೀ ಉದ್ದದ ಬಫರ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಜಕಾಲುವೆ ಪಕ್ಕದಲ್ಲಿ ಸಂಚಾರಿಯುಕ್ತ ಬಫರ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು
ಅಜ್ಮೀರ್ ದರ್ಗಾಗೆ ಪಿಎಂಒ ಚಾದರ್ ಅರ್ಪಣೆಗೆ ತಡೆ ಕೋರಿದ್ದ ಮನವಿ ನಿರಾಕರಿಸಿದ ಸುಪ್ರೀಂ
ಪ್ರಧಾನಮಂತ್ರಿಗಳ ಕಚೇರಿಯಿಂದ ಅಜ್ಮೀರ್ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಷ್ತಿ ಉರುಸ್ ವೇಳೆ ಚಾದರ್ ಸಮರ್ಪಣೆ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ತುರ್ತು ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ದರ್ಗಾವು ಪ್ರಾಚೀನ ಶಿವ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಎಂದು ಹಿಂದೂ
ಬಾಡಿಗೆ ತಾಯ್ತನಕ್ಕೆ ವೃದ್ಧ ದಂಪತಿ ಕೋರಿಕೆ: ಸ್ಪಂದಿಸಲು ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
ಇದ್ದ ಒಬ್ಬನೇ ಮಗನ ಕಳೆದುಕೊಂಡಿರುವ ವೃದ್ಧ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಕಾನೂನು ಅಡ್ಡಿಯಾಗುತ್ತಿರುವುದನ್ನು ಗಮನಿಸಿರುವ ಹೈಕೋರ್ಟ್,ಪ್ರಕರಣವನ್ನು ಕಾನೂನು ಅಡಿ ಅಲ್ಲ, ಮಾನವೀಯತೆಯಿಂದ ನೋಡಬೇಕಿದೆ, ಅರ್ಜಿದಾರರ ಮನವಿಗೆ ಸ್ಪಂದಿಸಲು ಸೂಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ರಾಯಚೂರಿನಲ್ಲಿ ಎಇಇ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ರಾಯಚೂರಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಂಧನೂರಿನಲ್ಲಿ ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಅವರಿಗೆ ಸೇರಿರುವ ರಾಯಚೂರು ನಗರದಲ್ಲಿನ ಎರಡು ಮನೆ ಸೇರಿ ಐದು ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ ಅಧಿಕ
ಟಿಟಿಡಿ ಮಾಜಿ ಅಧ್ಯಕ್ಷ, ಎಂಪಿಯಾಗಿದ್ದ ಆದಿಕೇಶವುಲು ನಾಯ್ಡು ಆಪ್ತ ಸಾವು: ಆದಿಕೇಶವುಲು ನಾಯ್ಡು ಮಗಳು, ಮಗನ ಬಂಧನ
ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯರಾಗಿದ್ದ ದಿ. ಆದಿಕೇಶವುಲು ನಾಯ್ಡು ಅವರ ಆಪ್ತ ಹಾಗೂ ಉದ್ಯಮಿ ರಘುನಾಥ್ ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಆದಿಕೇಶವುಲು ಅವರ ಮಗಳು ಕಲ್ಪಜ ಮತ್ತು ಮಗ ಶ್ರೀನಿವಾಸ್ ಅವರನ್ನು ಸಿಬಿಐ ಬಂಧಿಸಿದೆ.
ಚಿನ್ನಕ್ಕಾಗಿ ಅಜ್ಜಿಯ ಕೊಲೆಗೈದ ಮೊಮ್ಮಗ: ಪತ್ತೆ ಹಚ್ಚಿದ ನಾಯಿಗಳು
ಚಿನ್ನಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗನ ಕ್ರೌರ್ಯವನ್ನು ತನಿಖೆಯಲ್ಲಿ ಭಾಗವಹಿಸಿದ್ದ ಶ್ವಾನದಳದ ನಾಯಿಗಳು ಬಯಲು ಮಾಡಿವೆ. ಆಂಧ್ರದ ವಿಜಯನಗರ ಭೋಗಾಪುರಂ ಮಂಡಲದ ಮುಡಸಲಪೇಟೆ ವಿಮಾನ ನಿಲ್ದಾಣ ಕಾಲೊನಿಯಲ್ಲಿ ನಡೆದ ವೃದ್ಧ ಮಹಿಳೆಯ ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯಾಗಿರುವ ಮೊಮ್ಮಗನನ್ನು ಬಂಧಿಸಿದ್ದಾರೆ.
ಬಾಗಲೂರಿನಲ್ಲಿ ಕಲ್ಲು ಎತ್ತಿಹಾಕಿ ಪತ್ನಿಯ ಹತ್ಯೆ ಮಾಡಿ ಅಪಘಾತದ ಕಥೆ ಕಟ್ಟಿದ ಪತಿ ಅರೆಸ್ಟ್
ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಗಾನಹಳ್ಳಿ ಬಳಿ ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆ ಮಾಡಿ ಅಪಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಪ್ರಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಹತ್ಯೆ ನಡೆಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯಲಹಂಕದ ಬೊಮ್ಮಸಂದ್ರದ ನಿವಾಸಿ ಅನಂತ್ (64) ಎಂಬಾತ
ದ್ವೇಷ ಭಾಷಣ ತಡೆ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯ, ಬಿಜೆಪಿಯವರಿಂದ ಏಕೆ ವಿರೋಧ?
ದ್ವೇಷ ಭಾಷಣ ತಡೆ ಮಸೂದೆಯನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಈ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ . ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ
ಬಿಜೆಪಿ ಶಾಸಕ ಬೈರತಿ ಬಸವರಾಜು ವಿರುದ್ಧ ಲುಕೌಟ್ ನೋಟಿಸ್ ಜಾರಿ
ಬೆಂಗಳೂರು: ರೌಡ ಬಿಕ್ಕು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ




