kannada news
ಅನುಮತಿಯಿಲ್ಲದೆ ಖಾಸಗಿ ವೀಡಿಯೊ-ಪೋಟೊ ಪ್ರಸಾರ ಪ್ರಕರಣ ಮಾರ್ಗಸೂಚಿ
ಅನುಮತಿಯಿಲ್ಲದೆ ವ್ಯಕ್ತಿಗಳ ಖಾಸಗಿ ವೀಡಿಯೊ ಮತ್ತು ಫೋಟೊ ಪ್ರಕಟ ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ ವಿಳಂಬ ಅಥವಾ ನಿರಾಕರಣೆ ನಡೆದಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ, ಈ ಆದೇಶದಲ್ಲಿ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರೆ ಪ್ರಸಾರಕ್ಕೂ ಒಪ್ಪಿಗೆ ನೀಡಿದಂತೆ ಅಲ್ಲ ಎಂಬ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ರಾಜ್ಯದ 224 ಕ್ಷೇತ್ರ, ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ.
224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ., ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕಾರ್ಯಕ್ರಮ ನಡೆಸಲು ತಲಾ ಒಂದು ಲಕ್ಷ ರೂ. ಅನುದಾನ ನೀಡಲಾಗುವುದು. ಬೆಂಗಳೂರು ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ ಆಚರಿಸಲಾಗುವುದು, ಬಿಡಿಎ ವತಿಯಿಂದ 15
ಬೆಂಗಳೂರಿನ ರಸ್ತೆ ಮಾಡೋದು ರಾಕೆಟ್ ಸೈನ್ಸಾ: ಎಂಜಿನಿಯರ್‌ಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ
ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದು, ಜಿಬಿಎ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲ ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರಿನ ರಸ್ತೆ ಗುಂಡಿ ಹಾಗೂ ಕಸದ ವಿಚಾರವನ್ನು ಪ್ರಸ್ತಾಪಿಸಿ ಅಧಿಕಾರಿಗಲ ಕ್ರಿಯಾಶೀಲತೆ ಬಗ್ಗೆ
ಬಿಡದಿ ಟೌನ್‌ಶಿಪ್ ಕೂಸು ಹುಟ್ಟಿದ್ದು ಕುಮಾರಸ್ವಾಮಿ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್
ಬಿಡದಿ ಟೌನ್‌ಶಿಪ್ ಯೋಜನೆ ಕೂಸು ಹುಟ್ಟಿದ್ದು ಕುಮಾರ ಸ್ವಾಮಿ ಆಡಳಿತದ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ. ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್ ಅಶೋಕ, 2006ರಿಂದ ಅವರು ಇದರ ಜವಾಬ್ದಾರಿಯ ಭಾಗವಾಗಿದ್ದರು, ಕಂದಾಯ ಸಚಿವರೂ
ಸಿರಪ್ ಖರೀದಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ
ಮೆಡಿಕಲ್ ಶಾಪ್‌ಗಳಲ್ಲಿ ಯಾವುದೇ ಸಿರಪ್ ಖರೀದಿಸಬೇಕಾದರೆ ಇನ್ನು ಮುಂದೆ ಕಡ್ಡಾಯವಾಗಿ ವೈದ್ಯರ ಪ್ರಿಸ್ಕ್ರಿಪ್ಷನ್ ತೋರಿಸಲೇಬೇಕು. ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಔಷಧದ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯ ಉದ್ದೇಶದಿಂದ ವೈದ್ಯರ ಶಿಫಾರಸು
ವೈದ್ಯರು ಜನರ ನಂಬಿಕೆ ಉಳಿಸಿಕೊಳ್ಳಿ: ಸಿಎಂ ಡಿಕೆ ಶಿವಕುಮಾರ್
ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ
ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲ: ಆರ್ ಅಶೋಕ
ಕಮಿಷನ್ ಮಾಸ್ಟರ್ (CM) @DKShivakumar ಅವರೇ, “ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ” ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ?, ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನು ಶೇ. 30
ಅಪ್ರಾಪ್ತ ವಯಸ್ಕ ಸೋದರಿಯರ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಸೋದರಿಯರಿಬ್ಬರ ಮೇಲೆ ಬಾಬು ಎಂಬಾತ ಅತ್ಯಾಚಾರ ನಡೆಸಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ವಾರ್ಡ್ ನಂ.30 ಬಳಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಗೀತಾ ಐಸ್ ಫ್ಯಾಕ್ಟರಿಯಲ್ಲಿ
ಆನ್‌ಲೈನ್ ಬೆಟ್ಟಿಂಗ್ ಚಟ: ಪತ್ನಿಯ ಇರಿದು ಕೊಂದು ಪತಿ ಆತ್ಮಹತ್ಯೆಗೆ ಯತ್ನ
ಬೆಂಗಳೂರಿನ ಮಹದೇವಪುರ ಪ್ರದೇಶದಲ್ಲಿ ಗೃಹರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ಮಹಿಳೆಯನ್ನು ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ದಾಸನಾಗಿದ್ದ ಪತಿಯೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ಮಂಜುಳಾ ಕೊಲೆಯಾದ ಮಹಿಳೆ, ಆಕೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾದ್ದರು. ಮಂಜುಳಾ ಮತ್ತು
ಹಣಕ್ಕಾಗಿ ಪೋಷಕರಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಯುವಕ ಶವವಾಗಿ ಪತ್ತೆ
ಹಣಕ್ಕಾಗಿ ಪೋಷಕರೊಂದಿಗೆ ಜಗಳವಾಡಿದ ಯುವಕ ಬಳಿಕ ಮನೆ ಬಿಟ್ಟು ಹೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 27 ವರ್ಷದ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡವ. ಕೆಲವು ದಿನಗಳಿಂದ ಪ್ರದೀಪ್




