kannada news
27 ಸಾವಿರ ಕೋಟಿ ರೂ. ವಂಚನೆ ಕೇಸ್: ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ದಾಳಿ
ಸಾರ್ವಜನಿಕ ವಲಯದ ಬ್ಯಾಂಕ್ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಅನಿಲ್ ಅಂಬಾನಿಯ ರಿಲಯನ್ಸ್ ಕಮ್ಯುನಿಕೇಷನ್ಸ್ ವಿರುದ್ಧ ಸಿಬಿಐ ಕಾರ್ಯಾಚರಣೆ ತೀವ್ರಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ 27,337 ಕೋಟಿ ರೂ. ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮ್ಯುನಿಕೇಷನ್ಸ್ ಮಾಜಿ ಅಧಿಕಾರಿಗಳ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಹಗರಣಕ್ಕೆ ಸಂಬಂಧಿಸಿದ
ತಾಯಿಯ ನೋಡಿಕೊಳ್ಳಲಾಗದ ಮಗಳು ಆಸ್ತಿ ವಾಪಸ್ ನೀಡಬೇಕು: ಹೈಕೋರ್ಟ್ ಚಾಟಿ
ತಾಯಿಯನ್ನು ನೋಡಿಕೊಳ್ಳಲಾಗದ ಮಗಳು ತಾಯಿಯ ಆಸ್ತಿಯನ್ನು ಅವರಿಗೆ ವಾಪಸ್ ನೀಡುವಂತೆ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿ ಮತ್ತು ಉಪವಿಭಾಗಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ. ತಾಯಿಯಯನ್ನು ನೋಡಿಕೊಳ್ಳುವ ಕಾನೂನು, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ
ನಮ್ಮನ್ನು ಟೀಕಿಸದಿದ್ದರೆ ಕುಮಾರಸ್ವಾಮಿಗೆ ರಾಜಕೀಯ ಬದುಕು ಇಲ್ಲ: ಡಿಕೆ ಶಿವಕುಮಾರ್
“ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ಅವರು ಬಿಡದಿ
ಪೆಟ್ರೋಲ್ ಡೀಸೆಲ್ ಜೊತೆ ಸಿಎನ್‌ಜಿ ಬೆಲೆ ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ದೇಶಾದ್ಯಂತ ಸಿಎನ್‌ಜಿ (CNG) ದರ ಪ್ರತಿ ಕೆಜಿಗೆ ಎರಡು ರೂ. ಹೆಚ್ಚಳವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ದರ ಏರಿಕೆಯಾಗಿದೆ. ಜಾಗತಿಕ ಇಂಧನ
ನೀಟ್-ಯುಜಿ ಪರೀಕ್ಷೆ ಜೂನ್ 21ಕ್ಕೆ
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಜೂನ್ 21 ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ತಡರಾತ್ರಿ ಉನ್ನತ ಮಟ್ಟದ ತುರ್ತು ಸಭೆ
ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣ ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ, ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ. ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ
ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು
ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ
ನೀಟ್ ರದ್ದು: ಕಾಲಮಿತಿಯಲ್ಲಿ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ. ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ
ಉತ್ತರಪ್ರದೇಶದಲ್ಲಿ ಮಳೆ, ಬಿರುಗಾಳಿ, ಸಿಡಿಲಿಗೆ 89 ಜನ ಬಲಿ
ಉತ್ತರ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಬಿರುಗಾಳಿ, ಸಿಡಿಲಿಗೆ ಕನಿಷ್ಠ 89 ಜನ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿರುಗಾಳಿಯಿಂದ ಆದ ಅನಾಹುತಗಳಲ್ಲಿ ೫೩ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 114ಕ್ಕೂ ಹೆಚ್ಚು
ತೈವಾನ್ ಬಿಕ್ಕಟ್ಟು ಸರಿಯಾಗಿ ನಿರ್ವಹಿಸದಿದ್ದರೆ ಸಂಘರ್ಷ: ಟ್ರಂಪ್‌ಗೆ ಕ್ಸಿ ಜಿನ್‌ಪಿಂಗ್ ವಾರ್ನ್
ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸದಿದ್ದರೆ ಉಭಯ ದೇಶಗಳ ನಡುವೆ ನೇರ ಸಂಘರ್ಷ ಸಂಭವಿಸಬಹುದು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ನಡೆದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಮಾತನಾಡಿದ ಅವರು ತೈವಾನ್ ವಿಷಯವು




