kannada news
ಮುಂದಿನ ಜೂನ್ ಒಳಗೆ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ: ಡಿಕೆ ಶಿವಕುಮಾರ್
“2026ರ ಜೂನ್ ತಿಂಗಳ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಗೇಟ್ ಗಳನ್ನು ಬದಲಾವಣೆ ಕಾರ್ಯ ಪೂರ್ಣಗೊಳ್ಳಲಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು. ಕಾಂಗ್ರೆಸ್ ಸದಸ್ಯ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟು ಗೇಟ್ ಗಳ ಬದಲಾವಣೆಗಳ ಬಗ್ಗೆ
ಬಿಜೆಪಿ ವಿರೋಧದ ನಡುವೆಯೇ ದ್ವೇಷ ಭಾಷಣ ಅಪರಾಧಗಳ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಪ್ರತಿಪಕ್ಷ ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಕಲಾಪದಲ್ಲಿ ಅಂಗೀಕಾರಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಡನೆಯಾಗಿದ್ದ ವಿಧೇಯಕ ಕುರಿತು
6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ: ಸಚಿವ ಬೈರತಿ ಸುರೇಶ್
ಸುವರ್ಣಸೌಧ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ನಗರ ಯೋಜನೆಗಾಗಿ ಪ್ರತ್ಯೇಕ ಕಾಲೇಜು ಆರಂಭ: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ: “ನಮ್ಮಲ್ಲಿ ನಗರ ಯೋಜನೆ ರೂಪಿಸುತ್ತಿರುವವರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕಾಲೇಜು ಆರಂಭಿಸಲು ಮುಂದಾಗಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ವಿಧೇಯಕವನ್ನು ಕಂದಾಯ
ತಿರುಪತಿ ತಿರುಮಲ ದೇವಸ್ಥಾನಕ್ಕೆ 1.2 ಕೋಟಿ ರೂ. ಮೌಲ್ಯದ ಬ್ಲೇಡ್ ದಾನ ಮಾಡಿದ ಉದ್ಯಮಿ
ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಕ್ಷೌರ ವಿಧಿವಿಧಾನಗಳಿಗಾಗಿ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ಗಳನ್ನು ದಾನ ಮಾಡಿದ್ದಾರೆ. ಉದ್ಯಮಿ ಬಿ. ಶ್ರೀಧರ್ ಕಲ್ಯಾಣಕಟ್ಟೆಗಳ ವಾರ್ಷಿಕ ಅಗತ್ಯವನ್ನು ಪೂರೈಸಲು ಭಾರೀ ಪ್ರಮಾಣದ ಬ್ಲೇಡ್‌ಗಳನ್ನು ದಾನವಾಗಿ ನೀಡಿದ್ದಾರೆ. ಹೈದರಾಬಾದ್‌ನ ಉದ್ಯಮಿ ಬಿ.
ವಿಧಾನ ಪರಿಷತ್ತಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಅನುಮೋದನೆ
ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರ ರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2025ಕ್ಕೆ (2ನೇ ತಿದ್ದುಪಡಿ) ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ)
“ನೀವು ಕರಾವಳಿಯವರು ಬೆಂಕಿ ಹಚ್ಚುವವರು” ಸದನದಲ್ಲಿ ಕಿಚ್ಚು ಹೊತ್ತಿಸಿದ ಸಚಿವ ಬೈರತಿ
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು “ನೀವು ಕರಾವಳಿಯವರು ಬೆಂಕಿ ಹಚ್ಚೋರು” ಎಂದು ನೀಡಿದ ಹೇಳಿಕೆ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ
ವಿಪಕ್ಷಗಳ ಆಕ್ರೋಶದ ನಡುವೆ ಜಿ ರಾಮ್ ಜಿ ಮಸೂದೆ ಲೋಕಸಭೆಯಲ್ಲಿ ಅನುಮೋದನೆ
ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ರೂಪಿಸಿದ್ದ ಜಿ ರಾಮ್ ಜಿ ಮಸೂದೆ ಭಾರೀ ಗದ್ಧಲಗಳ ನಡುವೆ ಲೋಕಸಭೆಯಲ್ಲಿ ಅನುಮೋದನೆ ಪಡೆದಿದೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಸೂದೆಯನ್ನು ಪುನರ್ ಪರಿಶೀಲನಾ ಸಮಿತಿ
ಡೆತ್‌ನೋಟ್‌ನಲ್ಲಿ ಸಿಕ್ತು ಧಾರವಾಡದ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆಗೆ ಕಾರಣ
ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಆಕೆ ಬರೆದಿಟ್ಟ ಡೆತ್‌ನೋಟ್‌ನಲ್ಲಿ ಸುಸೈಡ್ ಮಾಡಿಕೊಳ್ಳಲು ಕಾರಣ ಏನು ಎಂಬುದು ಪತ್ತೆಯಾಗಿದೆ. ಸರ್ಕಾರಿ ಹುದ್ದೆಗಳ
ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ
“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ




