Menu

ಪತ್ನಿಗೆ ಡಿವೋರ್ಸ್‌ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್‌ನ ಕೊಲೆಗೈದು ವ್ಯಕ್ತಿ ಸುಸೈಡ್‌

ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್‌ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ ಬಯಲಾಗಿದೆ. ರಾಮಾಂಜಿನಪ್ಪ ಎಂಬಾತ ಪ್ರಿಯತಮೆ ಸುಜಾತಳನ್ನು (35) ಕಾರಿನಲ್ಲಿ ಕೊಲೆ ಮಾಡಿ ಪೆಟ್ರೋಲ್‌ ಸುರಿದು ಬೆಂಕಿಯಿಟ್ಟಿದ್ದಾನೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಜಾತಾ ದೇವನಹಳ್ಳಿಯವರಾಗಿದ್ದು, ರಾಮಾಂಜಿನಪ್ಪ

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ನೀರು ಪಾಲು

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ

ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ

“ಶೃಂಗೇರಿ ಮರು ಎಣಿಕೆ ಫಲಿತಾಂಶ: ಬಿಜೆಪಿಯಲ್ಲಿ ಇಷ್ಟರ ಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ಎಣಿಸಿರಲಿಲ್ಲ”

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ.

ಕೇರಳದಲ್ಲಿ ಅಧಿಕಾರ ನಿರೀಕ್ಷಿತ , ತಮಿಳುನಾಡಲ್ಲಿ ಅಚ್ಚರಿ ಫಲಿತಾಂಶ: ಡಿಕೆ ಶಿವಕುಮಾರ್

“ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು.

ಪಂಚರಾಜ್ಯ ಚುನಾವಣೆ ಫಲಿತಾಂಶ: ಕೇರಳದಲ್ಲಿ ಯುಡಿಎಫ್‌, ಬಂಗಾಳದಲ್ಲಿ ಬಿಜೆಪಿ, ತಮಿಳ್ನಾಡಲ್ಲಿ ಟಿವಿಕೆ ಜಯಭೇರಿ

ಪಶ್ಚಿಮ ಬಂಗಾಳ, ಕೇರಳ, ತಮಿಳ್ನಾಡು, ಅಸ್ಸಾಂ, ಪುದುಚೇರಿಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 140 ಸದಸ್ಯರ ಬಲವನ್ನು

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು

ಹೆಚ್​​.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲು ಕಂಡಿದ್ದಾರೆ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ

ಕೆಸಿ ರೆಡ್ಡಿ ಸಮರ್ಥ, ಪ್ರಾಮಾಣಿಕ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಶ್ರೀ ದಿವಂಗತ ಕೆ.ಸಿ. ರೆಡ್ಡಿ ಯವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ

ಶಾಸಕ ಬೈರತಿ ಬಸವರಾಜ್‌ ಬೆಂಬಲಿಗರಿಂದ ಹಲ್ಲೆ, ಬೆದರಿಕೆ: ಎಎಪಿ ನಾಯಕಿ ದೂರು

ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನಲ್ಲಿ ಹೊರ ಬಂದಿರುವ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ಸತ್ಯವಾಣಿ ದೂರು

ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೇ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ