Menu

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು, ಕೂಲಿಕಾರ್ಮಿಕರ ಮಕ್ಕಳನ್ನು ಯಾವ ಹೆಣ್ಮಕ್ಕಳು ಮದುವೆ ಆಗಲು ಒಪ್ಪುತ್ತಿಲ್ಲ. ಹೆಣ್ಮಕ್ಕಳೆಲ್ಲರೂ ಸರ್ಕಾರಿ ನೌಕರರು, ನಗರಗಳಲ್ಲಿರುವ ಗಂಡು ಮಕ್ಕಳನ್ನೇ ಮದುವೆಯಾಗಲು ಬಯಸುತ್ತಿದ್ದಾರೆ. ಹೀಗಾಗಿ ಗಂಡುಮಕ್ಕಳ ಮದುವೆ ಸಮಸ್ಯೆಯಾಗಿ ಪರಿಣಮಿಸಿದೆ.

“ಕಲೆಕ್ಷನ್ ಕಿಂಗ್ ವಿಜಯೇಂದ್ರ” ತಂದೆ ಯಡಿಯೂರಪ್ಪ ಹೆಸರು ಕೆಡಿಸಿದವರು: ಡಿಕೆ ಶಿವಕುಮಾರ್‌

“ಕಲೆಕ್ಷನ್ ಕಿಂಗ್ ” ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಮೊದಲು ಅಸೆಂಬ್ಲಿ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಮಾತನಾಡುವುದಲ್ಲ,  ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನು ಮರೆಯ ಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ

ಧರ್ಮಸ್ಥಳ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ನಡೆಯುತತಿರುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. 2026ರ

ಹಣವಿದ್ದವರ ಸ್ನೇಹ, ಸೆಕ್ಸ್‌, ಬ್ಲ್ಯಾಕ್‌ಮೇಲ್‌: ಪ್ರೀತ್ಸೆಂದು ಇನ್ಸ್​ಪೆಕ್ಟರ್‌ಗೆ ಕಾಡಿದ ವನಜಾಳ ಜೀವನ

ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಸತೀಶ್ ಬಳಿ ತನ್ನನ್ನು ಪ್ರೀತಿಸು ಎಂದು ಪೀಡಿಸಿ ಬ್ಲ್ಯಾಕ್‌ಮೇಲ್‌ಗೆ ಯತ್ನಿಸಿದ ವನಜಾಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಹಲವು ಆತಂಕಕಾರಿ ಮಾಹಿತಿಗಳು ಹೊರ ಬಂದಿವೆ. ಇನ್ಸ್​ಪೆಕ್ಟರ್ ಸತೀಶ್ ದಾಖಲಿಸಿದ್ದ ಎಫ್​ಐಆರ್ ಆಧರಿಸಿ ಆಕೆಯನ್ನು ಪೊಲೀಸರು

ಸಚಿವೆ ಹೆಬ್ಬಾಳ್ಕರ್‌ ಮಗನ ಸಕ್ಕರೆ ಕಾರ್ಖಾನೆಗೆ ಯಂತ್ರ ತರುವಾಗ ವಿದ್ಯುತ್‌ ದುರಂತಕ್ಕೆ ಯುವಕ ಬಲಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಗ ಮೃಣಾಲ್ ಒಡೆತನದ ಸಕ್ಕರೆ ಕಾರ್ಖಾನೆಗೆ ಕಾಂಕ್ರೀಟ್ ಮಶಿನ್ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ  ಪ್ರಾಣ  ಕಳೆದುಕೊಂಡ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಮೃತ

ಕುಂದಾಪುರ ಇಎಸ್‌ಐ ಆಸ್ಪತ್ರೆ ವೈದ್ಯರ ನೇಮಕಕ್ಕೆ ಕ್ರಮ: ಸಂತೋಷ್‌ ಲಾಡ್‌

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್‌  ಭರವಸೆ ನೀಡಿದರು.  ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ

ರಾಜ್ಯದಲ್ಲಿ  ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು, ಕೈದಿಗಳ ಕೈಯಲ್ಲಿ ಫೋನ್‌, ಡ್ರಗ್ಸ್‌: ಆರ್‌ ಅಶೋಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್‌ ಬಂದಿದೆ. ಡ್ರಗ್ಸ್‌ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ   ವಿಧಾನಸಭೆಯಲ್ಲಿ  ಕಾನೂನು ಸುವ್ಯವಸ್ಥೆ ಕುರಿತು

ಬೆಳೆ ಸಮೀಕ್ಷೆ ವ್ಯತ್ಯಾಸ, ಆಕ್ಷೇಪ ಸಲ್ಲಿಸಲು ರೈತರಿಗೆ ಅವಕಾಶ: ಕೃಷಿ ಸಚಿವ ಚಲುವರಾಯಸ್ವಾಮಿ

ಬೆಳಗಾವಿ, ಸುವರ್ಣ ವಿಧಾನಸೌಧ: ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆ್ಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ

ರಾಜೀನಾಮೆ ಕೊಡುವವರು ಒಮ್ಮೆ ಕೈ ಎತ್ತಿ ಎಂದ ಸ್ಪೀಕರ್‌ ಖಾದರ್‌: ಎಲ್ಲರೂ ಗಪ್ ಚುಪ್!

ಬೆಳಗಾವಿ: ಚುನಾವಣೆ ಎದುರಿಸಲು ಯಾರು ಯಾರು ರಾಜೀನಾಮೆ ನೀಡ್ತೀರಿ ಒಮ್ಮೆ ಕೈ ಎತ್ತಿ, ಇಲ್ಲವೇ ರಾಜೀನಾಮೆ ಪತ್ರ ಕೊಡಿ, ಅಂಗೀಕಾರ ಮಾಡ್ತೇನಿ ಎಂದು ಬುಧವಾರ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್‌ ಯು.ಟಿ. ಖಾದರ್‌  ಸ್ವಾರಸ್ಯಕರವಾಗಿ ಹೇಳಿದ ಘಟನೆ ನಡೆಯಿತು. ಬಿಜೆಪಿ ನಾಯಕರು