Menu

ಗೃಹ ಖಾತೆ ಒತ್ತುವರಿ: ಡಿಕೆಶಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿರಿಯರಾದ ಡಾ. ಜಿ. ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ತಮ್ಮ ಅನುಭವದ ಬಗ್ಗೆ ಮಾತನಾಡಿರುವ ಬಗ್ಗೆಯೂ ತಿರುಗೇಟು ನೋಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ

ಜಿಬಿಎ 5 ಪಾಲಿಕೆ ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ, ಮಹಿಳೆಯರಿಗೆ ಶೇ.50 ಮೀಸಲು: ಸರ್ಕಾರದಿಂದ ಕರಡು ಅಧಿಸೂಚನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ಜನಸಂಖ್ಯೆ ಆಧಾರದಲ್ಲಿ ಮೇಲೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಶೇ.50 ಮೀಸಲಾತಿ ನೀಡಲಾಗಿದೆ. ನಗರ

ಆಡಳಿತ ಮಂಡಳಿ ಕಿರುಕುಳ ಆರೋಪ: ಆನೇಕಲ್‌ ಡೆಂಟಲ್‌ ಕಾಲೇಜ್‌ ಸ್ಟುಡೆಂಟ್‌ ಸುಸೈಡ್‌

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಶಸ್ವಿನಿ (23) ಮೃತ ವಿದ್ಯಾರ್ಥಿನಿ. ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಆರೋಪ ಕೇಳಿಬಂದಿದೆ. ಮೃತ ವಿದ್ಯಾರ್ಥಿನಿಯ ಸ್ನೇಹಿತರು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಇಂದಿನಿಂದ ಆನ್‌ಲೈನ್‌ನಲ್ಲೇ ಟಿಕೆಟ್‌

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಟಿಕೆಟ್‌ಗಳ ಆಫ್‌ಲೈನ್ ಮಾರಾಟ ನಿಲ್ಲಿಸಲಾಗುವುದು, ಇಂದಿನಿಂದ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಟಿಟಿಡಿ ತಿಳಿಸಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಬುಕಿಂಗ್ ಮಾಡಬಹುದು. ಈ ವ್ಯವಸ್ಥೆಯು 1 ತಿಂಗಳ ಪ್ರಾಯೋಗಿಕ ಅವಧಿಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದೆ. ಈ

ಶಿವಮೊಗ್ಗ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಕುಸಿದು ಸಾವು

ಶಿವಮೊಗ್ಗದ ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್‌ನಲ್ಲಿ ಈ ದುರಂತ ನಡೆದಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್

ಮಹಿಳೆ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್‌

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಸಿಎಂ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಘಟನೆಯ ಕುರಿತು ಸಿಐಡಿ ತನಿಖೆ ಮಾಡಿ ಸರ್ಕಾರಕ್ಕೆ

ಮನರೇಗಾ ಬಗ್ಗೆ ಸಚಿವ ಪ್ರಹ್ಲಾದ್ ಜೋಷಿ ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ 

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸವಾಲೆಸೆದರು.

ಹಣಕ್ಕಾಗಿ ಹನಿಟ್ರ್ಯಾಪ್, ದೌರ್ಜನ್ಯ ವೀಡಿಯೊ ವೈರಲ್‌: ವಿವಸ್ತ್ರ ಪ್ರಕರಣದ ಬಿಜೆಪಿ ಕಾರ್ಯಕರ್ತೆಯ ಮತ್ತೊಂದು ಮುಖ

ಇತ್ತೀಚೆಗೆ  ಹುಬ್ಬಳ್ಳಿ  ಪೊಲೀಸರು ಬಂಧಿಸುವಾಗ  ವಿವಸ್ತ್ರಗೊಳಿಸಿರುವ ಆರೋಪ ಪ್ರಕರಣದಲ್ಲಿ ಸುದ್ದಿಯಾಗಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಎಂಬಾಕೆಗೆ ಸಂಬಂಧಿಸಿದ ಹಳೆಯ ವೀಡಿಯೊವೊಂದು ವೈರಲ್‌ ಆಗಿದೆ. ಆಕೆಯ ನಿಜವಾದ ಬಣ್ಣ  ಬಯಲುಗೊಳಿಸುತ್ತಿದೆ. ಸುಜಾತಾ ಹಣಕ್ಕಾಗಿ ಹನಿಟ್ರ್ಯಾಪ್ ಮಾಡುವ ದಂಧೆ ಮಾಡುತ್ತಿದ್ದು, ಸಂತ್ರಸ್ತ ಪುರುಷರ

ಇಡಿ ಮೇಲೆ ಮಮತಾ ರೇಡ್‌: ದಾಳಿ ವೇಳೆ ನುಗ್ಗಿ “ಐಪ್ಯಾಕ್‌” ಕಡತಗಳನ್ನು ಹೊತ್ತೊಯ್ದ ದೀದಿ

ಚುನಾವಣಾ ತಂತ್ರಗಾರಿಕೆ ಸಂಸ್ಥೆ ‘ಐ ಪ್ಯಾಕ್‌’ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತಾದಲ್ಲಿರುವ ಐಪ್ಯಾಕ್‌ ಮುಖ್ಯಸ್ಥನ ಮನೆಯ ಮೇಲೆ ದಾಳಿ ನಡೆದಾಗ ಅಲ್ಲಿಗೆ ನುಗ್ಗಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಾಖಲೆಗಳನ್ನು ಎತ್ತಿಕೊಂಡು

ರಾಜ್ಯದ ಕೆರೆಗಳ ಒಟ್ಟು ಸಂಖ್ಯೆ ಅಂತಿಮಗೊಳಿಸಿ 30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಿ: ಸಚಿವ  ಭೋಸರಾಜು

ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು  ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ