Tuesday, September 29, 2026
Menu

ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್: ಸತೀಶ್‌ ಜಾರಕಿಹೊಳಿ ವಿರುದ್ಧ ಮತ್ತೊಂದು ಆರೋಪ

ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದ್ದು, ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್ ಪಡೆದಿರುವ ಆರೋಪವೂ ಕೇಳಿಬಂದಿದೆ.  ಜಾರಕಿಹೊಳಿ ನಿವಾಸದಲ್ಲಿ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಆ ದಾಖಲೆಗಳನ್ನು ಪರಿಶೀಲಿಸಲು ಇಡಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಪಿಡಬ್ಲ್ಯುಡಿ ಇಲಾಖೆಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿರುವ ಆರೋಪಗಳ ತನಿಖೆ ಜೊತೆ ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್ ಪಡೆದಿರುವ ಆರೋಪ ಸಂಬಂಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸುವಂತೆ

ಮದುವೆಯಾಗೆಂದು ಒತ್ತಾಯಿಸಿದ ಪ್ರೇಯಸಿಯ ಕೊಲೆ

ಮದುವೆಯಾಗುವಂತೆ ಒತ್ತಾಯಿಸಿದ ಪ್ರೇಯಸಿಯನ್ನು ವ್ಯಕ್ತಿ ಕೊಲೆ ಮಾಡಿರುವ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದ್ದು, ಮೂರು ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಪ್ರೇಯಸಿಯನ್ನು ಕೊಲೆ ಮಾಡಿರುವ ಆರೋಪಿಯು ಆಕೆಯ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣ

ಕಾಂಗ್ರೆಸ್‌ ಒಳಜಗಳ, ಕುರ್ಚಿ ಕಾಳಗ ಮತ್ತೊಮ್ಮೆ ಜಗಜ್ಜಾಹೀರು: ಆರ್‌ ಅಶೋಕ

ಇಡಿ ಗೆ  ದೂರು ಕೊಟ್ಟವರು ನಮ್ಮ ಪಕ್ಷದವರೋ ಅಥವಾ ಬೇರೆಯವರೋ ಅಂತ ಹುಡುಕುತ್ತಿದ್ದೇನೆ, ನನ್ನನ್ನು ರಾಜಕೀಯವಾಗಿ ಕುಗ್ಗಿಸುವ ಹುನ್ನಾರ ಇದಾಗಿದೆ ಎನ್ನುವ ಸಚಿವ @JarkiholiSatish ಅವರ ಹೇಳಿಕೆ @INCKarnataka ಪಕ್ಷದೊಳಗಿನ ಆಂತರಿಕ ಕಚ್ಚಾಟ ಮತ್ತು ಒಳ ಬೇಗುದಿಯನ್ನ ಮತ್ತೊಮ್ಮೆ ಬಟಾಬಯಲು ಮಾಡಿದೆ

ಗಣೇಶ ಚತುರ್ಥಿ: ಮಾಂಸ ಮಾರಾಟ ನಿಷೇಧಿಸಿ ಜಿಬಿಎ ಆದೇಶ

ಗಣೇಶ ಚತುರ್ಥಿ ಹಿನ್ನೆಲೆ ಸೆಪ್ಟೆಂಬರ್ 14 ಸೋಮವಾರ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಬಿಎ ಆದೇಶಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಜಿಬಿಎ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ

ಪಾರ್ಶ್ವವಾಯು ಪೀಡಿತ ವ್ಯಕ್ತಿಯ ಕೊಲೆಗೈದ ಪತ್ನಿ, ಪ್ರಿಯಕರ, ಅತ್ತೆ

ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದದಿದ ವ್ಯಕ್ತಿಯನ್ನು ಪತ್ನಿ, ಆಕೆಯ ಪ್ರಿಯಕರ ಮತ್ತು ಅತ್ತೆ ಸೇರಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಿತ್ತಗನೂರಿನ ಯಲ್ಲಪ್ಪ ಗಾರ್ಡನ್‌ನಲ್ಲಿ ನಡೆದಿದೆ. ಮೂವರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಬಾರಕ್ (40) ಕೊಲೆಯಾದ ವ್ಯಕ್ತಿ, ಎರಡು ವರ್ಷದಿಂದ ಪಾರ್ಶ್ವವಾಯುಪೀಡಿತರಾಗಿ

ಸುಂಟಿಕೊಪ್ಪದದಲ್ಲಿ ಬಸ್‌ ಡಿಕ್ಕಿ ಹೊಡೆದು ಬಾಲಕಿ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಚೆಸ್ಕಾಂ ಕಚೇರಿ ಸಮೀಪ ನಡೆದಿದೆ. ಅಸ್ಸಾಂನ  ಸಿರಾಜು ರೆಹಮಾನ್ ಮತ್ತು ಜಹನಾರ್ ದಂಪತಿ ಕೂಲಿ ಕೆಲಸಕ್ಕಾಗಿ ಸುಂಟಿಕೊಪ್ಪಕ್ಕೆ ಬಂದು ಹೊಸ ಬಡಾವಣೆಯಲ್ಲಿ ನೆಲೆಸಿದ್ದರು.

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ: ಸಿಎಂ ಡಿಕೆ ಶಿವಕುಮಾರ್

ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ. ಜಿ.

ಜೈಲಿನಲ್ಲಿ ಪ್ರಜ್ವಲ್‌ಗೆ ಮೊಬೈಲ್‌: ಏಳು ಮಂದಿ ವಿರುದ್ಧ ಪ್ರಕರಣ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಬೆಂಗಳೂರು ಕೇಂದ್ರ ಕಾರಾಗೃಹ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮೊಬೈಲ್‌ ಬಳಸುವುದಕ್ಕೆ ಎಲ್ಲ ರೀತಿಯ ನೆರವು ನೀಡಿದ್ದ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದ

ಕಸ್ತೂರಿರಂಗನ್ ವರದಿ: ರೈತರ ಹಿತಕ್ಕೆ ಆದ್ಯತೆ ಎಂದ ಸಿಎಂ ಡಿ‌ಕೆ ಶಿವಕುಮಾರ್

ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು ಸೆಪ್ಟೆಂಬರ್‌ 21 ರಿಂದ 23 ರ ವರೆಗೆ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಅರಣ್ಯ ಭವನದಲ್ಲಿ  ಅವರು

ಸಿಎಂ ಶಿವಕುಮಾರ್‌  ರಿಯಲ್‌ ಎಸ್ಟೇಟ್‌ ಏಜೆಂಟ್‌, ನೂರು ದಿನಗಳಲ್ಲಿ ಏನೂ ಸಾಧನೆ ಇಲ್ಲ: ಆರ್‌ ಅಶೋಕ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಎಲ್ಲರ ಕಣ್ಣಲ್ಲಿ ರಿಯಲ್‌ ಎಸ್ಟೇಟ್‌ ಏಜೆಂಟ್‌, ಸರ್ಕಾರದಿಂದ ಯಾವುದೇ ಅಭಿವೃದ್ಧಿ ನಡೆದಿಲ್ಲ. ಆದರೂ ನೂರು ದಿನದ ಸಾಧನೆ ಎಂದು ಸಂಭ್ರಮಾಚರಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಕಾಂಗ್ರೆಸ್ ಸರ್ಕಾರ