kannada news
ಬೆಳಗಾವಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: 3 ಸಾವು
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಅಕ್ಷಯ ತೋಪಡೆ (45), ದೀಪಕ್ ಮುನವಳ್ಳಿ (31), ಸುದರ್ಶನ ಬನೋಶಿ (25) ಮೃತಪಟ್ಟ ದುರ್ದೈವಿಗಳು. ಬುಧವಾರ ಮಧ್ಯಾಹ್ನ ಕಾರ್ಖಾನೆಯಲ್ಲಿ ಉತ್ಪಾದನಾ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಆವರಣವೆಲ್ಲ ಹೊಗೆಯಿಂದ
ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ
ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ
ಅರಸು ಆಡಳಿತಕ್ಕೆ ಸಿದ್ದರಾಮಯ್ಯ ಹೋಲಿಕೆ ಬೇಡ: ಯಡಿಯೂರಪ್ಪ ಕಿಡಿ
ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು
ಗಾಂಧೀಜಿಗೆ ಅಪಮಾನ ಮಾಡಿದ ಕಾಂಗ್ರೆಸ್: ಗೋವಿಂದ ಕಾರಜೋಳ
ಬೆಂಗಳೂರು: ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡಿ ಖಜಾನೆಯಿಂದ ಹಣ ಎತ್ತಿಕೊಂಡು ಹೋಗುತ್ತಿದ್ದರು. ಅದು ತಪ್ಪಲಿದೆ ಎಂದರು.
ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು?
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವಾಗ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಪ್ರಕರಣ ಟ್ವಿಸ್ಟ್ ಲಭಿಸಿದ್ದು, ತಾನೇ ಬಟ್ಟೆ ಬಿಚ್ಚಿಕೊಂಡು ನಮ್ಮ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ
ಮಸೀದಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷನ ಇರಿದು ಹತ್ಯೆ
ಮಸೀದಿಯಲ್ಲಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಕೋಲಾ ಜಿಲ್ಲೆಯ ಅಕೋಟ್ ತಾಲೂಕಿನ ಮೊಹಲಾ ಗ್ರಾಮದ ಮಸೀದಿಯಲ್ಲಿ ಹಿದಾಯತುಲ್ಲಾ ಪಟೇಲ್ ನಮಾಜ್ ಮುಗಿಸಿ ಮರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಮಧ್ಯಾಹ್ನ 1.30ರ
ಖಾಸಗಿ ಟ್ಯಾಕ್ಸಿಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಸಂಸದ ಡಾ.ಕೆ.ಸುಧಾಕರ್ ಸೂಚನೆ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ: ಮುಖ್ಯಮಂತ್ರಿ ಪರ ಬಸವರಾಜ ರಾಯರೆಡ್ಡಿ ಬ್ಯಾಟಿಂಗ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಐದು ವರ್ಷ ಇರುತ್ತಾರೆ. ಎರಡುವರೆ ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಮಾಧ್ಯಮ
ಕ್ವಾಂಟಮ್ ತಂತ್ರಜ್ಞಾನ, ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಡಿಸಿಎಂ ಒಲವು: ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು: ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ




