kannada news
ಕಲ್ಪನೆಗೂ ಮೀರಿದ ಶಿಕ್ಷೆ ಕೊಡುವ ಸಮಯ ಬಂದಿದೆ: ಪ್ರಧಾನಿ ಮೋದಿ ಗುಡುಗು
ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ದಾಳಿಗೆ ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಗುರುವಾರ ಅವರು ದಾಳಿಕೋರರಿಗೆ ನೇರವಾಗಿ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ
ಐಸ್ ಕ್ರೀಮ್ ತಿನ್ನಲು ಹೋಗಿ ಉಳಿಸಿಕೊಂಡ ಜೀವ
ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರ ಬಡಾವಣೆಯ ನಿನ್ಯೂ ತಿಪ್ಪಸಂದ್ರ ಬಡಾವಣೆಯ ನಿವಾಸಿ ಸುಮನಾ ಭಟ್ ಅವರು ಐಸ್ ಕ್ರೀಂ ತಿನ್ನಲು ಹೋಗಿದ್ದರಿಂದ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆಸಿದ ಉಗ್ರರ ದಾಳಿಯಲ್ಲಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಐಸ್ ಕ್ರೀಂ
ಮೂರು ಪ್ರತ್ಯೇಕ ಅಪಘಾತ: ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಸಾವು
ಬೆಂಗಳೂರು: ಗ್ರಾಮಾಂತರದ ವಿಶ್ವನಾಥಪುರ, ಅನಗೊಂಡನಹಳ್ಳಿ,ಹಾಗೂ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಭವಿಸಿದ ಪ್ರತ್ಯೇಕ ಮೂರು ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತಿರುಮಲಶೆಟ್ಟಿಹಳ್ಳಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಮನೋಜ್ (18) ಬೈಕ್ ನಲ್ಲಿ ಹೋಗುವಾಗ ಟಿಪ್ಪರ್
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್
ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನ ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ: ಡಿಕೆ ಸುರೇಶ್
ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ” ಎಂದು ಮಾಜಿ
ಪಿಂಚಣಿದಾರರ ಲೈಫ್ ಸರ್ಟಿಫಿಕೇಟ್‌ಗೆ ಕೆಪಿಟಿಸಿಎಲ್‌ನಿಂದ ತಂತ್ರಾಂಶ
ಬೆಂಗಳೂರು: ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ
ಐಎಎಫ್ ಅಧಿಕಾರಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್
ಬೆಂಗಳೂರು: ಭಾರತೀಯ ಸಶಸ್ತ್ರ ಪಡೆ(ಐಎಎಫ್) ಅಧಿಕಾರಿಯೊಬ್ಬರಿಗೆ ನಗರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಐಎಎಫ್ ಅಧಿಕಾರಿ ಶಿಲಾಧಿತ್ಯ ಬೋಸ್ ಅವರ ಪತ್ನಿ ಮಧುಮಿತಾ ದತ್ತ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
10 ತಿಂಗಳ ಹಸುಗೂಸು ರಕ್ಷಿಸಿದ ಬಾಲಿವುಡ್ ನಟಿ ದಿಶಾ ಪಟಾನಿ ಸಹೋದರಿ!
ಮುಂಬೈ: ಬಾಲಿವುಡ್ ನಟ ದಿಶಾ ಪಟಾನಿ ಸೋದರಿ ಮಹಡಿಯ ಮೇಲೆ ಸಿಲುಕಿದ್ದ 10 ತಿಂಗಳ ಹಸುಗೂಸನ್ನು ಯಾವುದೇ ರಕ್ಷಣೆ ಇಲ್ಲದೇ ಗೋಡೆ ಏರಿ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಲಿವುಡ್ ನಟಿ ದಿಶಾ ಪಟಾನಿ ಸೋದರಿ ಹಾಗೂ ಭಾರತೀಯ ಸೇನಾಪಡೆಯಲ್ಲಿ ಲೆಫ್ಟಿನೆಂಟ್
ಬೆಂಗಳೂರಿನಲ್ಲಿ ಮಂಗಳಮುಖಿ ಕೊಚ್ಚಿ ಕೊಲೆ
ಬೆಂಗಳೂರು: ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ. ಗಾಯತ್ರಿ ಲೇಔಟ್‌ನ ಮಂಗಳಮುಖಿ ತನುಶ್ರೀ (40) ಕೊಲೆಯಾದವರು. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆ
ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ
ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,




