kannada news
ಟಿಪ್ಪರ್ ಡಿಕ್ಕಿ: ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುರ್ಮರಣ
ಚಿಕ್ಕಬಳ್ಳಾಪುರ: ಟಿಪ್ಪರ್ಗೆ ಬೈಕ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ನರಸಿಂಹಮೂರ್ತಿ (27), ನಂದೀಶ್ (25), ಅರುಣ್ (18), ಮನೋಜ್ (19) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರು ಅಜ್ಜವಾರ ಗ್ರಾಮದವರು. ಇವರಲ್ಲಿ ನರಸಿಂಹಮೂರ್ತಿ ಮತ್ತು ನಂದೀಶ್ ಸಹೋದರರಾಗಿದ್ದಾರೆ. ಸ್ಥಳಕ್ಕೆ
ಅರಮನೆ ಮುಂಭಾಗ ನೈಟ್ರೊಜನ್ ಸಿಲಿಂಡರ್ ಸ್ಫೋಟ: ಬಲೂನ್ ವ್ಯಾಪಾರಿ ಸಾವು
ಮೈಸೂರು: ಅರಮನೆ ಮುಂಭಾಗದಲ್ಲಿ ಬಲೂನ್ ಗೆ ಗಾಳಿ ತುಂಬುವ ಸಿಲಿಂಡರ್ ಸ್ಫೋಟಗೊಂಡು, ಬಲೂನ್ ವ್ಯಾಪಾರಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಮನೆಯ ಜಯಮಾರ್ತಂಡ ದ್ವಾರದ ಬಳಿ ರಾತ್ರಿ 9 ಗಂಟೆ ಈ ದುರ್ಘಟನೆ ನಡೆದಿದೆ. ಮೃತರ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರ ಪೈಕಿ
ಕಾಂಬೊಡಿಯಾದಲ್ಲಿ ವಿಷ್ಣುವಿನ ಪ್ರತಿಮೆ ನೆಲಸಮ: ಭಾರತ ಖಂಡನೆ
ಕಾಂಬೊಡಿಯಾದಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಲಾಗಿದೆ. ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಹಲವು ದಶಕಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಥಾಯ್ಲೆಂಡ್ ಸೇನೆ 30 ಅಡಿ ಎತ್ತರದ ವಿಷ್ಣುವಿನ ಪ್ರತಿಮೆಯನ್ನು ನೆಲಸಮಗೊಳಿಸಿದೆ. ವಿಷ್ಣು
ನಾಯಕ ಗಣೇಶ್ ಉಕಿ ಸೇರಿ ನಾಲ್ವರು ನಕ್ಸಲರ ಎನ್ ಕೌಂಟರ್
ಕೋಟಿ ರೂ. ಬಹುಮಾನ ಭಾರತೀಯ ಭದ್ರತಾ ಪಡೆ ಘೋಷಿಸಿದ್ದ ನಕಲ್ಸರ ನಾಯಕ ಗಣೇಶ್ ಉಕಿ ಸೇರಿದಂತೆ ನಾಲ್ವರನ್ನು ಓಡಿಶಾದಲ್ಲಿ ಎನ್ ಕೌಂಟರ್ ಮಾಡಲಾಗಿದೆ. ಸಿಪಿಐ ನಕ್ಸಲ್ ಸಂಘಟನೆಯ ಕೇಂದ್ರ ಸಮಿತಿ ಸದಸ್ಯರಲ್ಲಿ ಒಬ್ಬರಾಗಿದ್ದ ತೆಲುಗು ನಕ್ಸಲ್ ನಾಯಕನಾಗಿದ್ದ 69 ವರ್ಷದ ಗಣೇಶ್
ಅಂಜನಾದ್ರಿ ದೇಗುಲದಲ್ಲಿ ಅರ್ಚಕರ ಮಧ್ಯೆ ಜಗಳ
ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆರ್ಚಕರಾಗಿರುವ ವಿದ್ಯಾದಾಸಬಾಬಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಗಲಾಟೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಅಂಜನಾದ್ರಿ
ಅನಿಲ್ ಅಂಬಾನಿ ಬ್ಯಾಂಕ್ ವಂಚನೆ ವಿರುದ್ಧ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ
ರಿಲಯನ್ಸ್ ಗ್ರೂಪ್‌ನ ಅನಿಲ್ ಅಂಬಾನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ವಂಚನೆ ಎಂದು ಬ್ಯಾಂಕುಗಳ ಒಕ್ಕೂಟ ಈಗಾಗಲೇ ಘೋಷಿಸಿದ್ದು, ಬ್ಯಾಂಕ್‌ಗಳ ಈ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಈ ಹಿಂದಿನ ಎಲ್ಲ ಮತ್ತು ಭವಿಷ್ಯದ ಕ್ರಮಗಳಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ
ಹಿರಿಯೂರು ಬಸ್ ದುರಂತ: ಏಪ್ರಿಲ್‌ನಲ್ಲಿ ಮದುವೆಯಾಗಬೇಕಿದ್ದ ಹಾಸನದ ನವ್ಯಾಳ ಸುಳಿವಿಲ್ಲ, ಆಸ್ಪತ್ರೆಗಳಿಗೆ ತಂದೆ ಅಲೆದಾಟ
ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ನಡೆದು ಹತ್ತಕ್ಕೂ ಹೆಚ್ಚು ಮಂದಿ ಸಜೀವದಹನಗೊಂಡು ಹಲವರು ಗಾಯಗೊಂಡಿರುವ ಘಟನೆಯಲ್ಲಿ ಹಾಸನದ ಇಬ್ಬರು ಯುವತಿಯರ ಸುಳಿವೇ ಸಿಕ್ಕಿಲ್ಲ. ಅವರಲ್ಲಿ ಒಬ್ಬಾಕೆ ನವ್ಯಾಗೆ ಏಪ್ರಿಲ್‌ನಲ್ಲಿ ಮದುವೆ ನಿಗದಿಯಾಗಿದೆ. ಮಗಳ ಬಗ್ಗೆ ಏನಾದರೂ ಮಾಹಿತಿ ಸಿಗುವುದೇ ಎಂದು ತಂದೆ
ರಾಜ್ಯದ ಬ್ಯಾಂಕ್‌ಗಳಲ್ಲಿ ಕ್ಲೇಮ್ ಆಗದೆ ಉಳಿದಿರುವ ಹಣ 3,400 ಕೋಟಿ ರೂ.
ಕರ್ನಾಟಕದ ಬ್ಯಾಂಕ್‌ಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ 3,400 ಕೋಟಿ ರೂ. ಕ್ಲೇಮ್ ಆಗದೆ ಉಳಿದಿದೆ ಎಂದು ಆರ್ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು
ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ- CBC ಕಚೇರಿ ಸ್ಥಗಿತ ಬೇಡ: ಕೇಂದ್ರಕ್ಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ
ನವದೆಹಲಿ: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ
ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ




