kannada news
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಂಗಳೂರು ಟಾಪ್ 5 ಗೆ ತರಲು ಸಂಕಲ್ಪ: ಸಚಿವ ಬೈರತಿ ಸುರೇಶ್
ವಿಧಾನಪರಿಷತ್ತು: ಸ್ವಚ್ಛ ನಗರಗಳ ಕುರಿತು ರಾಷ್ಟ್ರೀಯ ಸ್ವಚ್ಛಭಾರತ್ ಮಿಸನ್ ನಡಿ ನಡೆಸುವ ಸಮೀಕ್ಷೆಯಲ್ಲಿ ಮಂಗಳೂರು ನಗರವನ್ನು ಟಾಪ್ 5 ರೊಳಗೆ ಬರುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಬಾರಿ ರಾಜ್ಯದ ಮೈಸೂರು ಮತ್ತು ದಾವಣಗೆರೆ ನಗರಗಳಿಗೆ ಟಾಪ್ 5 ರಲ್ಲಿ
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ
ಕುಣಿಗಲ್ ಸಹಕಾರಿ ರಂಗ: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ ಭರವಸೆಯಿತ್ತ ಸಿಎಂ
ಕುಣಿಗಲ್ ತಾಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಸಿಎಂ
ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?
“ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ
ರಸ್ತೆ, ಚರಂಡಿ ಬೇಡವಾದ್ರೆ ತುಮಕೂರಿಗೆ ಮೆಟ್ರೋ ಯಾಕೆ ಬೇಕು: ಆರ್ ಅಶೋಕ
ರಸ್ತೆ, ಚರಂಡಿ ಬೇಡ ಅಂದ ಮೇಲೆ, ತುಮಕೂರಿನವರೆಗೂ ಮೆಟ್ರೋ ಯಾಕೆ ಬೇಕು ಪರಮೇಶ್ವರ್ ಅವರೇ? SCSP/TSP ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವಂತೆ ಮೆಟ್ರೋ ಕಾಮಗಾರಿ ಹಣವನ್ನೂ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಬಿಡಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ
ಐದು ವರ್ಷ ನಾನೇ ಸಿಎಂ ಎಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ ಎಂದ ಸಿದ್ದರಾಮಯ್ಯ
140 ಶಾಸಕರು ನಮ್ಮೊಂದಿಗಿದ್ದಾರೆ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ . 2023 ರಂತೆ 2028 ರಲ್ಲಿಯೂ ಜನಾರ್ಶೀವಾದ ದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ
ಸೈಬರ್ ವಂಚನೆ: ಬೆಂಗಳೂರಿನ ಮಹಿಳಾ ಟೆಕ್ಕಿ ಕಳೆದುಕೊಂಡಿದ್ದು ಎರಡು ಕೋಟಿ ರೂ.
ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಸೈಬರ್ ವಂಚಕರ ಡಿಜಿಟಲ್ ಅರೆಸ್ಟ್ ಜಾಲದ ಭೀತಿಗೆ ಒಳಗಾಗಿ ಇದ್ದ ಪ್ಲಾಟ್, ಸೈಟ್ ಮಾರಿ ಎರಡು ಕೋಟಿ ರೂ. ಕಳೆದುಕೊಂಡಿದ್ದಾರೆ. ವಿಜ್ಞಾನ ನಗರದ ನ್ಯೂ ತಿಪ್ಪಸಂದ್ರದಲ್ಲಿ ಸಾಫ್ಟ್‌ವೇರ್ ಉದ್ಯೋಗಿ 10 ವರ್ಷದ ಮಗನೊಂದಿಗೆ ವಾಸವಾಗಿದ್ದು, ಕೆಲವು ತಿಂಗಳ
ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ
ಭಟ್ಕಳ ತಹಸೀಲ್ದಾರ್ ಕಚೇರಿಗೆ ಮಂಗಳವಾರ ಬೆಳಗ್ಗೆ ಪ್ರಬಲ ಬಾಂಬ್ ಸ್ಪೋಟವಾಗಲಿದೆ ಎಂದು ಹುಸಿ ಬೆದರಿಕೆ ಕರೆ ಬಂದಿದ್ದು, ಕಚೇರಿ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ‘ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ’ ಎಂಬ ಈಮೇಲ್ ಮೂಲಕ ಸಂದೇಶ ಬಂದಿದ್ದು, ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು:
ರಜೆ ಸಿಗದೆ ಕೆನಡಾದಲ್ಲಿ ವರ, ಉಡುಪಿಯಲ್ಲಿ ವಧು: ವೀಡಿಯೊ ಕಾಲ್‌ನಲ್ಲೇ ನಿಶ್ಚಿತಾರ್ಥ
ಮಾಗಡಿ ತಾಲೂಕಿನ ಸುಹಾಸ್.ಎಸ್ ಮತ್ತು ಉಡುಪಿಯ ಮೇಘಾ ವೀಡಿಯೊ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವರ ಸುಹಾಸ್ ಕೆನಡಾದಲ್ಲಿದ್ದು, ರಜೆ ಸಿಗದ ಕಾರಣ ಉಡುಪಿ ಸರಸ್ವತಿ ಸಭಾಭವನದಲ್ಲಿ ವಧು ಮೇಘಾ ಮತ್ತು ಕುಟುಂಬದವರು ಹಾಜರಿದ್ದು ನಿಶ್ಚಿತಾರ್ಥ ನೆರವೇರಿತು. ವಧು-ವರರು ವಿಡಿಯೋ ಕಾನ್ಫರೆನ್ಸ್
ಮಲಪ್ರಭಾ ನದಿಯಲ್ಲಿ ಮರಳು ಲೂಟಿ: ಪಶ್ನಿಸಿದವರ ಮೇಲೆ ಹಲ್ಲೆ, ಅಸಹಾಯಕ ಪೊಲೀಸ್
ಶಾಸಕ ಭೀಮಸೇನ್ ಚಿಮ್ಮನಕಟ್ಟಿ ಕ್ಷೇತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ಮುಂದುವರಿದಿದ್ದು, ಮಲಪ್ರಭಾ ನದಿಯನ್ನು ರಾಜಾರೋಷವಾಗಿ ಬಗೆದು ಮರಳು ತೆಗೆಯಲಾಗುತ್ತಿದೆ. ಮರಳು ಲೂಟಿ ಪ್ರಶ್ನಿಸಿದವರ ವಿರುದ್ಧ ಪ್ರಭಾವಿಗಳು ಬೆದರಿಕೆಯೊಡ್ಡುತ್ತಿರುವುದಾಗಿ ಕನ್ನಡ ಪರ ಹೋರಾಟಗಾರ ಮಹೇಶ್ ವಡ್ಡರ್ ಆರೋಪಿಸಿದ್ದಾರೆ. ಪೊಲೀಸರ ಎದುರೇ ಮರಳು ಲೂಟಿಕೋರರು




