kannada news
ಸಿಎಂ ಆಗಿ ಡಿಕೆ ಶಿವಕುಮಾರ್ ಕೈಗೊಂಡ ಮಹತ್ತರ ತೀರ್ಮಾನಗಳು
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿಕೆ ಶಿವಕುಮಾರ್ ಅವರು ಕೈಗೊಂಡ ಮಹತ್ವದ ತೀರ್ಮಾನಗಳು ಹೀಗಿವೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಎಲ್ಲಾ ಪಂಚಾಯಿತಿ, ವಾರ್ಡ್ ಗಳಲ್ಲಿ ಭಾರತ ಜೋಡೋ ಯುವಕರ ಸಂಘ ಸ್ಥಾಪನೆ. ತಲಾ 10 ಲಕ್ಷ ರೂ. ನೀಡುವ ನಿರ್ಣಯ. 2500 ಅಡಿವರೆಗಿನ ನೂತನ ವಸತಿ ಕಟ್ಟಡಗಳ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ, ರಾಜ್ಯದೆಲ್ಲೆ ‘ಬಿ’ ಯಿಂದ ‘ಎ’ ಖಾತಾ ಪರಿವರ್ತನೆ. ಬೆಂಗಳೂರಿನ ರಸ್ತೆಗಳನ್ನು
ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಹವಾಲು ಸ್ವೀಕರಿಸದೆ ನಡೆದ ಡಿಸಿ: ತಡೆದ ರೋಗಿಗಳ ಸಂಬಂಧಿಕರು
ಚಿತ್ರದುರ್ಗ ನಗರದ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ರೋಗಿಗಳ ಸಂಬಂಧಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆಸ್ಪತ್ರೆ ಪರಿಶೀಲನೆಗೆ ಆಗಮಿಸಿದ್ದ ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿ ಎಸ್. ರಮ್ಯ ರೋಗಿಗಳ ಅಹವಾಲುಗಳನ್ನು ಕೇಳದೆ ಕಾರಿನ
ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ: ಸಿಎಂ ಡಿಕೆ ಶಿವಕುಮಾರ್
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಸೂಚಿಸಿದರು.
ಮನೆ ಹಂಚಿಕೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ: ಸಚಿವ ಬೈರತಿ ಸುರೇಶ್
ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ನನ್ನ ನಡುವೆ ಯಾವುದೇ ಗೊಂದಲವಿಲ್ಲ. ಸರ್ಕಾರದ ವಸತಿ ಗೃಹದ ಹಂಚಿಕೆ ವಿಚಾರದಲ್ಲಿ ತಪ್ಪು ಮಾಹಿತಿ ಹೇಗೆ ಹೋಗಿದೆಯೋ ಗೊತ್ತಿಲ್ಲ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ
ರೈತರ ವಿಮೆ ಹಣ ಕಟ್ಟದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಸೂಚನೆ
ದೇವರ ಹಿಪ್ಪರಗಿ ತಾಲೂಕಿನ ರೈತರು ಬೆಳೆ ವಿಮೆಗೆ ಪಾವತಿಸಿದ್ದ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿ ಮಾಡದ ಕಾರಣ 93 ರೈತರ ವಿಮೆ ತಿರಸ್ಕಾರಗೊಂಡಿದ್ದು, ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿರುವ ಸ್ವಸಹಾಯ ಸೊಸೈಟಿ ಕಾರ್ಯದರ್ಶಿ ವಜಾಗೊಳಿಸಲು ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು.
ನೈಸ್ ಯೋಜನೆ: ಕಾನೂನಿನ ಚೌಕಟ್ಟಿನಲ್ಲೇ ಕ್ರಮವೆಂದ ಸಿಎಂ ಡಿಕೆ ಶಿವಕುಮಾರ್
ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನೈಸ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ
ಡಿಸೆಂಬರೊಳಗೆ ಮಹಾನಗರ ಪಾಲಿಕೆ, ನಗರಸಭೆ, ಸ್ಥಳೀಯ ಚುನಾವಣೆ: ಸಚಿವ ಡಾ. ಯತೀಂದ್ರ
ಮಹಾನಗರ ಪಾಲಿಕೆ, ನಗರಸಭೆ ಹಾಗೂ ಸ್ಥಳೀಯ ಚುನಾವಣೆಗಳನ್ನು ನಡೆಸಲಾಗುವುದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆ ಖಾತೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ
ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: ಡಿಕೆ ಶಿವಕುಮಾರ್
ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ
ತಿರುಪತಿ ದೇಗುಲದಿಂದ ವಾಪಸಾಗುತ್ತಿದ್ದ ನಾಲ್ವರು ಕೋಲಾರದಲ್ಲಿ ಅಪಘಾತಕ್ಕೆ ಬಲಿ
ಕೋಲಾರ ತಾಲೂಕಿನ ದೊಡ್ಡಕಾರಿ ಬಳಿ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್ ವೇ ಕಾರಿಡಾರ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದ ಶಾರದಮ್ಮ(70), ದೀಕ್ಷಿತಾ (25), ದೇವೇಂದ್ರ ಕುಮಾರ್ (41), ಜಿಷ್ಣು (13) ಮೃತಪಟ್ಟವರು. ಚಾಲಕ ವಿಕಾಸ್, ನೀತು,
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ
ಇಂಡೋನೇಷ್ಯಾದ ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ದೇಶದ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಎಂಟು ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಇದರಿಂದ ೧೭೦೦೦೦ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ವರದಿಯಾಗಿದೆ. ಜಾವಾ ಮತ್ತು ಸುಮಾತ್ರಾ ದ್ವೀಪಗಳ ನಡುವೆ ಸುಂದಾ ಜಲಸಂಧಿಯಲ್ಲಿರುವ




