kannada news
ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ
ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರುವುದನ್ನು ತಡೆಯುವ ನಿಟ್ಟಿನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದಿದ್ದಾರೆ. 18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು.
ಕರ್ನಾಟಕ ಬಜೆಟ್ 2026: ಬೆಂಗಳೂರು ಅಭಿವೃದ್ಧಿಗೆ ಏಳು ಸಾವಿರ ಕೋಟಿ ರೂ.
ಕರ್ನಾಟಕ ಬಜೆಟ್ 2026ರಲ್ಲಿ ಬೆಂಗಳೂರು ಅಭಿವೃದ್ಧಿಗೆ ಏಳು ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ಗೆ 1700 ಕೋಟಿ ಅನುದಾನ ಘೋಷಿಸಲಾಗಿದೆ. 158 ಕಿ.ಮೀ ವೈಟ್ ಟಾಪಿಂಗ್ ಆಗಲಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಕರಗ
ಕರ್ನಾಟಕ ಬಜೆಟ್ 2026: ಶಕ್ತಿಗೆ 5,300 ಕೋಟಿ ರೂ., ಗೃಹಲಕ್ಷ್ಮೀಗೆ 28,608 ಕೋಟಿ ರೂ. ಇಂದಿರಾ ಕಿಟ್‌ಗೆ 6,200 ಕೋಟಿ ರೂ.
ಶಕ್ತಿ ಯೋಜನೆಗೆ ಈ ವರ್ಷ ಬಜೆಟ್‌ನಲ್ಲಿ 5,300 ಕೋಟಿ ಮೀಸಲಿಟ್ಟಿರುವುದಾಗ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗಾಗಿ 100 ಸಂಖ್ಯಾ ಬಲದ ಎರಡು ಮಹಿಳಾ ವೃದ್ದಾಶ್ರಮ ಪ್ರಾರಂಭ.
ಕರ್ನಾಟಕ ಬಜೆಟ್ 2026: 800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2026–27ನೇ ಸಾಲಿನ ರಾಜ್ಯದ ಬಜೆಟ್ ಮಂಡಿಸಿದ್ದು, ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ ಮಾಡಲಾಗಿದೆ. ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂಪಾಯಿ
ಕರ್ನಾಟಕ ಬಜೆಟ್- 2026 ಮಂಡನೆ ಇಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 17ನೇ ಬಜೆಟ್ ಮಂಡಿಸಲಿದ್ದಾರೆ. ಈ ವರ್ಷದ ರಾಜ್ಯ ಬಜೆಟ್ ಗಾತ್ರ 4.50 ಲಕ್ಷ ಕೋಟಿ ರೂ. ತಲುಪುವ ಸಾಧ್ಯತೆ ಇದೆ ಎಂದು ಹಣಕಾಸು ಇಲಾಖೆ ಅಂದಾಜಿಸಿದೆ. ಇಂದಿನಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. 2026–27ನೇ
ಅರಸೀಕೆರೆಯಲ್ಲಿ ವಿಷಯುಕ್ತ ಮೇವು ತಿಂದು ಕುರಿಗಳ ಸಾವು
ಅರಸೀಕೆರೆ ತಾಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ. ತುಮಕೂರಿನ ಶಿರಾದಿಂದ 800 ಕುರಿಗಳನ್ನು ಕುರಿಗಾಹಿಗಳು ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಕುರಿಗಳು ಹೊಲಗಳ ತುಂಬೆಲ್ಲಾ
ಸಿಎಂ ಸಿದ್ದರಾಮಯ್ಯನವರಿಂದ ಸಾಲದ ಬಜೆಟ್ ಮಂಡನೆ: ಆರ್ ಅಶೋಕ
ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯೂ ಜನರ ಮೇಲೆ ತೆರಿಗೆಗಳ ಹೊರೆ ಹಾಕುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ
ಬ್ರಿಮ್ಸ್ ಫೊರೆನ್ಸಿಕ್ ಸೈನ್ಸ್ ಮುಖ್ಯಸ್ಥ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಬೀದರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಫೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುನಿಲ್ ತಾಪ್ಸೆ (58) ವಸತಿಗೃಹದ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆರೋಗ್ಯ ಸಮಸ್ಯೆಗಳ ಕಾರಣದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಅವರು ಬರೆದಿದ್ದಾರೆ ಎನ್ನಲಾದ
ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಧ್ವಂಸ: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ಟ್ಯಾಂಕರ್ ನಾಶ
ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಯುದ್ಧನೌಕೆ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಉತ್ತರ ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ಟ್ಯಾಂಕರ್ ಹೊಡೆದುರುಳಿಸಿದೆ. ಈ ದಾಳಿಯಲ್ಲಿ ನಡೆದ ಸಾವುನೋವುಗಳ ಸಂಕ್ಯೆ ಇನ್ನೂ ದೃಢಪಟ್ಟಿಲ್ಲ. ಇರಾನ್- ಇಸ್ರೇಲ್ ಮಧ್ಯೆ ಆರಂಭಗೊಂಡ ಸಂಘರ್ಷ ಅಮೆರಿಕ ಸೇನಾ
ಇರಾನ್ ನಾಯಕರಾಗುವ ಪ್ರತಿಯೊಬ್ಬರೂ ಸಾಯ್ತಾರೆ, ದಾಳಿ ಮುಂದುವರಿಕೆ ಎಂದ ಟ್ರಂಪ್
ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯುತ್ತಾರೆ, ಸೇನಾ ಕಾರ್ಯಾಚರಣೆ ಸಮಯದಲ್ಲಿ ಇರಾನ್‌ನ ನಾಯಕತ್ವದ ವ್ಯಕ್ತಿಗಳನ್ನು ಗುರಿಯಾಗಿಸುತ್ತಿದ್ದೇವೆ. ಅಮೆರಿಕ ಈಗ ಅತ್ಯಂತ ಪ್ರಬಲ ಸ್ಥಾನದಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ ಅವರು, ಇರಾನ್ ಜೊತೆಗಿನ ಸೇನಾ




