kannada news
ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಜೀವ ರಕ್ಷಕ ಪ್ರಶಸ್ತಿ
ಸಮಾಜದಲ್ಲಿ ಬದಲಾವಣೆ ಬೇಕಾದರೆ ಮೊದಲು ಸರಿಯಾದ ಜನಪ್ರತಿನಧಿಯನ್ನು ಆಯ್ಕೆ ಮಾಡಬೇಕು. ಈ ಆಯ್ಕೆ ಮಾಡುವುದು ಸವಾಲಿನ ಕೆಲಸ. ಇದು ಜವಾಬ್ದಾರಿಯುತವಾದ ಕೆಲಸ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು. ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ ಸಂಜೀವಿನಿ ಜೀವ ರಕ್ಷಕ್ ಟ್ರಸ್ಟ್ ವತಿಯಿಂದ ನೀಡಲಾದ ೨೦೨೫ ನೇ ಸಾಲಿನ ಜೀವ ರಕ್ಷಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಈ ದೇಶ ಜನರದ್ದು, ಯಾವುದೇ ಪಕ್ಷಕ್ಕೆ ಸೇರಿಲ್ಲ.
ಗರ್ಭಿಣಿ ಆತ್ಮಹತ್ಯೆ, ದಲಿತೆಯೆಂದು ಗಂಡನ ಮನೆಯವರಿಂದ ಕೊಲೆ: ಕುಟುಂಬ ಆರೋಪ
ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಜಾತಿ ದ್ವೇಷದಿಂದ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಗರ್ಭಿಣಿ ನೇಣುಬಿಗುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ, ಜಾತಿ ದ್ವೇಷದ ಹಿನ್ನೆಲೆಯಲ್ಲಿ ಆಕೆಯ ಗಂಡನ ಮನೆಯವರು ಮಾಡಿದ ಕೊಲೆ ಎಂದು ಪೋಷಕರು ಆರೋಪಿಸಿದ್ದಾರೆ.
ತಾಯಿ ಮಡಿಲಿನಿಂದ 3 ವರ್ಷದ ಹಸುಗೂಸು ಹೊತ್ತೊಯ್ದ ನರಭಕ್ಷಕ ತೋಳ!
ಅಮ್ಮನ ತೊಡೆ ಮೇಲೆ ಮಲಗಿದ್ದ 3 ವರ್ಷದ ಮಗುವನ್ನು ನರಭಕ್ಷಕ ತೋಳ ಕಿತ್ತುಕೊಂಡು ಹೋಗಿ ತಿಂದ ಭೀಕರ ಘಟನೆ ಉತ್ತರಪ್ರದೇಶದ ಬಹರಿಚ್ ಜಿಲ್ಲೆಯಲ್ಲಿ ನಡೆದಿದೆ. ಮಂಜಾರ ತಾಲೂಕಿನ ರಸಲ್ಪುರ ಡಾರೆತಾ ಗ್ರಾಮದಲ್ಲಿ ತೊಡೆ ಮೇಲೆ ಮಲಗಿಸಿಕೊಂಡು ಹಾಲುಣಿಸಿದ್ದಾಗ ಮನೆಗೆ ನುಗ್ಗಿದ ತೋಳ
ಜನವರಿ 29ರಿಂದ ಫೆಬ್ರವರಿ 6: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ. ಕಲಾವಿದ, ನಿರ್ದೇಶಕ ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ. ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಹಿಂಪಡೆಯಲು ಕಾನೂನು ರೀತಿಯ ಹೋರಾಟ: ಸಿಕೆ ರಾಮಮೂರ್ತಿ
ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ
ಪತ್ನಿ ಸುಪರ್ದಿಗೆ ಮಕ್ಕಳ ನೀಡಲು ಕೋರ್ಟ್ ಆದೇಶ: ಮಕ್ಕಳ ಸಾಯಿಸಿ ತಾಯಿ ಜೊತೆ ವ್ಯಕ್ತಿ ಆತ್ಮಹತ್ಯೆ
ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶಿಸಿದ್ದಕ್ಕೆ ವ್ಯಕ್ತಿ ಎರಡು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ಬಳಿಕ ತಾಯಿ ಜೊತೆ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಮಗಳು ಹಿಮಾ(6), ಮಗ ಕಣ್ಣನ್‌ಗೆ(2) ವಿಷ ನೀಡಿದ ಬಳಿಕ ತಾಯಿ ಉಷಾ(65)
ಮಾರ್ಚ್‌ಗೆ ಕೋರಮಂಗಲ- ಸರ್ಜಾಪುರ ಬಫರ್ ರಸ್ತೆ ಕಾಮಗಾರಿ ಪೂರ್ಣ: ಡಿಸಿಎಂ
“ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ 5.50 ಕಿ.ಮೀ ಉದ್ದದ ಬಫರ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಜಕಾಲುವೆ ಪಕ್ಕದಲ್ಲಿ ಸಂಚಾರಿಯುಕ್ತ ಬಫರ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು
ಅಜ್ಮೀರ್ ದರ್ಗಾಗೆ ಪಿಎಂಒ ಚಾದರ್ ಅರ್ಪಣೆಗೆ ತಡೆ ಕೋರಿದ್ದ ಮನವಿ ನಿರಾಕರಿಸಿದ ಸುಪ್ರೀಂ
ಪ್ರಧಾನಮಂತ್ರಿಗಳ ಕಚೇರಿಯಿಂದ ಅಜ್ಮೀರ್ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಷ್ತಿ ಉರುಸ್ ವೇಳೆ ಚಾದರ್ ಸಮರ್ಪಣೆ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ತುರ್ತು ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ದರ್ಗಾವು ಪ್ರಾಚೀನ ಶಿವ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಎಂದು ಹಿಂದೂ
ಬಾಡಿಗೆ ತಾಯ್ತನಕ್ಕೆ ವೃದ್ಧ ದಂಪತಿ ಕೋರಿಕೆ: ಸ್ಪಂದಿಸಲು ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
ಇದ್ದ ಒಬ್ಬನೇ ಮಗನ ಕಳೆದುಕೊಂಡಿರುವ ವೃದ್ಧ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಕಾನೂನು ಅಡ್ಡಿಯಾಗುತ್ತಿರುವುದನ್ನು ಗಮನಿಸಿರುವ ಹೈಕೋರ್ಟ್,ಪ್ರಕರಣವನ್ನು ಕಾನೂನು ಅಡಿ ಅಲ್ಲ, ಮಾನವೀಯತೆಯಿಂದ ನೋಡಬೇಕಿದೆ, ಅರ್ಜಿದಾರರ ಮನವಿಗೆ ಸ್ಪಂದಿಸಲು ಸೂಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ರಾಯಚೂರಿನಲ್ಲಿ ಎಇಇ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ರಾಯಚೂರಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಂಧನೂರಿನಲ್ಲಿ ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಅವರಿಗೆ ಸೇರಿರುವ ರಾಯಚೂರು ನಗರದಲ್ಲಿನ ಎರಡು ಮನೆ ಸೇರಿ ಐದು ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ ಅಧಿಕ




