kannada news
ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡೇ ರಾಜ್ಯ ಸರ್ಕಾರಕ್ಕೆ ಸೂಚಿಸುವ ಮೂಲಕ ಅಂಬೇಡ್ಕರ್ ಗೌರವಾರ್ಥದ ಸಮಾರಂಭವನ್ನು ತಡೆದಿದೆ ಎಂದು ದೂರಿದರು. ಖರ್ಗೆ ಅವರು ಕ್ಷಮೆ ಕೇಳಲಿ:
ಸನ್ ರೈಸರ್ಸ್ ಹೈದರಾಬಾದ್ ಐತಿಹಾಸಿಕ ಗೆಲುವಿನ `ಅಭಿಷೇಕ’!
ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಪಂದ್ಯದಲ್ಲಿ
ಉಕ್ರೇನ್ ನ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ!
ಕೀವ್: ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ಶನಿವಾರ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಉಕ್ರೇನ್ ನಲ್ಲಿ ಭಾರತದ ಔಷಧ ಉದ್ಯಮಕ್ಕೆ ಧಕ್ಕೆ ತರಲು
ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿಕೆ ಶಿವಕುಮಾರ್ ವ್ಯಂಗ್ಯ
ಬೆಂಗಳೂರು: ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ
ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ
ಬೆಂಗಳೂರು: ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಹುಬ್ಬಳ್ಳಿ ಧಾರವಾಡದಲ್ಲಿ
ಒಬಿಸಿ ಮೀಸಲಾತಿ ಶೇ.51ಕ್ಕೆ ಏರಿಸಲು ಜಯಪ್ರಕಾಶ್ ಹೆಗ್ಡೆ ವರದಿ ಶಿಫಾರಸು?
ಬೆಂಗಳೂರು: ಒಬಿಸಿ ಮೀಸಲಾತಿಯಲ್ಲಿ ಬದಲಾವಣೆ ಹಾಗೂ ಒಬಿಸಿ ವರ್ಗೀಕರಣದಲ್ಲೂ ಬದಲಾವಣೆಗೆ ಜಾತಿ ಗಣತಿಯಲ್ಲಿ ಶಿಫಾರಸು ಮಾಡಲಾಗಿದೆ ಎಂಬ ವಿಚಾರ ಇದೀಗ ತಿಳಿದುಬಂದಿದೆ. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಒಬಿಸಿ ಮೀಸಲಾತಿಯನ್ನು ಶೇಕಡಾ 32
ಚಿನ್ನ ಅಕ್ರಮ ಸಾಗಾಣೆ: ಜಾಮೀನು ಕೋರಿ ನಟಿ ರನ್ಯಾ ಅರ್ಜಿ
ಬೆಂಗಳೂರು:ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಮಾಡಿದ್ದ ಆರೋಪ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ
ಮುಂಬೈ ತಾಜ್ ಹೋಟೆಲ್ ದಾಳಿ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ
ವಾಷಿಂಗ್ಟನ್: ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಮಾಸ್ಟರ್ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು,ಗುರುವಾರ ಮುಂಜಾನೆ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್
ಕುಡಿಯೋ ಬಾಟಲಿ ನೀರು, ಸವಿಯೋ ಐಸ್ ಕ್ರೀಂ ಅಪಾಯಕಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ವಿವಿಧೆಡೆ ಮಾರಾಟವಾಗುವ ಬಾಟಲಿ ನೀರು, ತುಪ್ಪ, ಪನ್ನೀರ್, ಹಸಿರು ಬಟಾಣಿಗಳು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ವಿವಿಧೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು
ನಾಳೆ ಪಿಯು ಫಲಿತಾಂಶ ಪ್ರಕಟ ಮಧ್ಯಾಹ್ನ 1 ಗಂಟೆಯಿಂದ ವೆಬ್‌ಸೈಟ್‌ನಲ್ಲಿ ಲಭ್ಯ
ಬೆಂಗಳೂರು: ರಾಜ್ಯಾದ್ಯಂತ ಕಳೆದ ಮಾರ್ಚ್ .1ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ




