kannada news
ರಾಜ್ಯದ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ವಿಜಯನಗರ, ಧಾರವಾಡ, ಶಿವಮೊಗ್ಗ ಸೇರಿದಂತೆ ಕೆಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಹಣ ಗಳಿಕೆ ಹಾಗೂ ಹಲವಾರು ದೂರು ಹಿನ್ನೆಲೆ ವಿಜಯನಗರ ಆರೋಗ್ಯಾಧಿಕಾರಿ ಶಂಕರ್ ನಾಯ್ಕ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಶಂಕರ್ ನಾಯ್ಕ ಒಡೆತನದ ಆಸ್ಪತ್ರೆ ಅಕ್ರಮವಾಗಿ ಪರವಾನಗಿ ಪಡೆದುಕೊಂಡಿದೆ. ಅಂಗವಿಕಲ ಸರ್ಟಿಫಿಕೇಟ್ ನೀಡುವಲ್ಲಿ ಅಕ್ರಮ ನಡೆಸುತ್ತಿದ್ದಾರೆ ಎಂಬ ಆರೋಪ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಶಿವಮೊಗ್ಗದಲ್ಲಿ
ಶಬರಿಮಲೆಯಿಂದ ಬಂದು ಭರ್ಜರಿ ಪಾರ್ಟಿ: ಸ್ನೇಹಿತರಿಂದಲೇ ಕೊಲೆ
ಬ್ರಹ್ಮಾವರ ತಾಲೂಕು ಕೋಟ ಪಡುಕರೆಯಲ್ಲಿ ಶಬರಿಮಲೆ ಯಾತ್ರೆ ಮುಗಿಸಿಕೊಂಡು ಬಂದ ಯುವಕ ಬಳಿಕ ಸ್ನೇಹಿತರೊಂದಿಗೆ ಸೇರಿಕೊಂಡು ಭರ್ಜರಿ ಪಾರ್ಟಿ ನಡೆಸಿದ್ದು, ಈ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಸ್ನೇಹಿತರಿಂದಲೇ ಕೊಲೆಯಾಗಿದ್ದಾನೆ. ಆಕ್ಸಿಸ್ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂತೋಷ್ ಪೂಜಾರಿ (30) ಕೊಲೆಯಾದ
ಕೋಟಿ ರೂ. ವಿಮೆ ಹಣ ಪಡೆಯಲು ಅಮಾಯಕನನ್ನು ತನ್ನ ಕಾರಲ್ಲಿ ಸುಟ್ಟು ಹಾಕಿದಾತ ಅರೆಸ್ಟ್
ಮಹಾರಾಷ್ಟ್ರದ ಲಾತೂರಿನಲ್ಲಿ ಒಂದು ಕೋಟಿ ರೂ. ವಿಮೆ ಹಣ ಪಡೆಯಲು ಲಿಫ್ಟ್ ಕೊಡೋದಾಗಿ ನಂಬಿಸಿ ವ್ಯಕ್ತಿಯೊಬ್ಬನನ್ನು ಕರೆದೊಯ್ದು ಕಾರಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್ ಬಂಧಿತ ಆರೋಪಿ. ಆತ ಒಂದು ಕೋಟಿ ರೂ.
ವೋಟ್ ಚೋರಿ ನೆಪದಲ್ಲಿ ಸುಳ್ಳು ಕಥೆ ಸೃಷ್ಟಿ: ಪ್ರತಿಪಕ್ಷಗಳ ವಿರುದ್ಧ ಹೆಚ್.ಡಿ. ದೇವೇಗೌಡ ವಾಗ್ದಾಳಿ
ನವದೆಹಲಿ: ವೋಟ್ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಗಂಭೀರ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ
ಪತ್ನಿ ಸಮಾಧಿ ಪಕ್ಕ ಮಣ್ಣಾದ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಲಿಂಗಾಯತ- ವೀರಶೈವ ಸಂಪ್ರದಾಯದಂತೆ ನೆರವೇರಿತು. ವಯೋ ಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಸಮಾಧಿ ಪಕ್ಕ ಮಣ್ಣು
ಕೋಮು ಭಾವನೆ ಕೆರಳಿಸುವ ಪೋಸ್ಟ್: ಸೌದಿಯಿಂದ ಬಂದಿಳಿದ ಬಂಟ್ವಾಳದ ಯುವಕ ಅರೆಸ್ಟ್
ಸೌದಿ ಅರೇಬಿಯಾದಲ್ಲಿರುವ ಬಂಟ್ವಾಳದ ಯುವಕ ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದ ಪ್ರಕರಣದಡಿ ಆತ ಭಾರತಕ್ಕೆ ಬಂದಿಳಿದ ತಕ್ಷಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಪಾಣೆಮಂಗಳೂರಿನ 27 ವರ್ಷದ ಅಬ್ದುಲ್ ಖಾದರ್ ನೇಹಾದ್ ಬಂಧಿತ ಆರೋಪಿ. ಆತ
ಅನ್ಯ ಜಾತಿ ಯುವತಿಯ ಮದುವೆಯಾದ ಮಗ: ತಾಯಿಯನ್ನು ಥಳಿಸಿದ ಪೊಲೀಸ್
ಮಗ ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಆತನ ತಾಯಿ ಮೇಲೆ ಧಾರವಾಡದ ಕುಂದಗೋಳ ಠಾಣೆಯ ಪೊಲೀಸರು ಮನ ಬಂದಂತೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಧಾರವಾಡದ ಕುಂದಗೋಳ ತಾಲೂಕಿನ ಮುಳ್ಳಳಿ ಗ್ರಾಮದ ಯುವಕ ದೇವರಾಜ್ ಎದುರು ಮನೆ ಯುವತಿ ಜೊತೆ
MGNREGA ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ
ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (MGNREGA) ಸಮಗ್ರ ಬದಲಾವಣೆ ಮೂಲಕ ಹೊಸದಾಗಿ ಗ್ರಾಮೀಣ ಉದ್ಯೋಗ ಯೋಜನೆ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯೋಜನೆಯ
ಹಲವು ವಿಷಯ ಚರ್ಚೆ ಆಗಬೇಕಿದೆ, ಅಧಿವೇಶನ ಒಂದು ವಾರ ವಿಸ್ತರಿಸಿ: ಸ್ಪೀಕರ್‌ಗೆ ಆರ್ ಅಶೋಕ ಮನವಿ
ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್ ಅಶೋಕ, ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್
ಸೈಬರ್ ವಂಚಕರ ನಂಬಿ 8.3 ಕೋಟಿ ರೂಪಾಯಿ ಕಳೆದುಕೊಂಡ ಬೆಂಗಳೂರು ಉದ್ಯಮಿ
ಬೆಂಗಳೂರಿನ ಹಿರಿಯ ಉದ್ಯಮಿಯೊಬ್ಬರು ಸೈಬರ್ ವಂಚಕರ ಬಲೆಗೆ ಸಿಲುಕಿ 8.3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ರಾಜೇಂದ್ರ ನಾಯ್ಡು (71) ವಂಚನೆಗೆ ಒಳಗಾದವರು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್ ಖದೀಮರು ಅವರಿಂದ ಹಣ ದೋಚಿಸಿದ್ದಾರೆ. ಸೈಬರ್ ವಂಚಕರ ಜಾಲ ನಾಯ್ಡು




