kannada news
ವೀಕೆಂಡ್ ಪಾರ್ಟಿಗೆ ಪೊಲೀಸರ ಭೇಟಿ: ಭಯಗೊಂಡು ಬಾಲ್ಕನಿಯಿಂದ ಹಾರಿದ ಯುವತಿ ಸ್ಥಿತಿ ಗಂಭೀರ
ಹೆಚ್‌ಎಎಲ್‌ನ ಎಇಸಿಎಸ್ ಲೇಔಟ್‌ನಲ್ಲಿರುವ ಹೊಟೇಲ್‌ವೊಂದರಲ್ಲಿ ಸ್ನೇಹಿತರೊಂದಿಗೆ ವೀಕೆಂಡ್ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ಧಿಡೀರ್ ಬಂದ ಕಾರಣ ಭಯಗೊಂಡ ಯುವತಿ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ತಲೆ, ಮೈಕೈಗೆ ಗಂಭೀರ ಗಾಯಗಳಾಗಿದ್ದು, ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದುಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಶನಿವಾರ ರಾತ್ರಿ ಯುವತಿ ಸೇರಿದಂತೆ ಎಂಟು ಸ್ನೇಹಿತರು ಸೇರಿ ಪಾರ್ಟಿ ಆಯೋಜಿಸಿದ್ದರು. ಪಾರ್ಟಿಗಾಗಿ ಮೂರು ರೂಂ ಬುಕ್ ಮಾಡಿದ್ದರು. ಬಳಿಕ
ದೆಹಲಿ ಪೊಲೀಸ್ ನೋಟಿಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ದೆಹಲಿ ಪೊಲೀಸ್ ನೋಟಿಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ, ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.
ತಪಾಸಣೆಯೆಂದು ಮನೆಗೆ ದಾಳಿ ಮಾಡಿ ದರೋಡೆ ಮಾಡುತ್ತಿದ್ದ ನಕಲಿ ಪೊಲೀಸ್ ಅರೆಸ್ಟ್
ಖಾಸಗಿ ಕಂಪನಿ ಉದ್ಯೋಗಿಯ ಮನೆಗೆ ತಪಾಸಣೆಗೆಂದು ಬಂದಿರುವುದಾಗಿ ಹೇಳಿ ದರೋಡೆ ಮಾಡಿದ್ದ ನಕಲಿ ಪೊಲೀಸ್ ಮತ್ತು ಮೂವರು ಸಹಚರರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಚಟುವಟಿಕೆ ಆರೋಪ ಹೊರಿಸಿ ಮನೆಗೆ ನುಗ್ಗಿ ತಪಾಸಣೆ ಎಂದು ಹೇಳಿ ಹಣ ಸುಲಿಗೆ ಮಾಡಿದ್ದ
ಮೈ ಕೊರೆಯುವ ಚಳಿಗೆ ಬೀದರ್ ಥಂಡಾ, ಜನವರಿಯಲ್ಲಿ 5 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತ?
ಮೈಕೊರೆಯುವ ಚಳಿಗೆ ಬೀದರ್ ಜಿಲ್ಲೆಯ ಜನರು ತತ್ತರಿಸಿದ್ದಾರೆ, ಇಲ್ಲಿ ಕನಿಷ್ಠ ತಾಪಮಾನ ತೀವ್ರ ಕುಸಿತವಾಗಿದ್ದು, 7.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಜನ ಹೈರಾಣಾಗಿದ್ದಾರೆ. ಜನವರಿ ತಿಂಗಳಲ್ಲಿ ಇನ್ನಷ್ಟು ಚಳಿ ಇರಲಿದ್ದು, 5 ಡಿಗ್ರಿ ವರೆಗೂ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ
ತುರುವೇಕೆರೆ ದೇಗುಲ ಹುಂಡಿ ಹಣ, ದೇವರ ಸರ ಕಳವು
ತುರುವೇಕೆರೆ ತಾಲೂಕಿನ ಅರೆಹಳ್ಳಿಯಲ್ಲಿರುವ ಬಸವೇಶ್ವರ ಸ್ವಾಮಿಯ ಕತ್ತು ಅಲಂಕರಿಸಿದ್ದ 500 ಗ್ರಾಂ ತೂಕದ ಬೆಳ್ಳಿಯ ಸರ ಮತ್ತು ದೇವಾಲಯದ ಹುಂಡಿಯಲ್ಲಿದ್ದ 10 ಸಾವಿರರೂಪಾಯಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಅರೆಹಳ್ಳಿ ಗ್ರಾಮ ದೇವರಾಗಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿರುವ ರುದ್ರೇಶ್ ಬೆಳಗ್ಗೆ ಪೂಜೆಗಾಗಿ
ಬೆಂಗಳೂರಿನಲ್ಲಿ ಮಾಟ ದೋಷ ಪರಿಹಾರ ಮಾಡುತ್ತೇವೆ ಅಂತ ಮಹಿಳೆಯ 48 ಗ್ರಾಂ ಚಿನ್ನ ದೋಚಿದ ನಕಲಿ ಸ್ವಾಮೀಜಿಗಳು
ಮಾಟ ದೋಷಗಳನ್ನು ಪರಿಹರಿಸುವುದಾಗಿ ನಂಬಿಸಿದ ನಕಲಿ ಸ್ವಾಮೀಜಿಗಳಿಬ್ಬರು ಮಹಿಳೆಯ 48 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ದೇವಸ್ಥಾನದ ಅನ್ನದಾನಕ್ಕೆ ಸಹಾಯ ಕೇಳಿಕೊಂಡು ಮಲ್ಲೇಶ್ವರಂನ ಈಸ್ಟ್ ಪಾರ್ಕ್ ರಸ್ತೆಯ ನಿವಾಸಿಯೊಬ್ಬರ ಮನೆಗೆ ಬಂದಿದ್ದ ಇಬ್ಬರು ನಕಲಿ ಸ್ವಾಮಿಗಳಿಗೆ
ಜಿಬಿಎ ಚುನಾವಣೆ- ಇಂದಿನಿಂದ 369 ವಾರ್ಡ್ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಕೆ ಶಿವಕುಮಾರ್
” ಇಂದಿನಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್
ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆಯಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ
ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಭಾನುವಾರ ನಿಧನರಾದರು. ಅವರಿಗೆ 94 ವರ್ಷ ಆಗಿತ್ತು. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ. ಅವರ ನಿಧನ ಪ್ರಯುಕ್ತ ಗೌರವಾರ್ಥವಾಗಿ ಡಿ.
ರಾಮನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ರಾಮನಗರದ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ರೈತ ಪುಟ್ಟಮಾದೇಗೌಡ (48) ಆನೆ ದಾಳಿಗೆ ಬಲಿಯಾದವರು. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಮಾದೇಗೌಡ ಸ್ಥಳದಲ್ಲೇ ಅಸು ನೀಗಿದ್ದಾರೆ. ಬನ್ನೇರುಘಟ್ಟ ಅರಣ್ಯ
ಮತಕಳವು ವಿರುದ್ಧ ಕಾಂಗ್ರೆಸ್ ಹೋರಾಟ, ವಾಹನಗಳ ದೆಹಲಿ ಪ್ರವೇಶಕ್ಕೆ ಬಿಜೆಪಿ ಸರ್ಕಾರ ತಡೆ: ಡಿಕೆ ಶಿವಕುಮಾರ್ ಆಕ್ರೋಶ
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ಹೋರಾಟ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ , ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶವನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿ




