kannada news
ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ ಟೆಕ್ಕಿಗೆ 40 ಲಕ್ಷ ರೂ. ವಂಚಿಸಿದ್ದ ನಕಲಿ ಸ್ವಾಮೀಜಿ ಸಹಚರ ಅರೆಸ್ಟ್
ಬೆಂಗಳೂರಿನಲ್ಲಿ ಕೆಲವು ತಿಂಗಳ ಹಿಂದೆ ಟೆಕ್ಕಿಯೊಬ್ಬರಿಗೆ ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ನಂಬಿಸಿ 40 ಲಕ್ಷ ರೂ. ವಂಚಿಸಿದ್ದ ವಿಜಯ್ ಎಂಬ ನಕಲಿ ಸ್ವಾಮೀಜಿಯನ್ನು ಬಂಧಿಸಿರುವ ಜ್ಞಾನ ಭಾರತಿ ಪೊಲೀಸರು ಈಗ ಆತನ ಸಹಚರ ನನ್ನೂ ಬಂಧಿಸಿ ಜೈಲಿಟ್ಟಿದ್ದಾರೆ. ಟೆಕ್ಕಿ ತೇಜಸ್ ಎಂಬವರು ನಕಲಿ ಸ್ವಾಮೀಜಿ ಮತ್ತು ಆತನ ಸಹಚರರಿಂದ ಮೋಸ ಹೋದವರು. ವಂಚಕರು ಸೂಚಿಸಿದ್ದ ಔಷಧಿ ಸೇವನೆ ಬಳಿಕ ತೀವ್ರ ಅನಾರೋಗ್ಯ ಸಮಸ್ಯೆ ಎದುರಾದಾಗ ಪೊಲೀಸರಿಗೆ ದೂರು ನೀಡಿದ್ದರು.
ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ, ಶ್ವೇತಪತ್ರ ಬಿಡುಗಡೆ ಮಾಡಿ: ಆರ್ ಅಶೋಕ
ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಸರ್ಕಾರದ ಅಜೆಂಡಾ: ಡಿಸಿಎಂ
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ನಮ್ಮ ಸರ್ಕಾರದ ಅಜೆಂಡಾ. ನಮ್ಮ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ
2.84 ಲಕ್ಷ ಖಾಲಿ ಹುದ್ದೆ, 24,300 ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳನ್ನು (Government Jobs) ಭರ್ತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ. ಕಳೆದ ವರ್ಷ ಸರ್ಕಾರಿ ಇಲಾಖೆಗಳಲ್ಲಿ 2.76 ಲಕ್ಷ
ಹಿರೇಕೆರೂರಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್ ವಿಲೇವಾರಿಗೆ ಕ್ರಮ: ಸಚಿವ ಸಂತೋಷ್ ಲಾಡ್
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್‌ಗಳಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್ ಎಸ್ ಲಾಡ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಹಿರೇಕೆರೂರು ಕ್ಷೇತ್ರದ ಶಾಸಕರಾದ ಯು ಬಿ ಬಣಕಾರ್
ಭೂ ಕಂದಾಯ ಕಾಯ್ದೆಗೆ ತಿಂಗಳೊಳಗೆ ಅಧಿಸೂಚನೆ: ಕೃಷ್ಣ ಬೈರೇಗೌಡ
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ
ಎಸ್ ನಿಜಲಿಂಗಪ್ಪ ದಕ್ಷ ,ಪ್ರಾಮಾಣಿಕ ವ್ಯಕ್ತಿ, ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಎಸ್ ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ರೈಲಿನಲ್ಲಿ ವ್ಯಾಪಾರಿಯ ನಿದ್ದೆ: 5.53 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಕಳ್ಳ ಎಸ್ಕೇಪ್
ಚಿನ್ನದ ವ್ಯಾಪಾರಿಯೊಬ್ಬರು ಸೊಲ್ಲಾಪುರದಿಂದ ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುವಾಗ ನಿದ್ರೆಗೆ ಜಾರಿದ್ದು, ಅವರ ಬಳಿ ಇದ್ದ 5.53 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ. ಚಿನ್ನದ ವ್ಯಾಪಾರಿ ಸಿದ್ಧೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೊಲ್ಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ದ್ರೋಹ ಮಾಡಿದ್ದಾರೆ: ಆರ್ ಅಶೋಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ರೈತರ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ. ರೈತರಿಗೆ ದ್ರೋಹ ಮಾಡಿದ್ದಾರೆ, ಈ ಸರ್ಕಾರಕ್ಕೆ ಸಂವೇದನೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ದೂರಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು,
ಗ್ಯಾರಂಟಿಯಿಂದ ಹೊಟ್ಟೆ ತುಂಬಲ್ಲ: ಛಲವಾದಿ ನಾರಾಯಣಸ್ವಾಮಿ
ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹೊಟ್ಟೆ ತುಂಬಲ್ಲ ಬದಲಾಗಿ ಸರಕಾರಕ್ಕೆ ಹೊರೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆರ್ಥಿಕ ವ್ಯವಸ್ಥೆ




