kannada news
ರೇಡಿಯೋಲಾಜಿಸ್ಟ್‌ನಿಂದ ಲೈಂಗಿಕ ಕಿರುಕುಳ ದೂರು ನೀಡಿದಾಕೆ ವಿರುದ್ಧ ಎಫ್‌ಐಆರ್: ಆನೇಕಲ್ ಪೊಲೀಸ್ ವಿರುದ್ಧ ಸಾರ್ವಜನಿಕರ ಆಕ್ರೋಶ
ರೇಡಿಯೋಲಾಜಿಸ್ಟ್‌ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಪ್ರಕರಣ ದಾಖಲಿಸಿದರೆ ಆನೇಕಲ್ ಪೊಲೀಸರು ಆಕೆಯ ವಿರುದ್ಧವೇ ಎಫ್‌ಐಆರ್ ದಾಖಲಿಸಿದ್ದು, ಇದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣದಾಸೆಗೆ ಪೊಲೀಸರು ಆರೋಪಿ ಪರವಾಗಿ ಸಂತ್ರಸ್ತೆಯ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ನ್ಯಾಯ ದೊರಕಿಸಿ ಕೊಡಿ ಎಂದು ಸಂತ್ರಸ್ತೆ ಬೇಡಿಕೊಂಡರೆ ಆನೇಕಲ್ ಪೊಲೀಸರು ದೂರಿನ ದಿಕ್ಕು ತಪ್ಪಿಸಲು ಮುಂದಾಗಿ ಸಂತ್ರಸ್ತೆ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆನೇಕಲ್ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ
ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು: ಸಿಎಂ ಸಿದ್ದರಾಮಯ್ಯ
ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ
ಖರೀದಿ ಮಾಡುವ ಶಕ್ತಿ ನನಗಿದೆ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಕೆ ಶಿವಕುಮಾರ್
ನನ್ನ ಶ್ರಮ, ಸಂಪಾದನೆ, ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ, ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ವಿಮಾನ ಪ್ರಯಾಣ ದರಕ್ಕೆ ಕೇಂದ್ರ ಬ್ರೇಕ್: 500 ಕಿ.ಮೀ. 7500 ರೂ. ನಿಗದಿ!
ನವದೆಹಲಿ: ಇಂಡಿಗೋ ಸಂಸ್ಥೆಯ ಎಲ್ಲಾ ದೇಶೀಯ ವಿಮಾನಗಳ ವಿಳಂಬ ಮತ್ತು ರದ್ದತಿ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಬೇಕಾಬಿಟ್ಟಿ ದರ ನಿಗದಿ ಮಾಡಿ ಪ್ರಯಾಣಿಕರ ಲೂಟಿಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ಕಳೆದ 5 ದಿನಗಳಿಂದ ಇಂಡಿಗೋ ಸಂಸ್ಥೆಯ ವಿಮಾನಗಳ
ಕೊಟ್ಟ ಮಾತಿನಂತೆ 142 ಭರವಸೆ ಈಡೇರಿಸಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್
ಹಾಸನ: “ನಮ್ಮದು ನುಡಿದಂತೆ ನಡೆವ ಸರ್ಕಾರ. ಕೊಟ್ಟ ಮಾತಿನಂತೆ 142 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ನಮ್ಮ ಸರ್ಕಾರದ ಸಾಧನೆಗಳಿಗೆ ಜನರ ಕಣ್ಣುಗಳೇ ಸಾಕ್ಷಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ಶನಿವಾರ ನಡೆದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ
ಕಾರವಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಜೈಲರ್, ಪೊಲೀಸರ ಮೇಲೆ ಹಲ್ಲೆ!
ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ
ಮೀಸಲಾತಿ ಬಗ್ಗೆ ಜನಪ್ರತಿನಿಧಿಗಳು ತುಟಿಬಿಚ್ಚಿ: ಮಾಜಿ ಸಂಸದ ಉಗ್ರಪ್ಪ ಕಿಡಿ
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳದ ಕಾಯ್ದೆಗೆ ಕೆಎಟಿನಲ್ಲಿ ಸೆಟಸೈಡ್ ಹಾಗೂ ಹೈಕೋರ್ಟ್ ನಲ್ಲಿ ಸ್ಟೇ ಮಾಡಲಾಗಿದೆ. ಇದನ್ನು ನೋಡಿದರೆ ಎಸ್ಸಿ, ಎಸ್ಟಿ, OBC ಸಮುದಾಯಕ್ಕೆ ಅನ್ಯಾಯ ಆಗ್ತಿದೆ. ಇದಕ್ಕೆ ತಕ್ಷಣ ಕಾನೂನು ತಿದ್ದುಪಡಿ ತರಬೇಕು ಹಾಗೂ ಶೆಡ್ಯೂಲ್
ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ
ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ
ಕಾರು ಅಪಘಾತದಲ್ಲಿ ಸಜೀವದಹನಗೊಂಡ ಲೋಕಾಯುಕ್ತ ಇನ್ ಸ್ಪೆಕ್ಟರ್
ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದ ಪರಿಣಾಮ ಹಾವೇರಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನಗೊಂಡ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರು ಅಪಘಾತದಲ್ಲಿ ಸಜೀವ
ಹೈನುಗಾರರು, ಹೂ ಬೆಳೆಗಾರರ ಕಲ್ಯಾಣಕ್ಕೆ 2 ಮಂಡಿಸಿದ ಸಂಸದ ಡಾ.ಕೆ ಸುಧಾಕರ್
ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. 1. ಹೈನುಗಾರರ (ಕಲ್ಯಾಣ) ಮಸೂದೆ, 2024 ಈ ಮಸೂದೆಯು ಭಾರತದ 7




