kannada news
ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಗಾಯಾಳುಗಳ ಆರೋಗ್ಯ ಪರಿಸ್ಥಿತಿ ಹಾಗೂ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದು ಉತ್ತಮ ಆರೈಕೆ ಒದಗಿಸಲು ಸೂಚಿಸಿದರು. ಸರಕಾರದಿಂದ ಭದ್ರತೆ, ನೆರವು, ಪರಿಹಾರ ನೀಡುವ ಭರವಸೆ ನೀಡಿದರು.
ನವ ವಿವಾಹಿತೆ ಗಾನವಿ ಸುಸೈಡ್ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಗಂಡ ಸೂರಜ್, ಅತ್ತೆ ಸ್ಥಿತಿ ಗಂಭೀರ
ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಗಾನವಿಯ ಪತಿ ಸೂರಜ್ ಸುಸೈಡ್ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ ಅತ್ತೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾನವಿ ಆತ್ಮಹತ್ಯೆ ಬಳಿಕ ಅವಮಾನದಿಂದ ನೊಂದಿದ್ದ ಸೂರಜ್ ತನ್ನ ತಾಯಿ ಜಯಂತಿ ಮತ್ತು ಸೋದರ ಸಂಜಯ್ ಜೊತೆ
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್
ಜನಮನ್ನಣೆಗೆ ಪಾತ್ರರಾಗಿದ್ದ ನಾಯಕ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ
ದಾವಣಗೆರೆ: ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಳಿವಯಸ್ಸಿನಲ್ಲಿಯೂ ಅತ್ಯಂತ
ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯದ ಬಿಜೆಪಿ ನಾಯಕರು ಯಾಕೆ ಪ್ರಶ್ನಿಸುವುದಿಲ್ಲ ಎಂದು ಸಿಎಂ ಪ್ರಶ್ನೆ
ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು
ಮದುವೆ ಆಗಲು ಒತ್ತಡ ಹೇರಿದ ನರ್ಸ್ ಕತ್ತು ಸೀಳಿ ಕೊಂದ ಸಹದ್ಯೋಗಿ!
ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತುಕೊಯ್ದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೊಲೆ ಮಾಡಿ ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಮೃತ ಯುವತಿಯ ಸಹದ್ಯೋಗಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ (39) ಎಂಬುವರನ್ನು ಕುಮಾರಸ್ವಾಮಿ ಲೇಔಟ್ ನ ಪ್ರಗತಿಪುರದ ಬಾಡಿಗೆ ಮನೆಯಲ್ಲಿ
ರೈತರ ನೆರವಿಗೆ ಕ್ರೆಡಲ್ನಿಂದ ‘ಪಿಎಂ ಕುಸುಮ್ ಬಿ’ ಸಹಾಯವಾಣಿ ಕೇಂದ್ರ
ಬೆಂಗಳೂರು: ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್ 23ರಿಂದ 2025ರ ಡಿಸೆಂಬರ್ 31ರವರೆಗೆ ಸಹಾಯವಾಣಿ
ಟಿಪ್ಪರ್ ಡಿಕ್ಕಿ: ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುರ್ಮರಣ
ಚಿಕ್ಕಬಳ್ಳಾಪುರ: ಟಿಪ್ಪರ್ಗೆ ಬೈಕ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ
ಅರಮನೆ ಮುಂಭಾಗ ನೈಟ್ರೊಜನ್ ಸಿಲಿಂಡರ್ ಸ್ಫೋಟ: ಬಲೂನ್ ವ್ಯಾಪಾರಿ ಸಾವು
ಮೈಸೂರು: ಅರಮನೆ ಮುಂಭಾಗದಲ್ಲಿ ಬಲೂನ್ ಗೆ ಗಾಳಿ ತುಂಬುವ ಸಿಲಿಂಡರ್ ಸ್ಫೋಟಗೊಂಡು, ಬಲೂನ್ ವ್ಯಾಪಾರಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಮನೆಯ ಜಯಮಾರ್ತಂಡ ದ್ವಾರದ ಬಳಿ ರಾತ್ರಿ 9 ಗಂಟೆ ಈ ದುರ್ಘಟನೆ ನಡೆದಿದೆ. ಮೃತರ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರ ಪೈಕಿ
ಕಾಂಬೊಡಿಯಾದಲ್ಲಿ ವಿಷ್ಣುವಿನ ಪ್ರತಿಮೆ ನೆಲಸಮ: ಭಾರತ ಖಂಡನೆ
ಕಾಂಬೊಡಿಯಾದಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಲಾಗಿದೆ. ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಹಲವು ದಶಕಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಥಾಯ್ಲೆಂಡ್ ಸೇನೆ 30 ಅಡಿ ಎತ್ತರದ ವಿಷ್ಣುವಿನ ಪ್ರತಿಮೆಯನ್ನು ನೆಲಸಮಗೊಳಿಸಿದೆ. ವಿಷ್ಣು




