Thursday, November 13, 2025
Menu

ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಂ.ಎನ್. ಕುಮಾರ್ ಅರೆಸ್ಟ್

ಬೆಂಗಳೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ (Hassan) ಬಂಧಿಸಿದ್ದಾರೆ. 1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್

ಬಿಬಿಎಂಪಿ ಬಜೆಟ್ ಮಂಡನೆ: ಪ್ರತಿ ವಾರ್ಡ್ ಅಭಿವೃದ್ಧಿಗೆ 2.5 ಕೋಟಿ, ಕಸದ ಮೇಲೆ ತೆರಿಗೆ!

ಬೆಂಗಳೂರು:  ಹಲವು ಬಾರಿ ಮುಂದೂಡಿಕೆ ನಂತರ ಕೊನೆಗೂ ಇಂದು 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡಿಸಲಾಗಿದೆ. ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್​ ಬಜೆಟ್ ಮಂಡನೆ ಮಾಡಿದ್ದಾರೆ. ಜನಪ್ರತಿನಿಧಿಗಳಿಲ್ಲದೇ ಸತತ ಐದನೇ ಬಾರಿಗೆ ಬಜೆಟ್​ ಮಂಡಿಸಿದ್ದು, ಇದರಲ್ಲಿ ಬ್ರ್ಯಾಂಡ್

ಎಂಎಸ್ಐಲ್ ನಿಂದ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸಿದ್ಧತೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಸರಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್‌ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತಕ್ಕೆ ಮೂವರು ಸಾವು

ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ತಿಮ್ಮಣ್ಣನಹಳ್ಳಿಯ ಶಂಕರಿಬಾಯಿ (65), ಕುಮಾರನಾಯ್ಕ್ (46), ಶ್ವೇತಾ (38) ಎಂದು ಗುರುತಿಸಲಾಗಿದೆ.

ಬಿಎಸ್ ಯಡಿಯೂರಪ್ಪ ಕುಟುಂಬದ ಅಂತ್ಯ ಆರಂಭ: ಬಸನಗೌಡ ಪಾಟೀಲ್ ಯತ್ನಾಳ್

ನಮಗೆ ನಾಳೆಯಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ಅಂತ್ಯ ನಾಳೆಯಿಂದ ಆರಂಭವಾಗಲಿದೆ ಎಂದು ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದರಿಂದ ನಮಗೆ ಪೂರ್ಣ

ಸೈಬರ್ ವಂಚಕರ ಬೆದರಿಕೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ವಿಡಿಯೋ ಕಾಲ್ ಮಾಡಿ ನಗ್ನ ‌ಚಿತ್ರಗಳಿವೆ ಎನ್ನುವ ಸೈಬರ್ ವಂಚಕರ ಬೆದರಿಕೆಯಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಖಾನಾಪುರ ‌ತಾಲೂಕಿನ ಬೀಡಿ ಗ್ರಾಮದಲ್ಲಿ ‌ನಡೆದಿದೆ. ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83), ಪಾವಿಯಾ ನಜರತ್

ಮಚ್ಚಿಡಿದು ರೀಲ್ಸ್ ಮಾಡಿದ್ದ ರಜತ್ ವಿನಯ್ ಗೆ ಜಾಮೀನು

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಚ್ಚು ಬಳಸಿದ ಬಂಧಿತರಾಗಿರುವ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಗಳಾದ ರಜತ್‌, ವಿನಯ್‌ ಗೌಡ ಅವರಿಗೆ ಜಾಮೀನು ನೀಡಿ ನಗರದ ಸೆಷನ್ಸ್‌ ನ್ಯಾಯಾಲಯ ಆದೇಶ ನೀಡಿದೆ. ಬಿಗ್‌ಬಾಸ್‌ 11 ನೇ ಸೀಸನ್‌ನ ಸ್ಪರ್ಧಿಗಳಾಗಿದ್ದ ರಜತ್‌ ಹಾಗೂ ವಿನಯ್‌ ಗೌಡ

ಯುಗಾದಿಗೆ ಕಿರುತೆರೆ ಮೇಲೆ ಪ್ರಪಥಮ ಬಾರಿಗೆ `ಯುಐ’ ಪ್ರದರ್ಶನ

ಬೆಂಗಳೂರು: ಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ ನಟಿಸಿರುವ ಹೊಚ್ಚಹೊಸ ಚಲನಚಿತ್ರ ‘UI’ ಮೊಟ್ಟಮೊದಲ ಬಾರಿಗೆ ನಿಮ್ಮ ಜೀ಼ ಕನ್ನಡ ವಾಹಿನಿಯಲ್ಲಿ ಭಾನುವಾರ ಸಂಜೆ 4:30 ಕ್ಕೆ ಪ್ರಸಾರ ಆಗಲಿದೆ. ತಾವೇ ನಿರ್ದೇಶನ ಮಾಡಿದ UI ಚಿತ್ರದಲ್ಲಿ ಉಪೇಂದ್ರ ಅವರು

ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದರು. ಡಾ. ಬಿ.ಆರ್. ಅಂಬೇಡ್ಕರ್

ಕೊಲೆಗೆ ಯತ್ನ: ಸಚಿವ ರಾಜಣ್ಣ ಪುತ್ರ ರಾಜೇಂದ್ರ ಡಿಜಿಪಿಗೆ ದೂರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಧುಬಲೆ ಪ್ರಕರಣ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ತಮ್ಮ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ನಗರದ ನೃಪತುಂಗ