kannada news
ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಶುಕ್ರವಾರ ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲಾಗುವುದಿಲ್ಲ, ಒಟ್ಟು 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಈ ಹಿಂದೆ ನಾನೇ ಹೇಳಿದ್ದೇನೆ. ಅದರಲ್ಲಿ ದೈಹಿಕ ಶಿಕ್ಷಕರೂ ಸೇರಿದ್ದಾರೆ. ಆದಷ್ಟು ಬೇಗ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ.
ಟ್ರಂಪ್ ತೆರಿಗೆ ಬರೆ ನಡುವೆ ಭಾರತದ ಜಿಡಿಪಿ ದಾಖಲೆಯ ಶೇ. 8.2ಕ್ಕೆ ಜಿಗಿತ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಹೇರಿಕೆ ಸೇರಿದಂತೆ ಹಲವು ಸವಾಲುಗಳ ನಡುವೆ ಭಾರತದ ಆರ್ಥಿಕ ಅಭಿವೃದ್ಧಿ ದರ ವರ್ಷದ ಎರಡನೇ ತ್ರೈಮಾಸಿಕದಲ್ಲಿ ದಾಖಲೆಯ ಶೇ.8.2 ಏರಿಕೆ ದಾಖಲಿಸಿದೆ. ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಪ್ರಸಕ್ತ
69,922 ಅಂಗನವಾಡಿಗಳಿಂದ 40 ಲಕ್ಷ ಮಹಿಳೆ, ಮಕ್ಕಳಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಐಸಿಡಿಎಸ್, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಅಕ್ರಮ ಹಣ ವರ್ಗಾವಣೆ: ವಿನ್‌ಜೋ ಸಂಸ್ಥಾಪಕ ಸೇರಿ ಇಬ್ಬರ ಬಂಧನ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್ ‘ವಿನ್‌ಜೋ’ ಸಂಸ್ಥಾಪಕ ಸೌಮ್ಯಸಿಂಗ್ ರಾಥೋಡ್ ಹಾಗೂ ಪಾವನ್ ನಂದಾರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ನ.18ರಿಂದ ನ.22ರವರೆಗೆ ವಿನ್‌ಜೋ ಮತ್ತು ಈ ಕಂಪನಿಗೆ ಸೇರಿದ ಗೇಮ್ಜ್‌ಕ್ರಾಫ್ಟ್ ಎಂಬ
ಷೇರ್ ಮಾರ್ಕೆಟ್ ಹೆಸರಲ್ಲಿ ಶೃಂಗೇರಿಯ ವ್ಯಕ್ತಿಗೆ 3.27 ಕೋಟಿ ರೂ. ನಾಮ
ಶೃಂಗೇರಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೆಸರಲ್ಲಿ ಆನ್‌ಲೈನ್ ವಂಚಕರು 3 ಕೋಟಿ 27 ಲಕ್ಷ ರೂ.ಲೂಟಿ ಹೊಡೆದಿರುವುದು ಬಹಿರಂಗಗೊಂಡಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಲ್ಲಿ ನಕಲಿ ಖಾತೆ ತೆರೆದು ಶೃಂಗೇರಿಯ ನಟರಾಜನ್ ಎಂಬರ ಹಣ ದೋಚಿರುವ ವಂಚಕರ ವಿರುದ್ಧ ಚಿಕ್ಕಮಗಳೂರು
ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ಬೇಕಿದ್ರೆ ಅರ್ಹತಾ ಪರೀಕ್ಷೆ ಪಾಸ್ ಕಡ್ಡಾಯ
ಸರ್ಕಾರ ಶಾಲಾ ಶಿಕ್ಷಕರ ಬಡ್ತಿ ನೀತಿಯಲ್ಲಿ ಮಹತ್ತರ ಬದಲಾವಣೆಯನ್ನು ಮಾಡಿದ್ದು, ಶಿಕ್ಷಕರಿಗೆ ಬಡ್ತಿ ಪಡೆಯಲು ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಇದು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಮಾತ್ರ ಅನ್ವಯವಾಗುವುದು. ಶಿಕ್ಷಕರು ಕನಿಷ್ಠ 10 ವರ್ಷ ಸೇವೆ ಪೂರೈಸಿರಬೇಕು, ಬಿಎಡ್
ಹೆಚ್‌ಎಎಲ್ ವಸತಿಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಬಿಡದಿ ಮೂಲದ ಬಿ ಮಂಜುನಾಥ್ (40) ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ್ ಅವಿವಾಹಿತರಾಗಿದ್ದು, ಗುತ್ತಿಗೆ ಆಧಾರದ ಹೆಚ್‌ಎಎಲ್‌ನಲ್ಲಿ ಮೇಲೆ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬ್ಯಾನ್ ಆಗುತ್ತಾ?
ರಾಜ್ಯ ಸರ್ಕಾರ ನೇಮಿಸಿದ ತಜ್ಞರ ಸಮಿತಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಶಿಫಾರಸು ಮಾಡಿ ವರದಿ ಸಲ್ಲಿಕೆ ಮಾಡಿದೆ. ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ ಬೆನ್ನಲ್ಲೇ ಸಮಿತಿ ರಚಿಸಲಾಗಿತ್ತು. ಸಮಿತಿಯಿಂದ ಬೈಕ್
ಹಿರಿಯೂರಿನಲ್ಲಿ ರಸ್ತೆ ಅಪಘಾತ: ಇಬ್ಬರ ಸಾವು
ಚಿತ್ರದುರ್ಗದ ಹಿರಿಯೂರು ತಾಲೂಕಿನ ಇಂಡಸ್ ಕಟ್ಟೆಯಲ್ಲಿ ಕಬ್ಬಿಣ ತುಂಬಿದ ಲಾರಿಗೆ ಹಿಂಬದಿಯಿಂದ ಕೋಳಿ ತುಂಬಿದ ಬುಲೆರೊ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರಿನ ತಿಪಟೂರು ನಿವಾಸಿಗಳಾದ ಚಂದನ್ ಗೌಡ( 22), ಕುಮಾರ್ (17) ಮೃತಪಟ್ಟವರು. ಬುಲೆರೊ ಚಾಲಕನ ಅತಿ ವೇಗ
ಬೆಂಗಳೂರಿನಲ್ಲಿ ಲಾಕಪ್ ಡೆತ್: ಹೊಡೆದು ಮದ್ಯ ರಿಹ್ಯಾಬ್ ಸೆಂಟರ್‌ಗೆ ಸೇರಿಸಿದ್ದರಾ ಪೊಲೀಸರು?
ಬೆಂಗಳೂರಿನ ವಿವೇಕ ನಗರ ಪೊಲೀಸ್ ಕಸ್ಟಡಿಯಲ್ಲಿ ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಮದ್ಯ ರಿಹ್ಯಾಬ್ ಸೆಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಸಿಂಗಮಲೆ ಮೃತಪಟ್ಟವರು. ಕಸ್ಟಡಿಯಲ್ಲಿರುವಾಗ ಪೊಲೀಸರು ಸಂಗಮಲೆಗೆ ಹೊಡೆದಿದ್ದು, ಬಳಿಕ ಮಾದಕನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಯ ರಿಹ್ಯಾಬ್ ಸೆಂಟರ್‌ಗೆ ದಾಖಲಿಸಿದ್ದರು. ಅಲ್ಲಿಗೆ




