Menu

12,000 ವರ್ಷದ ನಂತರ ಸ್ಫೋಟಿಸಿದ ಇಥಿಯೋಪಿಯಾ ಜ್ವಾಲಾಮುಖಿ: ದೆಹಲಿ ತಲುಪಿದ ಬೂದಿ!

ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತ ಪ್ರವೇಶಿಸಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು, ಭಾರೀ ಪ್ರಮಾಣದ ಬೂದಿ ಹಲವು ದೇಶಗಳಿಗೆ ವ್ಯಾಪಿಸುತ್ತಿದೆ. ಜ್ವಾಲಾಮುಖಿ ಸ್ಫೋಟದಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಿಮಾನಗಳು ಮರಳಿದರೆ, ಇನ್ನು ಕೆಲವು ಮಾರ್ಗ ಬದಲಿಸಿವೆ. ವಿಮಾನ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಭಾರತೀಯ ವಿಮಾನಗಳಿಗೆ ಎಚ್ಚರಿಕೆ ನೀಡಲಾಗಿದೆ. ಹಲವು ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.

ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

ಹಾಸನ:ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಂಬಿಹಳ್ಳಿಯ ಗೋಪಾಲ್ (27), ದೀಪು (24) ಎಂದು ಮೃತಪಟ್ಟ ದಂಪತಿಯನ್ನು ಗುರುತಿಸಲಾಗಿದೆ ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು.

BREAKING ಬಾಲಿವುಡ್ ಹೀಮ್ಯಾನ್ ಖ್ಯಾತಿಯ ಹಿರಿಯ ನಟ ಧರ್ಮೆಂದ್ರ ಇನ್ನಿಲ್ಲ

ಮುಂಬೈ: ಅನಾರೋಗ್ಯದಿಂದ ಚೇತರಿಸಿಕೊಂಡಿದ್ದ ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೆಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡು ಮರಳಿದ್ದ ಧರ್ಮೆಂದ್ರ ಅವರ ಆರೋಗ್ಯ ಸ್ಥಿತಿ

ಜಮೀನಿನ ದಾರಿ ವಿವಾದಕ್ಕೆ ವಿಕಲಚೇತನ‌ ಮಗಳ ಕೊಂದು‌ ಆತ್ಮಹತ್ಯೆ ಕತೆ ಕಟ್ಟಿದ್ದ ತಂದೆ ಸೆರೆ

ಕಲಬುರಗಿ: ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ತಂದೆಯೊಬ್ಬ ವಿಕಲಚೇತನ ಮಗಳನ್ನು ಕೊಲೆಗೈದು, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಸಬ್​ ಅರ್ಬನ್​​ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಜಿಲ್ಲೆಯ ಕಲ್ಲಹಂಗರಗಾ ಗ್ರಾಮದಲ್ಲಿ 17 ವರ್ಷದ ಮಂಜುಳಾಳನ್ನು ಕೊಲೆಗೈದಿದ್ದ ತಂದೆ ಗುಂಡೇರಾವನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸಬ್​

2ನೇ ಟೆಸ್ಟ್: ಹರಿಣಗಳ ಅಬ್ಬರಕ್ಕೆ ಕುಲದೀಪ್ ಕಡಿವಾಣ

ಸ್ಪಿನ್ನರ್ ಕುಲದೀಪ್ ಯಾದವ್ ಚುರುಕಿನ ದಾಳಿ ನೆರವಿನಿಂದ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾ ಮೇಲುಗೈ ಸಾಧಿಸದಂತೆ ಭಾರತ ನೋಡಿಕೊಂಡಿತು. ಈ ಮೂಲಕ ಸಮಬಲ ಸಾಧಿಸಿದೆ. ಗುವಾಹತಿಯಲ್ಲಿ ಶನಿವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು

ರಾಜ್ಯಕ್ಕೆ ಸಿಎಂ ಯಾರು ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಆರ್.ಅಶೋಕ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು

ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ: ಹೆಚ್.ಡಿ. ದೇವೇಗೌಡ ಗುಡುಗು

ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂಥಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ

ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಮೆಕ್ಕೆಜೋಳ ಖರೀದಿಸು ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಮೆಕ್ಕೆಜೋಳ ಖರೀದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ

ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ

ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ