Tuesday, September 29, 2026
Menu

ಬರ ನಿರ್ವಹಣೆ: ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಾಲನೆ

ರಾಜ್ಯದಲ್ಲಿ ಮಳೆ ಕೊರತೆ ಕಾಡುತ್ತಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮೋಡ ಬಿತ್ತನೆ ಯೋಜನೆಗೆ ಶುಕ್ರವಾರ ಅಧಿಕೃತ ಚಾಲನೆ ನೀಡಿದೆ. ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಿದರು. ಮೋಡ ಬಿತ್ತನೆಗೆಂದು ಸಿದ್ಧಪಡಿಸಲಾದ ಲಘು ವಿಮಾನಕ್ಕೆ ರಾಷ್ಟ್ರಧ್ವಜ ಮತ್ತು ನಾಡಧ್ವಜ ಪ್ರದರ್ಶಿಸುವ ಮೂಲಕ ಸಚಿವರು ಮೋಡ ಬಿತ್ತನೆಗೆ ಚಾಲನೆಯಿತ್ತರು. ಈಗ ಮೋಡ ಬಿತ್ತನೆಗೆ ಹವಾಮಾನ ಸೂಕ್ತವಾಗಿಲ್ಲ,

ನೇಪಾಳ ಪ್ರವಾಹ: 9 ದಿನದ ಬಳಿಕ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಲ್ಲಿ ಇಬ್ಬರ ರಕ್ಷಣೆ

ಭೀಕರ ಪ್ರವಾಹದಿಂದ ತತ್ತರಿಸಿರುವ ನೇಪಾಳದಲ್ಲಿ 9 ದಿನದ ಬಳಿಕ ತ್ರಿಶೂಲಿ 3A ಜಲ ವಿದ್ಯುತ್‌ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಕಾರ್ಮಿಕರನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ. ಈ ಬೆಳವಣಿಗೆ ಸುರಂಗದೊಳಗೆ ಇನ್ನೂ ಕೆಲವರು ಜೀವಂತ ಇರುವ ಸಾಧ್ಯತೆ ಬಗ್ಗೆ ರಕ್ಷಣಾ ಸಿಬ್ಬಂದಿಯಲ್ಲಿ

ಗೌರಿ-ಗಣೇಶ ಹಬ್ಬ: ಕೆಎಸ್ಸಾರ್ಟಿಸಿಯಿಂದ 2,400 ಹೆಚ್ಚುವರಿ ಬಸ್‌

ಗೌರಿ-ಗಣೇಶ ಹಬ್ಬಕ್ಕಾಗಿ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಒಟ್ಟು 2,400 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲು ನಿರ್ಧರಿಸಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಸೆಪ್ಟೆಂಬರ್ 14ರಂದು ವಿವಿಧ

ಉದ್ಯಾನಗಳ ಶೇ 5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿ ಹೋರಾಟಕ್ಕೆ ಮತ್ತೊಂದು ಜಯವೆಂದ ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ 5  ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,  ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ ನೀಡಲು ತೀರ್ಮಾನಿಸಲಾಗಿದೆ. ರಾಜ್ಯಗಳ ಕಲಾತಂಡಗಳ ಪ್ರದರ್ಶನ ನೀಡಲು ಆಹ್ವಾನಕ್ಕೆ ನಿರ್ಧರಿಸಿದ್ದು, ಏರ್ ಷೋ ನಡೆಸುವ

ಐಪಿಎಸ್‌ ಅಧಿಕಾರಿ ಹೆಸರಿನಲ್ಲಿ ಫೇಸ್ಬುಕ್‌ ಮೂಲಕ ಜನರಿಗೆ ವಂಚನೆ: ರಾಜಸ್ಥಾನದ ಬಾಲಕ ಅರೆಸ್ಟ್‌

ಬೆಂಗಳೂರಿನಲ್ಲಿರುವ ಐಪಿಎಸ್‌ ಅಧಿಕಾರಿಯ ಹೆಸರಿನಲ್ಲಿ ನಕಲಿ ಫೇಸ್ಬುಕ್‌ ಖಾತೆ ಸೃಷ್ಟಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ೧೭ ವರ್ಷದ ರಾಜಸ್ಥಾನದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಐಪಿಎಸ್ ಅಧಿಕಾರಿ ನಾರಾಯಣ ಎಂ ಅವರ ಹೆಸರಿನಲ್ಲಿ ಆರೋಪಿ ನಕಲಿ

ಚಿಕ್ಕಬಳ್ಳಾಪುರದಲ್ಲಿ 26 ಎಕರೆ ಸರ್ಕಾರಿ ಭೂಮಿಗೆ ಮಹಿಳೆ ಹೆಸರಲ್ಲಿ ಇ-ಖಾತೆ: ವಿಶೇಷ ತನಿಖಾ ತಂಡ ರಚನೆ

ಚಿಕ್ಕಬಳ್ಳಾಪುರ ತಾಲೂಕಿನ ಅಣಕೂರು ಗ್ರಾಮದಲ್ಲಿ ೨೬ ಎಕರೆ ಸರ್ಕಾರಿ ಭೂಮಿಗೆ ಮಹಿಳೆಯ ಹೆಸರಿನಲ್ಲಿ ಅಕ್ರಮವಾಗಿ ಇ-ಖಾತೆ ಸೃಷ್ಟಿಸಿರುವ ಆರೋಪದ ತನಿಖೆಗೆ ಜಿಲ್ಲಾಧಿಕಾರಿ ವಿಶೇಷ ತನಿಖಾ ತಂಡವನ್ನು ನೇಮಕಗೊಳಿಸಿ ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರ: ತಾಲೂಕಿನ ಅಣಕನೂರು ಗ್ರಾಮದ ಸರ್ವೆ ನಂ.109 ರಲ್ಲಿರುವ 26 ಎಕರೆ

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ನಿತಿನ್‌ ಗಡ್ಕರಿ ರಾಜ್ಯಗಳಿಗೆ ಮನವಿ

ಖಾಸಗಿ ದ್ವಿಚಕ್ರ ವಾಹನ ಮಾಲೀಕರು ಬೈಕ್‌ ಟ್ಯಾಕ್ಸಿ ಸೇವೆ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಖಾಸಗಿ ದ್ವಿಚಕ್ರ ವಾಹನಗಳ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸಾರಿಗೆ

ಶುದ್ಧೀಕರಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಹಲ್ದ್ವಾನಿಯ ರಾಮ ಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ತಾನು ಭಾಷಣ ಮಾಡಿದ ಬಳಿಕ ಆ ಜಾಗವನ್ನು ಶುದ್ಧೀಕರಣ ಮಾಡಿರುವ ಪ್ರಕ್ರಿಯೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಸ್ಪೀಕರ್‌ ಜೆಪಿ ನಡ್ಡಾ ಅವರನ್ನು ಆಗ್ರಹಿಸಿದ್ದಾರೆ.

ಕೃಷ್ಣಾಷ್ಟಮಿ: ಜಿಬಿಎ ವ್ಯಾಪ್ತಿಯಲ್ಲಿ ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಗ್ರೇಟರ್‌ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.೪ರಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ. ಜಿಬಿಎ ಉಪನಿರ್ದೇಶಕರು (ಪಶುಪಾಲನೆ) ಆದೇಶ ಹೊರಡಿಸಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಂಸದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸೂಚಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳು,