kannada news
ವೈದ್ಯನ ಮನೆಯಲ್ಲಿ ಸ್ಫೋಟಕ ತಯಾರಿಸಲು ಬಳಸುತ್ತಿದ್ದ ಗಿರಣಿ ಯಂತ್ರ ಪತ್ತೆ!
ನವದೆಹಲಿ: ಬಂಧಿತ ವೈದ್ಯ ಉಗ್ರ ಬಾಂಬ್ ಹಾಗೂ ಸ್ಫೋಟಕಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟಿನ ಗಿರಣಿ ಯಂತ್ರವನ್ನು ಪತ್ತೆ ಹಚ್ಚಲಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ವೈದ್ಯ ಮುಝಮ್ಮಿಲ್ ಶಕೀಲ್ ಗನೈ ಸ್ಫೋಟಕಗಳಿಗೆ ಬೇಕಾದ ರಾಸಾಯನಿಕಗಳನ್ನು ದೊಡ್ಡ ಪ್ರಮಾಣದಲ್ಲಿ ಸಿದ್ಧಪಡಿಸಲು ಹಿಟ್ಟಿನ ಗಿರಣಿ ಯಂತ್ರ ಬಳಸುತ್ತಿದ್ದ ಎಂದು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪತ್ತೆ ಹಚ್ಚಿದೆ. ಹರಿಯಾಣದ ಫರಿದಾಬಾದ್‌ನ ಟ್ಯಾಕ್ಸಿ ಚಾಲಕನ
28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಜಯೇಂದ್ರ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದ ನಂತರದಲ್ಲಿ ರಾಹುಲ್ ಗಾಂಧಿ ಒಂದು ರೀತಿ ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಬಿಹಾರ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು
ಡೇಟಾ ಸೆಂಟರ್ ಆಗಿ ಮಂಗಳೂರು ಅಭಿವೃದ್ಧಿಗೆ ಕೆಡಿಇಎಂ- ಎಸ್ ಬಿ ಪಿ ಜಂಟಿ ಅಧ್ಯಯನ
ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಕೇಂದ್ರವಾಗಿ ಹೊರಹೊಮ್ಮಲು ಮಂಗಳೂರು ತನ್ನದೇ ಸಾಮರ್ಥ್ಯ ಹೊಂದಿದೆ. ಬೆಂಗಳೂರು: ಕರ್ನಾಟಕದ ಡಿಜಿಟಲ್ ಕ್ಷೇತ್ರದ ಕಾರ್ಯತಂತ್ರವನ್ನು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ( ಕೆಡಿಇಎಂ), ಸಿಲಿಕಾನ್ ಬೀಚ್
ಧರ್ಮಸ್ಥಳ ಪ್ರಕರಣ: 3923 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದ ಎಸ್ ಐಟಿ ಪೊಲೀಸರ ತಂಡ ಸುಮಾರು 5 ತಿಂಗಳ ಕಾಲ ನಡೆಸಿದ
ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ಅಪ್ಪ-ಮಕ್ಕಳು ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ
ಚಾಮರಾಜನಗರ: ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಗುರುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಮಾಡನಾಡಿದ ಅವರು, ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು
ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿ: ಹೈಕೋರ್ಟ್ ಸೂಚನೆ
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್ ಕಡ್ಡಾಯ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ
ಮಸೂದೆ ಅಂಗೀಕಾರಕ್ಕೆ ರಾಷ್ಟ್ರಪತಿ, ರಾಜ್ಯಪಾಲರಿಗೆ ಕಾಲಮಿತಿ ಇಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಮಸೂದೆಗಳನ್ನು ಅಂಗೀಕಾರ ನೀಡಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನೇತೃತ್ವದ ಸಾಂವಿಧಾನಿಕ ಪೀಠ ಗುರುವಾರ ನಿಗದಿತ ಕಾಲಮಿತಿಯೊಳಗೆ ಮಸೂದೆಗಳ ಕುರಿತು ತೀರ್ಮಾನ ಕೈಗೊಳ್ಳುವಂತೆ ರಾಷ್ಟ್ರಪತಿ
ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ
ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ: ಶಂಕಿತರ ಭಾವಚಿತ್ರ ಬಿಡುಗಡೆ
ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11 ಲಕ್ಷ ರೂ. ದರೋಡೆ ಮಾಡಿದ ಶಂಕಿತ ಆರೋಪಿಗಳ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಡೇರಿ ಸರ್ಕಲ್ ಮೇಲ್ಸುತುವೆ ಬಳಿ ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಸಿಎಂಎಸ್ ವಾಹನ ತಡೆಗಟ್ಟಿದ 7ರಿಂದ 8 ಮಂದಿಯ
BJP-RSS-ABVP ಸೇರುತ್ತಿರುವ ಹಿಂದುಳಿದವರು, ದಲಿತರಿಗೆ ಏನು ಹೇಳೋದು: ಸಿದ್ದರಾಮಯ್ಯ ಬೇಸರ
ಬೆಂಗಳೂರು: ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ




