kannada news
ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್‌ಟಿ ಹಾಲು ಉತ್ಪನ್ನಗಳನ್ನು
4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್ ಟಾಪಿಂಗ್: ಡಿಕೆ ಶಿವಕುಮಾರ್
ಬೆಂಗಳೂರು: “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ
ವಾರದೊಳಗೆ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ತಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ
ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: ನಾಲ್ವರ ದುರ್ಮರಣ
ಬಹುಮಹಡಿ ವಸತಿ ಕಟ್ಟಡದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟು 10 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಸಂಭವಿಸಿದೆ. ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್‌ನ 10ನೇ ಮಹಡಿಯಲ್ಲಿ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ
ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ರಿಜ್ವಾನ್ ವಜಾ!
ಡ್ರೆಸ್ಸಿಂಗ್ ರೂಮಿನಲ್ಲಿ ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಮೊಹಮ್ಮದ್ ರಿಜ್ವಾನ್ ಅವರನ್ನು ಪಾಕಿಸ್ತಾನ ತಂಡದ ನಾಯಕ ಸ್ಥಾನದಿಂದ ವಜಾ ಮಾಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ರಿಜ್ವಾನ್ ಅವರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್ ಲತೀಫ್ ಹೇಳಿಕೆ
ಆರ್.ಟಿ.ಸಿ. ದುರಸ್ತಿಗೆ ಲಂಚ: ಲೋಕಾಯುಕ್ತರಿಂದ ಇಬ್ಬರ ಬಂಧನ
ಹಾವೇರಿ : ಆರ್.ಟಿ.ಸಿ ದುರಸ್ಥಿ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಜಿಲ್ಲೆಯ ಹಾನಗಲ್ ತಾಲೂಕಿನ ತಹಶೀಲ್ದಾರ ಕಛೇರಿ ಶಿರಸ್ತೆದಾರ ಹಾಗೂ ಕೇಸ್ ವರ್ಕರ್ ಬಿದ್ದಿದ್ದಾರೆ. ಹಾನಗಲ್ಲ ತಾಲೂಕ ಬೊಮ್ಮನಹಳ್ಳಿ ಗ್ರಾಮದ ದೂರುದಾರ ನವೀನ
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು
ಅಭಿವೃದ್ಧಿ ಮಾಡುತ್ತೇವೆ ಅಂದರೆ ರಸ್ತೆ ಕೊಡಲು ರೆಡಿ: ಡಿಕೆ ಶಿವಕುಮಾರ್
ರಸ್ತೆ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರೆ ರಸ್ತೆಗಳನ್ನು ಬಿಟ್ಟುಕೊಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ “ಬೆಂಗಳೂರು ನಡಿಗೆ” ಅಭಿಯಾನದ
ಲಂಚ ಕೇಳಿದ ಆರ್ ಓ ಅಮಾನತಿಗೆ ಸ್ಥಳದಲ್ಲೇ ಆದೇಶಿಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್ ಓ ಬಸವರಾಜ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ.
ಗರೀಭ್ ರಥ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಢ: ಪ್ರಯಾಣಿಕರು ಪಾರು
ಗರೀಬ್ ರಥ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳಲ್ಲಿ (ರೈಲು ಸಂಖ್ಯೆ 12204) ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಯುರಿದ ಘಟನೆ ಪಂಜಾಬ್‌ನಲ್ಲಿ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲು ಅಮೃತಸರದಿಂದ ಪ್ರಯಾಣಿಸುತ್ತಿದ್ದಾಗ ಶನಿವಾರ




