Menu

ಗದಗದಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು

ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದು, ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ.  ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತಪಟ್ಟ ವಿದ್ಯಾರ್ಥಿಗಳು. ಒಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ, ಬೆಳದಡಿ ಗ್ರಾಮದ ಬಸವರಾಜ ಬಡಿಗೇರ, ಮತ್ತೊಬ್ಬ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ ವಸತಿ

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ಅಕ್ರಮ ಸಂಬಂಧ ಹೊಂದಿರುವ ಪತ್ನಿ ಮೇಲೆ ಶಂಕೆ

ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿಯ ಅಕ್ರಮ ಸಂಬಂಧದಿಂದ ನೊಂದಿದ್ದ

ಇರಾನ್ ಮೇಲೆ ದಾಳಿ ಬಳಿಕ ಪ್ರತಿದಾಳಿ ಸಾಧ್ಯತೆ: ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಇಸ್ರೇಲ್‌ನಾದ್ಯಂತ ‘ವಿಶೇಷ ಮತ್ತು ಶಾಶ್ವತ ತುರ್ತು ಪರಿಸ್ಥಿತಿ’ಯನ್ನು ಘೋಷಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ತಿಳಿಸಿದ್ದಾರೆ. ​ಇಸ್ರೇಲ್‌ ದಾಳಿಯನಂತರ ಇರಾನ್‌ ಕಡೆಯಿಂದ ಡ್ರೋನ್‌ಗಳು ಹಾಗೂ ಖಂಡಾಂತರ ಕ್ಷಿಪಣಿಗಳ ಮೂಲಕ ಪ್ರತಿದಾಳಿ ನಡೆಯುವ

ಕಾರು ಚಲಾಯಿಸಿ ವ್ಯಕ್ತಿಯ ಹತ್ಯೆ: ಮೂವರು ವಿದ್ಯಾರ್ಥಿಗಳ ಬಂಧನ

ರಾಜ್ಯದ ಗಡಿಭಾಗ, ಬೆಂಗಳೂರು ಸಮೀಪವಿರುವ ತಮಿಳುನಾಡಿನ ಹೊಸೂರು ನಗರದಲ್ಲಿ ಕುಡಿದ ನಶೆಯಲ್ಲಿ ವಾಹನ ಚಾಲನೆ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳು ವ್ಯಕ್ತಿಯೊಬ್ಬರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದಾರೆ. ಹೊಸೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಸಿಸ್ಟೆಂಟ್ ಲೇಬರ್ ಇನ್ಸ್‌ಪೆಕ್ಟರ್ ಶಿವಮೂರ್ತಿ (54)

ವಿವಾಹೇತರ ಸಂಬಂಧ: ಮಹಿಳೆಯ ಕೊಲೆಗೈದ ಯುವಕ, ಅನಾಥವಾದ ಮಕ್ಕಳು

ಚಿಕ್ಕಬಳ್ಳಾಪುರದಲ್ಲಿ ಯುವಕನೊಬ್ಬ ವಿವಾಹಿತ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ, ಆಕೆಯ ಮಕ್ಕಳಿಬ್ಬರು ಈಗ ಅನಾಥರಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ತೇಜಸ್ವಿನಿ ಎಂಬಾಕೆ ಗಂಡನಿಂದ ದೂರವಾಗಿ ಇನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದರು. ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡು ಹೋಟೆಲ್‌ನವರೇ ಕೊಟ್ಟಿದ್ದ ಒಂದು ರೂಂನಲ್ಲಿ

ನನ್ನ ಪರ ಯಾರೂ ದೆಹಲಿಗೆ ಹೋಗ್ಬೇಕಿಲ್ಲ, ನಾವು ಹಳಬರಾಗಿದ್ದೇವೆ, ಹೊಸಬರಿಗೆ ಮಂತ್ರಿಯಾಗುವ ಆಸೆ: ಡಿಕೆ ಶಿವಕುಮಾರ್

“ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಗುರುವಾರ ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ

ಮಾಜಿ ಸಿಎಂ ದಿ. ಕೆಸಿ ರೆಡ್ಡಿಯವರ ಆದರ್ಶಗಳು ನಮಗೆ ಸ್ಫೂರ್ತಿ: ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆಸಿ ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು  ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರ ಪುಣ್ಯ ತಿಥಿಯ

GAFX ಕ್ಷೇತ್ರವು ಕೇವಲ ಆರ್ಥಿಕ ಅವಕಾಶವಲ್ಲ, ಒಂದು ನಾಗರಿಕತೆಗೆ ನೀಡಿರುವ ಅವಕಾಶ: ಸಿಎಂ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿ ಉದ್ಘಾಟಿಸಿ, GAFX ಕ್ಷೇತ್ರವು ಕೇವಲ ಆರ್ಥಿಕ ಅವಕಾಶವಲ್ಲ; ಇದು ಒಂದು ನಾಗರಿಕತೆಗೆ ನೀಡಿರುವ ಅವಕಾಶ. ಇದು ಯುವಜನರಿಗೆ ತಮ್ಮ ಕಲ್ಪನಾಶಕ್ತಿಯನ್ನು ಜೀವನೋಪಾಯವಾಗಿ ಪರಿವರ್ತಿಸಲು , ಕಥೆಗಾರರಿಗೆ ತಮ್ಮ ಕಥಾನಿರೂಪಣೆಗೆ ಡಿಜಿಟಲ್

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮದುವೆ ಭರವಸೆಯಿತ್ತು ಸೆಕ್ಸ್‌ ಕೇಸ್‌: ಬಂಧನ ಕಡ್ಡಾಯವಲ್ಲ ಎಂದ ಹೈಕೋರ್ಟ್‌

ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಮಾಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ, ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದು ಏಕೆಂದು ಹೈಕೋರ್ಟ್‌ ಪ್ರಶ್ನಿಸಿದೆ. ಇಂಥ ಬೆಳವಣಿಗೆ ತಡೆಯುವಲ್ಲಿ ಅಗತ್ಯ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್‌