kannada news
ಮಳೆಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು
ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಂಟು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೀದರ್‌ನ ಹುಲಸೂರು ಪಟ್ಟಣದಲ್ಲಿ ನಡೆದಿದೆ. ಎಂಟು ವರ್ಷದ ಅಲಿ ಮೊಮಿನ್ ಮೃತಪಟ್ಟ ಬಾಲಕ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯ ಕಾರಣ ವಿದ್ಯುತ್ ಕಂಬದಿಂದ ಮನೆಗೆ ನೀಡಲಾಗಿದ್ದ ಸಂಪರ್ಕ ಕಡಿದು ವೈರ್ ನೆಲಕ್ಕೆ ಬಿದ್ದಿದೆ. ಆಟವಾಡುತ್ತಿದ್ದ ಬಾಲಕ ಕೈಯಲ್ಲಿ ವೈರ್ ಹಿಡಿದುಕೊಂಡಿದ್ದು, ಶಾಕ್ ತಗುಲಿ ಸ್ಥಳದಲ್ಲೇ ಅಸು ನೀಗಿದ್ದಾನೆ. ಹುಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ: ಆರ್ ಅಶೋಕ ಟೀಕೆ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್ ಕಂಟ್ರೋಲ್‌ನಿಂದ ನಡೆಯಲಿದೆ. ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ. ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದರು.
“ಜಿಬಿಎ ಚುನಾವಣೆ ಬೇಗ ನಡೆಸಿ, ವಿಳಂಬದಿಂದಾಗಿ ಕೇಂದ್ರದ ಹತ್ತು ಸಾವಿರ ಕೋಟಿ ರೂ. ಸಿಗ್ತಿಲ್ಲ”
ಚುನಾವಣೆ ವಿಳಂಬದಿಂದಾಗಿ ಬೆಂಗಳೂರಿಗೆ 10,000 ಕೋಟಿ ರೂ. ಕೇಂದ್ರದ ಹಣಕಾಸು ನೆರವು ಸಿಗುತ್ತಿಲ್ಲ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗಳನ್ನು ಆದಷ್ಟು ಬೇಗ ನಡೆಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಂಸತ್ ಸದಸ್ಯ ಡಾ. ಸಿ. ನಾರಾಯಣಸ್ವಾಮಿ
ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ
ಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಮೊದಲ ಬಾರಿಗೆ ಸಭೆ ನಡೆಸಿ, ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಗುಣಮಟ್ಟ ಮತ್ತು ಜನಸ್ನೇಹಿ ನೀತಿಗಳನ್ನು ಅನುಷ್ಠಾನಗೊಳಿಸಲು ಆಸದ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಸರ್ಕಾರದ ಎಲ್ಲಾ
ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಲಿ: ಆರ್ ಅಶೋಕ
ಕೇರಳಂನ ನೂತನ ಮುಖ್ಯಮಂತ್ರಿ ಶ್ರೀ @vdsatheesan ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ. ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಶ್ರೀ @DKShivakumar ಅವರೂ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ
‘ಕಿಲ್ಲರ್’ ಚಿತ್ರೀಕರಣ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಯುವ ತಂತ್ರಜ್ಞ ಬಲಿ
ತಮಿಳು ನಟ ಎಸ್‌ಜೆ ಸೂರ್ಯ ಮುಖ್ಯ ಪಾತ್ರದಲ್ಲಿ ನಟನೆಯ ‘ಕಿಲ್ಲರ್’ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 26 ವರ್ಷದ ಯುವ ತಂತ್ರಜ್ಞ ಮದನ್ ಪ್ರಾಣ ಕಳೆದುಕೊಂಡಿದ್ದಾರೆ. ಬಿನ್ನಿ ಮಿಲ್ಸ್‌ನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ನಡೆದ ಈ ದುರಂತದಲ್ಲಿ ಮೂವರು
ಆಟವಾಡುತ್ತ ಕಾರು ಡಿಕ್ಕಿಯೊಳಗೆ ಹೋದ ಮಗು ಉಸಿರುಗಟ್ಟಿ ಸಾವು
ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಡಿಕ್ಕಿಯಲ್ಲಿ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಮಗು ಬಸವಪ್ರಭು ಕೊಟ್ಟುರೇಶ್ವರ ಅವರ ಮಗ. ಮಗು ಮನೆಯ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಆಡುತ್ತಾ
ಪಣವಿಟ್ಟು ಆಡುವ ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಗೇಮ್‌ಗಳಿಗೆ ಕಾನೂನು ರಕ್ಷಣೆ ಇಲ್ಲ: ಸುಪ್ರೀಂ ತೀರ್ಪು
ಹಣ ಅಥವಾ ಪಣ ಒಡ್ಡಿ ಆಡುವ ಆನ್‌ಲೈನ್ ಗೇಮ್, ಜೂಜು ಮತ್ತು ಇತರ ಕೌಶಲ್ಯ ಆಟಗಳ ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ನಿಷೇಧಿಸುವ ಕರ್ನಾಟಕ ಮತ್ತು
ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕರ್ನಾಟಕದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಶಿವಕುಮಾರ್ ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ
“ಎಐ ಸಹಾನುಭೂತಿ, ಸಂದರ್ಭೋಚಿತ ನಿರ್ಧಾರ, ಅಂತಃಪ್ರಜ್ಞೆ, ಸೃಜನಶೀಲತೆ ನಕಲು ಮಾಡಲು ಸಾಧ್ಯವಿಲ್ಲ”
ಪುನರಾವರ್ತಿತ ಮತ್ತು ದತ್ತಾಂಶ ಆಧಾರಿತ ಕೆಲಸಗಳನ್ನು ಮಾಡುವಲ್ಲಿ ಎಐ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ. ಆದರೆ ಇದಕ್ಕೆ ಮಾನವ ಸಹಜವಾದ ಸಹಾನುಭೂತಿ,ಸಂದರ್ಭೋಚಿತ ನಿರ್ಧಾರ ಸಾಮರ್ಥ್ಯ, ಆಳವಾದ ಅಂತಃಪ್ರಜ್ಞೆ ಮತ್ತು ಸೃಜನಶೀಲತೆಯನ್ನು ನಕಲು ಮಾಡಲು ಸಾಧ್ಯವಿಲ್ಲ, ಇವು ಕೇವಲ ಸುಸಂಸ್ಕೃತ ಮಾನವನ ಮನಸ್ಸಿನಿಂದ ಮಾತ್ರ




