Menu

ಅಧಿಕಾರದಲ್ಲಿದ್ದಾಗ ಕೆಲಸ ಮಾಡದ ಬಿಜೆಪಿಯವರಿಂದ ಈಗ ಪ್ರತಿಭಟನೆ: ಸಿಎಂ

ತನ್ನ ಅಧಿಕಾರಾವಧಿಯಲ್ಲಿ  ಕೆಲಸ ಮಾಡದ ಬಿಜೆಪಿ ಈಗ ಪ್ರತಿಭಟಿಸುತ್ತಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸ ಮಾಡದೆ ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಆರೋಗ್ಯ ಇಲಾಖೆಯ ಆಹ್ವಾನಪತ್ರಿಕೆಯಲ್ಲಿ ಉರ್ದು ಭಾಷೆ ಮುದ್ರಿತವಾಗಿದ್ದು, ಈ ಬಗ್ಗೆ ಚರ್ಚೆಗಳೆದ್ದಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು

ಹಗರಣ ರಹಿತ ಹುದ್ದೆ ಭರ್ತಿಗೆ ಸರಕಾರ ಕ್ರಮ: ಡಿಕೆ ಶಿವಕುಮಾರ್

“ಕಾಂಗ್ರೆಸ್‌ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ತುಂಬಬೇಕು ಎಂದು ಕೆಲಸ ಮಾಡುತ್ತಿದೆ. ಯುವಕರು ಧೈರ್ಯವಾಗಿರಿ. ನಾವು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿಮಗೆ ಸಂದೇಶವನ್ನು ನೀಡುತ್ತೇವೆ. ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ,

ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ: ಸುಪ್ರೀಂ

ಎನ್‌ಸಿಇಆರ್‌ಟಿಯ ಎಂಟನೇ ತರಗತಿಯ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬಹುದು

ಗಾಂಧಿ, ನೆಹರುಗೆ ಅವಹೇಳನ: ಶಾಸಕ ಯತ್ನಾಳ್‌ ವಿರುದ್ಧ ಪ್ರಕರಣ ದಾಖಲು

ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿಯಾಗಿ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿಯ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್​​,

ಅಪರೂಪದ ಕಾಯಿಲೆಗಳಿಂದ ಬಳಲುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ, ಹಣದ ಚಿಂತೆ ಬಿಡಿ: ಡಿಸಿಎಂ

“ಹಿಮೋಫಿಲಿಯಾ ಹಾಗೂ ಇತರ ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಜೊತೆ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ. ಹಣದ ಬಗ್ಗೆ ಚಿಂತೆ ಮಾಡಬೇಡಿ. ಆದರೆ ಯಾರೂ ಸಹ ತಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಧೈರ್ಯ ತುಂಬಿದ್ದಾರೆ. ಆರೋಗ್ಯ ಮತ್ತು ಕುಟುಂಬ

ಹೆಣ್ಣುಮಕ್ಕಳೆಂದು ಸದಾ ನಿಂದಿಸುತ್ತಿದ್ದ ತಂದೆಯ ಕೊಲೆಗೈದ ಪುತ್ರಿಯರು

ಕುಟುಂಬದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ನಡುವೆ ತಾರತಮ್ಯ ಮಡುತ್ತಿದ್ದ ಜೊತೆಗೆ ಹೆಣ್ಣು ಮಕ್ಕಳನ್ನು ನಿರಂತರ ಟೀಕಿಸುತ್ತಿದ್ದ ತಂದೆಯನ್ನು ಸೋದರಿಯರಿಬ್ಬರು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ನಿರಂತರ ತಾರತಮ್ಯ ಮತ್ತು ಅವಹೇಳನದಿಂದ

ಕಾಂಗ್ರೆಸ್‌ ದುರಾಡಳಿತ ವಿರುದ್ಧ ಬೀದಿಗಿಳಿದ ಜನ: ಆರ್‌ ಅಶೋಕ ಕಿಡಿ

ಕಾಂಗ್ರೆಸ್‌ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. @INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಅರಾಜಕ ಮುಖ್ಯಮಂತ್ರಿ @siddaramaiah ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ

ಯಲಹಂಕದಲ್ಲಿ ಬೈಕ್‌ ಮರಕ್ಕೆ ಡಿಕ್ಕಿಯಾಗಿ ಸವಾರರಿಬ್ಬರ ಸಾವು

ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.ಕಿರಣ್ (25) ಮತ್ತು ಯಶವಂತ್ (25) ಮೃತಪಟ್ಟವರು. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗೌತಮ್ ಎಂಬವರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಮೂವರು ಬುಲೆಟ್ ಬೈಕ್‌ನಲ್ಲಿ

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ ಹೈ ಕಮಾಂಡ್‌ಗೆ ಎಂಎಲ್‌ಸಿಗಳ ಮನವಿ

ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ 24 ಮಂದಿ ವಿಧಾನ ಪರಿಷತ್‌ ಸದಸ್ಯರು ಕಾಂಗ್ರೆಸ್‌ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಸಚಿವ ಸಂಪುಟ‌ ಪುನಾರಚನೆ ಮತ್ತು ಮೊದಲ ಬಾರಿ ಶಾಸಕರಾಗಿರುವ ಕನಿಷ್ಠ ಐವರಿಗಾದರೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ 31 ಶಾಸಕರು

ಸ್ವಾಮೀಜಿ, ಮಂತ್ರಿಗಳು, ಅಧಿಕಾರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳು, ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ. ಪ್ರಕರಣದ ಮುಖ್ಯ ಆರೋಪಿ ಸನ್ನಿ ಎಂ. ನಾಯಕ್ ರಾಜಮನೆ ಗ್ರೂಪ್ಸ್‌ನ ಎಂಡಿ ಎಂದು ಹೇಳಲಾಗಿದೆ. ಬೆಂಗಳೂರು ಮತ್ತು ದಾಬಸ್‌ಪೇಟೆ ಇಂಡಸ್ಟ್ರಿಯಲ್