Menu

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ: ಸಚಿವ ಬೈರತಿ ಸುರೇಶ್

ಸುವರ್ಣಸೌಧ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅವರು ಈ ವಿಷಯ

ನಗರ ಯೋಜನೆಗಾಗಿ ಪ್ರತ್ಯೇಕ ಕಾಲೇಜು ಆರಂಭ: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: “ನಮ್ಮಲ್ಲಿ ನಗರ ಯೋಜನೆ ರೂಪಿಸುತ್ತಿರುವವರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕಾಲೇಜು ಆರಂಭಿಸಲು ಮುಂದಾಗಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ವಿಧೇಯಕವನ್ನು ಕಂದಾಯ

ತಿರುಪತಿ ತಿರುಮಲ ದೇವಸ್ಥಾನಕ್ಕೆ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ ದಾನ ಮಾಡಿದ ಉದ್ಯಮಿ

ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಕ್ಷೌರ ವಿಧಿವಿಧಾನಗಳಿಗಾಗಿ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ಗಳನ್ನು ದಾನ ಮಾಡಿದ್ದಾರೆ. ಉದ್ಯಮಿ ಬಿ. ಶ್ರೀಧರ್ ಕಲ್ಯಾಣಕಟ್ಟೆಗಳ ವಾರ್ಷಿಕ ಅಗತ್ಯವನ್ನು ಪೂರೈಸಲು ಭಾರೀ ಪ್ರಮಾಣದ ಬ್ಲೇಡ್‌ಗಳನ್ನು ದಾನವಾಗಿ ನೀಡಿದ್ದಾರೆ. ಹೈದರಾಬಾದ್‌ನ ಉದ್ಯಮಿ ಬಿ.

ವಿಧಾನ ಪರಿಷತ್ತಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಅನುಮೋದನೆ

ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರ ರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2025ಕ್ಕೆ (2ನೇ ತಿದ್ದುಪಡಿ) ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್  ವಿಧಾನ ಪರಿಷತ್ತಿನಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ)

“ನೀವು ಕರಾವಳಿಯವರು ಬೆಂಕಿ ಹಚ್ಚುವವರು” ಸದನದಲ್ಲಿ ಕಿಚ್ಚು ಹೊತ್ತಿಸಿದ ಸಚಿವ ಬೈರತಿ

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು “ನೀವು ಕರಾವಳಿಯವರು ಬೆಂಕಿ ಹಚ್ಚೋರು” ಎಂದು ನೀಡಿದ ಹೇಳಿಕೆ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ

ವಿಪಕ್ಷಗಳ ಆಕ್ರೋಶದ ನಡುವೆ ಜಿ ರಾಮ್ ಜಿ ಮಸೂದೆ ಲೋಕಸಭೆಯಲ್ಲಿ ಅನುಮೋದನೆ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ರೂಪಿಸಿದ್ದ ಜಿ ರಾಮ್ ಜಿ ಮಸೂದೆ ಭಾರೀ ಗದ್ಧಲಗಳ ನಡುವೆ ಲೋಕಸಭೆಯಲ್ಲಿ ಅನುಮೋದನೆ ಪಡೆದಿದೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಸೂದೆಯನ್ನು ಪುನರ್ ಪರಿಶೀಲನಾ ಸಮಿತಿ

ಡೆತ್‌ನೋಟ್‌ನಲ್ಲಿ ಸಿಕ್ತು ಧಾರವಾಡದ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆಗೆ ಕಾರಣ

ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಆಕೆ ಬರೆದಿಟ್ಟ ಡೆತ್‌ನೋಟ್‌ನಲ್ಲಿ ಸುಸೈಡ್‌ ಮಾಡಿಕೊಳ್ಳಲು ಕಾರಣ ಏನು ಎಂಬುದು ಪತ್ತೆಯಾಗಿದೆ. ಸರ್ಕಾರಿ ಹುದ್ದೆಗಳ

ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು,

“ಕಲೆಕ್ಷನ್ ಕಿಂಗ್ ವಿಜಯೇಂದ್ರ” ತಂದೆ ಯಡಿಯೂರಪ್ಪ ಹೆಸರು ಕೆಡಿಸಿದವರು: ಡಿಕೆ ಶಿವಕುಮಾರ್‌

“ಕಲೆಕ್ಷನ್ ಕಿಂಗ್ ” ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಮೊದಲು ಅಸೆಂಬ್ಲಿ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಮಾತನಾಡುವುದಲ್ಲ,  ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನು ಮರೆಯ ಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್