kannada news
ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಲಿಂಕ್ ಗೆ ತ್ವರಿತ ಪರಿಹಾರ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ರಾಜ್ಯದಲ್ಲಿ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಪರಿಷತ್ತಿನಲ್ಲಿ ಸದಸ್ಯರಾದ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಹಾಗೂ ದಾನಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್ಟಿಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್ ಎಮ್ ಎಸ್ ಖಾತಾ ಹೊಂದಿರುವ
ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವು ಗುರಿ: ಸಚಿವ ಎನ್.ಎಸ್. ಭೋಸರಾಜು
ಬೆಳಗಾವಿ, ಡಿಸೆಂಬರ್ 16: ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ (ಬಜೆಟ್) ಮಂಡನೆಯ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು
ಸೊರಬದಲ್ಲಿ ಪತ್ನಿಯೊಂದಿಗೆ ತಮ್ಮನ ಅನೈತಿಕ ಸಂಬಂಧ: ರೊಚ್ಚಿಗೆದ್ದ ಅಣ್ಣನಿಂದ ಕೊಲೆ
ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಅಣ್ಣನೇ ಕೊಲೆ ಮಾಡಿದ್ದಾನೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಅಣ್ಣ ಮಾಲತೇಶ ಕೊಲೆ ಆರೋಪಿ. ಒಂದೂವರೆ ತಿಂಗಳ ಹಿಂದೆ ರಾಮಚಂದ್ರ ನಾಪತ್ತೆಯಾಗಿದ್ದ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ
ರಸ್ತೆಯಲ್ಲಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ: ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿ ದಾಂಧಲೆ
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಣ್ಣ ಪಾಳ್ಯದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಖಾಸಗಿ ಅಂಗ ತೋರಿಸಿದ್ದು, ಪ್ರಶ್ನಿಸಿದ್ದಕ್ಕೆ ಪುಡಿ ರೌಡಿಗಳೊಂದಿಗೆ ಬಾಗಿಲು ಒಡೆದು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ. ಪುಷ್ಪರಾಣಿ ಪತಿಯೊಂದಿಗೆ ಅಂಗಡಿಗೆ ಹೋಗುವಾಗ ಬೈಕ್‌ನಲ್ಲಿ ಬಂದ ಕಾರ್ತಿಕ್ ಎಂಬಾತ
ಬೆಂಗಳೂರಿನ ಮಾದರಿಯಲ್ಲಿ ಅಭಿವೃದ್ಧಿ ಪಥದತ್ತ ಕುಂದಾನಗರಿ ದಾಪುಗಾಲು: ಬೈರತಿ ಸುರೇಶ್
ಕುಂದಾನಗರಿ ಬೆಳಗಾವಿ ಎಲ್ಲಾ ಕ್ಷೇತ್ರಗಳಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳೆಯುತ್ತಿದ್ದು, ಬೆಂಗಳೂರಿನಂತೆ ಉನ್ನತ ಮಟ್ಟಕ್ಕೆ ಏರುವತ್ತ ದಾಪುಗಾಲು ಇಟ್ಟಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ಇಲಾಖೆ
ರಾಜ್ಯದ ಎರಡನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯವಿದೆ: ಡಿಸಿಎಂ
“ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿ ಮಾತಾಡಿದರು. “ನಮ್ಮೆಲ್ಲರಿಗೂ
ಬೈಕ್ ಚಲಾಯಿಸುವಾಗ ಹೃದಯಾಘಾತ: ನೆರವಿಗೆ ಜನ ಬಾರದೇ ಸವಾರ ನಡುರಸ್ತೆಯಲ್ಲೇ ಸಾವು!
ಬೆಂಗಳೂರು: ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸವಾರ ಹೃದಯಾಘಾತವಾಗಿ ನರಳುತ್ತಿದ್ದರೂ ಯಾರೂ ನೆರವಿಗೆ ಬಾರದ ಕಾರಣ ನಡುರಸ್ತೆಯಲ್ಲೇ ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬನಶಂಕರಿ ಮೂರನೇ ಹಂತ ಇಟ್ಟುಮಡುವಿನ ಬಾಲಾಜಿ ನಗರದ ನಿವಾಸಿ ವೆಂಕಟರಾಮಣನ್ (34) ಮೃತಪಟ್ಟಿದ್ದಾರೆ. ಬನಶಂಕರಿಯಲ್ಲಿ
ರೈತರ ಮನೆಬಾಗಿಲಿಗೆ ಸರ್ಕಾರ, ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಮಂಗಳವಾರ ಸದಸ್ಯರಾದ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ
ಅಂಡರ್ 19 ಏಷ್ಯಾಕಪ್: ಅಭಿಗ್ಯಾನ್ ದ್ವಿಶತಕ, ಭಾರತಕ್ಕೆ 315 ಗೆಲುವು
ಮಧ್ಯಮ ಕ್ರಮಾಂಕದಲ್ಲಿ ಅಭಿಗ್ಯಾನ್ ಕುಂದ್ ಸಿಡಿಸಿದ ದ್ವಿಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು 315 ರನ್ ಗಳ ಭಾರೀ ಅಂತರದಿಂದ ಬಗ್ಗುಬಡಿದಿದೆ. ದುಬೈನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಟಾಸ್ ಸೋತು
ಜಾಲಹಳ್ಳಿ ಅಂಡರ್ ಪಾಸ್: ವಿರೋಧ ಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದ ಡಿಸಿಎಂ
ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಶಿವಕುಮಾರ್ ಅವರು




