kannada news
ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನಟಿ ರನ್ಯಾ ಸ್ಮಗ್ಲಿಂಗ್ ಪ್ರಕರಣ
ಚಿನ್ನ ಕಳ್ಳಸಾಗಾಣೆ ವೇಳೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಕುತೂಹಲದ ಚರ್ಚೆಗೆ ಕಾರಣವಾಯಿತು. ಸೋಮವಾರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ರನ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ್ದು, ಈ ಪ್ರಕರಣದ ಹಿಂದೆ ದೊಡ್ಡ ಹವಾಲಾ, ಮಾಫಿಯಾ ಕೆಲಸ ಮಾಡುತ್ತಿದೆ. ಈ ಪ್ರಕರಣದಲ್ಲಿ ಸಚಿವರು ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೂ ಇದ್ದಾರೆ ಎಂಬ ಆರೋಪವಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆರೋಪಿಸಿದರು. ಇಂತಹ ಮಾಫಿಯಾಗಳನ್ನು
ನಟಿ ಶಬಾನಾ ಆಜ್ಮಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ
ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್
ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ
ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!
ಮೈಸೂರು: ಇಲ್ಲಿನ ಕೇಂದ್ರ ರೈಲು ನಿಲ್ದಾಣಕ್ಕೆ ಭಾನುವಾರ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆ ಬಂತು ಆತಂಕ ಸೃಷ್ಟಿಸಿತ್ತು. ಆರ್‌ಪಿಎಫ್ ಹಾಗೂ ಬಾಂಬ್ ನಿಷ್ಕಿçಯ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಕರೆ
ಬಿಜೆಪಿ ಪರ ಕೆಲಸ ಮಾಡುವ ಕೆಲಸ ಮಾಡುವವರು ಕಾಂಗ್ರೆಸ್ ನಲ್ಲಿ ಇದ್ದಾರೆ: ರಾಹುಲ್ ಗಾಂಧಿ
ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ
ಒಂದು ದೇಶ ಒಂದು ಚುನಾವಣೆ’ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು: ವೆಂಕಯ್ಯ ನಾಯ್ಡು
ಬೆಂಗಳೂರು: ಭಾರತದಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆದರೆ ಹಣಕಾಸಿನ ವೆಚ್ಚ ಕಡಿಮೆಯಾಗಲಿದೆ. ಇದು ರಾಷ್ಟ್ರದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಒಂದು
ಮಾತಾ ಮಾಣಿಕೇಶ್ವರಿ ದೇವಸ್ಥಾನ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು: ಗುರಮಿಟಕಲ್ಲಿನ ಯಾಣಗುಂದಿಯಲ್ಲಿರುವ ಮಾತಾ ಮಾಣಿಕೇಶ್ವರಿ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಸರ್ಕಾರದಿಂದ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್. ಕೆ. ಪಾಟೀಲ್
ಕೊಡವ ಹೆರಿಟೇಜ್ ಕೇಂದ್ರ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ.
ವಿದ್ಯುತ್ ಕಳ್ಳತನ: 6.36 ಕೋಟಿ ರೂ. ದಂಡ ವಿಧಿಸಿದ ಸೆಸ್ಕ್
ಮೈಸೂರು: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರೂ.ಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ. ಸೆಸ್ಕ್ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೆಸ್ಕ್
ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ
ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ




