kannada news
2.84 ಲಕ್ಷ ಖಾಲಿ ಹುದ್ದೆ, 24,300 ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳನ್ನು (Government Jobs) ಭರ್ತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ. ಕಳೆದ ವರ್ಷ ಸರ್ಕಾರಿ ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ ಇದ್ದವು. ಅವುಗಳಸಂಖ್ಯೆ ಈಗ ಹೆಚ್ಚಾಗಿದೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಸಿದ್ದರಾಮಯ್ಯ ಲಿಖಿತ ಉತ್ತರ ನೀಡಿದ್ದು, ಅದರ ಪ್ರಕಾರ
ಹಿರೇಕೆರೂರಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್ ವಿಲೇವಾರಿಗೆ ಕ್ರಮ: ಸಚಿವ ಸಂತೋಷ್ ಲಾಡ್
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್‌ಗಳಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್ ಎಸ್ ಲಾಡ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಹಿರೇಕೆರೂರು ಕ್ಷೇತ್ರದ ಶಾಸಕರಾದ ಯು ಬಿ ಬಣಕಾರ್
ಭೂ ಕಂದಾಯ ಕಾಯ್ದೆಗೆ ತಿಂಗಳೊಳಗೆ ಅಧಿಸೂಚನೆ: ಕೃಷ್ಣ ಬೈರೇಗೌಡ
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ
ಎಸ್ ನಿಜಲಿಂಗಪ್ಪ ದಕ್ಷ ,ಪ್ರಾಮಾಣಿಕ ವ್ಯಕ್ತಿ, ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಎಸ್ ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ರೈಲಿನಲ್ಲಿ ವ್ಯಾಪಾರಿಯ ನಿದ್ದೆ: 5.53 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಕಳ್ಳ ಎಸ್ಕೇಪ್
ಚಿನ್ನದ ವ್ಯಾಪಾರಿಯೊಬ್ಬರು ಸೊಲ್ಲಾಪುರದಿಂದ ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುವಾಗ ನಿದ್ರೆಗೆ ಜಾರಿದ್ದು, ಅವರ ಬಳಿ ಇದ್ದ 5.53 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ. ಚಿನ್ನದ ವ್ಯಾಪಾರಿ ಸಿದ್ಧೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೊಲ್ಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ದ್ರೋಹ ಮಾಡಿದ್ದಾರೆ: ಆರ್ ಅಶೋಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ರೈತರ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ. ರೈತರಿಗೆ ದ್ರೋಹ ಮಾಡಿದ್ದಾರೆ, ಈ ಸರ್ಕಾರಕ್ಕೆ ಸಂವೇದನೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ದೂರಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು,
ಗ್ಯಾರಂಟಿಯಿಂದ ಹೊಟ್ಟೆ ತುಂಬಲ್ಲ: ಛಲವಾದಿ ನಾರಾಯಣಸ್ವಾಮಿ
ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹೊಟ್ಟೆ ತುಂಬಲ್ಲ ಬದಲಾಗಿ ಸರಕಾರಕ್ಕೆ ಹೊರೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆರ್ಥಿಕ ವ್ಯವಸ್ಥೆ
ಹುಬ್ಬಳ್ಳಿ-ಧಾರವಾಡ ಇಆರ್‌ಟಿ ಸೇವೆ: ಸಾರಿಗೆ ಹಾಗೂ ನಗರಾಭಿವೃದ್ಧಿ ಸಚಿವರೊಂದಿಗೆ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸಾರಿಗೆ ಸಚಿವ ರಾಮಲಿಂಗಾ
ಹೊಸ ವರ್ಷಾಚರಣೆ: ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಗೈಡ್‌ಲೈನ್ಸ್
ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೆಲವೇ ದಿನಗಳಷ್ಟೇ ಬಾಕಿಯಿವೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಮಯದಲ್ಲಿ ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಕಠಿಣ ನಿಯಮಗಳನ್ನು ಒಳಗೊಂಡ ಗೈಡ್‌ಲೈನ್ಸ್ ಅನ್ನು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ಹೊಸ
ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಸರ್ಕಾರ ಖರೀದಿ ಮಾಡಲ್ಲ, ಬಾಡಿಗೆಗೆ ಪಡೆಯಲು ತೀರ್ಮಾನ: ಡಿಸಿಎಂ
ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್, ವಿಶೇಷ ವಿಮಾನ ಖರೀದಿ ಮಾಡಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.




