kannada news
ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ
ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ
ಉದ್ಯೋಗಿಗಳಿಗೆ ಋತುಚಕ್ರ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಮಹಿಳಾ ಉದ್ಯೋಗಿಗಳಿಗೆ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರು ಹೋಟೆಲ್‌ಗಳ ಸಂಘವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಂಘದ ಪರ ವಕೀಲ ಪ್ರಶಾಂತ್ ಬಿ.ಕೆ ಅವರ ವಾದ
ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ
ಉತ್ತರ ಜಪಾನ್‌ನಲ್ಲಿ ಭೂಕಂಪನ, ಸುನಾಮಿ ಅಲೆ
ಉತ್ತರ ಜಪಾನ್‌ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ಸುನಾಮಿ ಅಲೆಗಳು ಅಬ್ಬರಿಸಿವೆ. ಅಮೋರಿ ಕರಾವಳಿಯಲ್ಲಿ ಭೂಕಂಪ ಮತ್ತು ಸುನಾಮಿಯಿಂದ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ.
ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ಒತ್ತಡ ಹಾಕುವ ಬಗ್ಗೆ ಅಧಿವೇಶನದಲ್ಲಿ ಚರ್ಚೆ: ಡಿಸಿಎಂ
“ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಮಾಧ್ಯಮಗಳ
ಮಂಗಳಮುಖಿಯರಿಂದ ಯುವಕನ ಅಪಹರಣ: ಮಧುರೈನಲ್ಲಿ ರಕ್ಷಿಸಿದ ಬೆಂಗಳೂರು ಪೊಲೀಸ್
ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳಮುಖಿಯರು ಅಪಹರಿಸಿಕೊಂಡು ಹೋಗಿದ್ದ 25 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳಮುಖಿಯರ ತಂಡ ಯುವಕನನ್ನು ಅಪಹರಿಸಿ ತಮಿಳುನಾಡಿನ ಮಧುರೈಗೆ ಕರೆದುಕೊಂಡು ಹೋಗಿತ್ತು. ಅಲ್ಲಿ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಲಿಂಗ ಪರಿವರ್ತನೆ ಮಾಡಿಸಲು ಮಂಗಳಮುಖಿಯರ
ಗ್ಯಾಸ್ ಗೀಸರ್ ಸೋರಿಕೆ: ಬೆಂಗಳೂರಿನಲ್ಲಿ ತಾಯಿ ಮಗು ಸಾವು
ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗು ಮೃತಪಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಇಬ್ಬರೂ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶೀಘ್ರದಲ್ಲೇ ನಮ್ಮ ಮೆಟ್ರೋಗೆ 96 ರೈಲುಗಳ ಸೇರ್ಪಡೆ!
ಬೆಂಗಳೂರು: ಶೀಘ್ರದಲ್ಲೇ ಹೊಸದಾಗಿ 96 ರೈಲುಗಳನ್ನು ಸೇರ್ಪಡೆಗೊಳಿಸುವ ಮೂಲಕ ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಯೆಲ್ಲೋ ಲೈನ್ ಆರಂಭದ ಬೆನ್ನಲ್ಲೇ ಬರೋಬ್ಬರಿ 96 ಹೊಸ ರೈಲುಗಳ ನಮ್ಮ ಮೆಟ್ರೋಗೆ ಬರುತ್ತಿದ್ದು, ಅವುಗಳು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ 4
ಹಣಕ್ಕಾಗಿ ಸಿಸೇರಿಯನ್ ಮಾಡಿದರೆ ಹುಷಾರ್: ಖಾಸಗಿ ಆಸ್ಪತ್ರೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನ ಪರಿಷತ್ ಅಧಿವೇಶನದಲ್ಲಿ




