Menu

ಸುಗಂಧರಾಜ ಹೂವಿನ ಹಾರ ಹಾಕಬೇಡಿ ಅಂದಿದ್ದೇಕೆ ಡಿಕೆ ಶಿವಕುಮಾರ್‌

ನನಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ ನನ್ನ ಭೇಟಿ ವೇಳೆ ಆ ಹೂವಿನ ಹಾರ ನಿಷೇಧಿಸಲಾಗಿದೆ. ಯಾರೂ ಸುಗಂಧರಾಜ ಹೂವಿನ ಹಾರ ತರಬಾರದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿಕೆ ಶಿವಕುಮಾರ್  ಮನವಿ ಮಾಡಿದ್ದಾರೆ. ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್  ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು.”ಕಾರ್ಯಕರ್ತರ ಉತ್ಸಾಹ ನನಗೆ ಅರ್ಥವಾಗುತ್ತದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ಸರಳವಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲು ಆಗುವುದಿಲ್ಲ” ಎಂದು ಹೇಳಿದರು. ರಾಜ್ಯದೆಲ್ಲೆಡೆ ಕಾರ್ಯಕರ್ತರು

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಟಿಇಟಿ ಪಾಸಾಗಲು ಗಡುವು

ದೇಶದ ಎಲ್ಲ ಪ್ರಾಥಮಿಕ ಶಾಲೆ ಶಿಕ್ಷಕರು ೨೦೨೮ ಆಗಸ್ಟ್೩೧ ರೊಳಗೆ ಟಿಇಟಿ ಪರೀಕ್ಷೆ ಪಾಸು ಮಾಡಿರಲೇಬೇಕು. ಇಲ್ಲದಿದ್ದಲ್ಲಿ ಅವರು ಕಡ್ಡಾಯ ನಿವೃತ್ತಿ ಪಡೆಯಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಖಡಕ್ ಆದೇಶ ಹೊರಡಿಸಿದೆ. ಈ ಆದೇಶ ೧.೨೦ ಲಕ್ಷ ಶಿಕ್ಷಕರಿಗೆ ರಾಜ್ಯದಲ್ಲಿ ಅನ್ವಯವಾಗುತ್ತದೆ.

ವೈದ್ಯ ದಂಪತಿ ಮನೆಯಲ್ಲಿ ಚಿನ್ನ, ಹಣ ಕಳವು: ಕೇರ್‌ಟೇಕರ್‌ ಸೇರಿ ಇಬ್ಬರ ಬಂಧನ

ಬೆಳಗಾವಿ ನಗರದ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರ್‌ ಟೇಕರ್‌ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಸತೀಶ್ ಕಾಂಬ್ಳೆ ಮತ್ತು ಬಾಬಾಸಾಬ್ ಈರಪ್ಪ ಕಟಗೇರಿ ಬಂಧಿತ ಆರೋಪಿಗಳು. ಪೊಲೀಸರು

ಚಡಚಣದಲ್ಲಿ ಗುಂಡಿಕ್ಕಿ ಆರು ಮಂದಿಯ ಹತ್ಯೆ ಪ್ರಕರಣದ 11 ಆರೋಪಿಗಳು ಸೆರೆ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದ ಪುರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಶುಕ್ರವಾರ ಸಂಜೆ ನಡೆದ ಆರು ಮಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹನ್ನೊಂದು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಉತ್ತರ ವಲಯದ ಐಜಿಪಿ ಸಂದೀಪ್‌ಪಾಟಿಲ್ ಈ ವಿಷಯ

ದೇಶದ ಹಲವೆಡೆ ದಾಳಿ ಸಂಚು: ಒಂಬತ್ತು ಉಗ್ರರ ಬಂಧನ

ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಆಧರಿಸಿ ದೆಹಲಿ ಪೊಲೀಸ್ ವಿಶೇಷ ಘಟಕ ಒಂಬತ್ತು ಶಂಕಿತ ಉಗ್ರರನ್ನು ಬಂಧಿಸಿದೆ. ಈ ಉಗ್ರರು ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ

ಪ್ರಿಯತಮೆಯ ಪತಿ ಬಂದಾಗ 30 ಅಂತಸ್ತಿನ ಕಟ್ಟಡದಿಂದ ಜಿಗಿದು ಮೃತಪಟ್ಟ ಜಿಮ್‌ ಟ್ರೈನರ್

ಪ್ರಿಯತಮೆಯ ಮನೆಯಲ್ಲಿ ಜೊತೆಯಲ್ಲಿದ್ದಾಗ ಆಕೆಯ ಪತಿ ಮನೆಗೆ ಬಂದಾಗ ತಪ್ಪಿಸಿಕೊಳ್ಳಲು ಯತ್ನಿಸಿ 30 ಅಂತಸ್ತಿನ ಕಟ್ಟಡದಿಂದ ಕೆಳಗೆ ಬಿದ್ದು ಫಿಟ್‌ನೆಸ್ ಟ್ರೈನರ್ ಮೃತಪಟ್ಟಿದ್ದಾನೆ. ಸಿಂಗಾಪುರದ ವಸತಿ ಸಮುಚ್ಚಯದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿ 30 ವರ್ಷದ ಫಿಟ್‌ನೆಸ್ ಟ್ರೈನರ್ ಆಗಿದ್ದು,

ಮಾಜಿ ಸಚಿವ ವೆಂಕಟರಮಣ್ಣಪ್ಪ ತಳಸಮುದಾಯದವರ ಬಗ್ಗೆ ಕಾಳಜಿ ಹೊಂದಿದ್ದ ನಾಯಕ: ಸಿಎಂ ಸಿದ್ದರಾಮಯ್ಯ

ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಮಾಜಿ ಶಾಸಕರಾದ ದಿವಂಗತ  ಹೆಚ್. ವೆಂಕಟರಮಣಪ್ಪ ಅವರ ಅಂತಿಮ ದರ್ಶನ

ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತರಿಗೆ ಹೆಚ್ಚಿನ ಸ್ಥಾನಕ್ಕಾಗಿ ಆಗ್ರಹ

ರಾಜ್ಯ ಸರ್ಕಾರದ ಸಂಪುಟ ಪುನರಚನೆ ವೇಳೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ ಒತ್ತಾಯಿಸಿದೆ. ಬಸವಣ್ಣನವರ ಶಾಶ್ವತ ಲೌಕಿಕ ಮತ್ತು ಸಮಾನತಾವಾದಿ ತತ್ವಶಾಸ್ತ್ರದಿಂದ ಪ್ರೇರಿತವಾದ ನಮ್ಮ ಸಮುದಾಯವು

ಸಿಎಂ ಆಗಿ ಡಿಕೆ ಶಿವಕುಮಾರ್‌ ಪದಗ್ರಹಣ ಜೂನ್‌ ಮೂರಕ್ಕೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭ ಜೂನ್ ಮೂರರಂದು (ಬುಧವಾರ) ನಡೆಯಲಿದೆ ಎಂದು ಹೇಳಲಾಗುತ್ತಿದೆ. ತುಮಕೂರು ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು

ಚಡಚಣದಲ್ಲಿ ಗುಂಡಿನ ಮೊರೆತ: ಆಸ್ತಿ ವಿವಾದದಲ್ಲಿ ಆರು ಜನರ ಗುಂಡಿಕ್ಕಿ ಹತ್ಯೆ

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಆಸ್ತಿಗೆ ಸಂಬಂಧಿಸಿದ ಕುಟುಂಬ ಕಲಹ ವಿಕೋಪಕ್ಕೆ ಹೋಗಿ ಆರು ಜನರನ್ನು ಕೊಚ್ಚಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಚಂದು ನಿರಾಳೆ, ದುಂಡಪ್ಪ ನಿರಾಳೆ,