kannada news
ಜಾತಿ ಪ್ರೀತಿಗೆ ಮಗಳ ಪ್ರಿಯಕರನ ಕೊಲೆಗೈದ ಪೋಷಕರು: ಶವವನ್ನೇ ಮದುವೆಯಾದ ಯುವತಿ
ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಬೇರೆ ಜಾತಿ ಎಂಬ ಕಾರಣಕ್ಕೆ ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ಆಕೆಯ ಮನೆಯವರು ಹೊಡೆದು ಕೊಂದರೆ ಸಾವಿನಿಂದ ಆಘಾತಗೊಂಡ ಯುವತಿ ಆತನ ಶವವನ್ನೇ ಮದುವೆಯಾಗಿ ಆತನ ಮನೆಯಲ್ಲೇ ಇರುವ ನಿರ್ಧಾರ ಮಾಡಿದ್ದಾಳೆ. 20 ವರ್ಷದ ಸಕ್ಷಮ್ ಟಾಟೆ ಕೊಲೆಯಾದ ಯುವಕ. ಅಂಚಲ್ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಸಹೋದರರಿಂದಲೇ ಅಂಚಲ್‌ಗೆ ಸಕ್ಷಮ್ ತಾಟೆಯ ಪರಿಚಯವಾಗಿ ಪ್ರೀತಿಯಾಗಿತ್ತು. ಈ ಪ್ರೀತಿ ಅಂಚಲ್ ಕುಟುಂಬಕ್ಕೆ ತಿಳಿದು ಬೇರೆ ಜಾತಿ ಎಂಬ ಕಾರಣಕ್ಕೆ ತೀವ್ರ
ಸಮುದಾಯವು ಶೈಕ್ಷಣಿಕ, ಆರ್ಥಿಕ ಶಕ್ತಿ ಪಡೆದುಕೊಂಡರೆ ರಾಜಕೀಯ ಶಕ್ತಿ ಬರುತ್ತದೆ: ಸಂತೋಷ್ ಲಾಡ್
ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ಶಕ್ತಿ ತನ್ನಿಂತಾನೆ ಬರುತ್ತೆ. ಈ ನಿಟ್ಟಿನಲ್ಲಿ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಾವು ಇಂದು ನಿರ್ಧಾರ ಮಾಡೋಣ, ಪ್ರಮಾಣ ಮಾಡೋಣ. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ಕಾರ್ಮಿಕ ಸಚಿವ
ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ
ಸಂವಿಧಾನ ರಕ್ಷಕರೆಂದು ಹೇಳಿಕೊಳ್ಳುವ ಹಾಗೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಕಾಂಗ್ರೆಸ್ ಪಕ್ಷದ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಮಾಡಿದ್ದೇನು? ತುರ್ತು ಪರಿಸ್ಥಿತಿ ಹೇರಿ ಎರಡರಿಂದ ಎರಡೂವರೆ ವರ್ಷ ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು ಎಂದು
ಹಿರಿಯ ನಟ ಉಮೇಶ್ ಅಂತಿಮ ದರ್ಶನ ಪಡೆದ ಸಿಎಂ, ಡಿಸಿಎಂ
ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದ ಉಮೇಶ್ ರವರ ನಿಧನ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ
ಬೆಂಗಳೂರಿನ ಪಿಜಿಯಲ್ಲಿ ಹಾಸನದ ವಿದ್ಯಾರ್ಥಿನಿ ಆತ್ಮಹತ್ಯೆ, ತಂದೆಗೆ ಎಂಟು ಪುಟಗಳ ಪತ್ರ
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಗೆ ಎಂಟು ಪುಟದ ಡೆತ್ನೋಟ್ ಬರೆದಿದ್ದಾಳೆ. ಹೆಸರುಘಟ್ಟ ರಸ್ತೆಯ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಹಾಸನದ ವತ್ಸಲಾ (19) ಆತ್ಮಹತ್ಯೆ
ಸ್ವಾಮೀಜಿ ಬೀದಿಗೆ ಇಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ಎಂದೂ ಒಕ್ಕಲಿಗ ಸ್ವಾಮೀಜಿ, ಜಾತಿ ಬಳಸಿಕೊಂಡಿಲ್ವಾ?
“ಕುಮಾರಸ್ವಾಮಿ ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ, ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಛೇಡಿಸಿದ್ದು, ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ ಎಂದು
ಸಿಂಧನೂರಿನಲ್ಲಿ ಮಗನ ಮದುವೆ ಸಂಭ್ರಮದಲ್ಲಿದ್ದಾಗಲೇ ತಂದೆಯ ಸಾವು
ಸಿಂಧನೂರು ನಗರದ ವಾರ್ಡ್ ನಂಬರ್ 14ರ ನಿವಾಸಿ, ವೀರಶೈವ ಸಮಾಜದ ಮುಖಂಡ ಶರಣಯ್ಯ ಸ್ವಾಮಿ ಶಾಸ್ತ್ರಿ ಮಠ ಕಂದಗಲ್ (47) ಮಗನ ಮದುವೆ ದಿನದಂದೇ ಹೃದಯಘಾತದಿಂದ ಭಾನುವಾರ (ಇಂದು) ಮೃತಪಟ್ಟಿದ್ದಾರೆ. ಶರಣಯ್ಯ ಸ್ವಾಮಿ ಕಳೆದ ತಿಂಗಳಿನಿಂದ ಮಗನ ಮದುವೆ ಸಂಭ್ರಮದಲ್ಲಿ ಇದ್ದು,
ನನ್ನ, ಸಿಎಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ
“ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಡಿಸಿಎಂ ಡಿಕೆ ಶಿವಕುಮಾರ್ ಅವರು ಪುನರುಚ್ಚರಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನಿಮ್ಮ ಹಾಗೂ ಸಿಎಂ ಉಪಹಾರ ಸಭೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹೊಸ
ಬೆಂಗಳೂರಿನಲ್ಲಿ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ?
ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಎಫೆಕ್ಟ್ ತೀವ್ರಗೊಂಡಿದ್ದು, ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ತೀವ್ರ ಏರಿಕೆಯಾಗುತ್ತಿದೆ. ಕಳೆದೊಂದು ವಾರದಿಂದ ಬೆಂಗಳೂರು ಚಳಿಗೆ ಹೈರಾಣಾಗಿದ್ದು, ಮಧ್ಯಾಹ್ನದ ಸಮಯದಲ್ಲೂ ಮೈ ನಡುಗಿಸುತ್ತಿದೆ. ಶನಿವಾರ ಮತ್ತು ಇಂದು ಬೆಂಗಳೂರಿನ ತಾಪಮಾನ ಹಠಾತ್ ಕುಸಿದು
ಹುಣಸೂರಿನಲ್ಲಿ ಮೂರು ಹುಲಿ ಮರಿ ಸೆರೆ
ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಗೌಡನಕಟ್ಟೆ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿ ಮೂರು ಮರಿಗಳನ್ನು ಹಿಡಿದಿದ್ದಾರೆ. ಗೌಡನಕಟ್ಟೆ ಗ್ರಾಮದ ಹೊರವಲಯದಲ್ಲಿ ಅಡಗಿದ್ದ ಮೂರು ಹುಲಿ ಮರಿಗಳಿಗೆ ಅರವಳಿಕೆ ನೀಡಿ




