kannada news
ಭೂ ಲೂಟಿಕೋರ ಜೊತೆ ಶಾಮೀಲು 24 ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಬಗರ್ ಹುಕುಂ ಫಾರ್ಮ್ 50-53 ರಲ್ಲಿ ಜಮೀನು ಮಂಜೂರು ಪ್ರಕರಣಗಳಲ್ಲಿ ಪ್ರಾಮಾಣಿಕರು ಹಾಗೂ ಅಮಾಯಕರಿಗೆ ತೊಂದರೆ ನೀಡಲ್ಲ. ಆದರೆ, ಅಕ್ರಮವಾಗಿ ಭೂ ಮಂಜೂರಾತಿ ಪಡೆದ ಲೂಟಿ ಕೋರರು ಹಾಗೂ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ತಿಳಿಸಿದರು. ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಅವರು ಮಾತನಾಡಿ, “ಬಗರ್ ಹುಕುಂ ಫಾರ್ಮ್ 50-53ರ
ಮೇ 17ರಿಂದ ಜೆಇಇ ಅಡ್ವಾನ್ಸ್ ಪರೀಕ್ಷೆ: ಐಐಟಿ ರೂರ್ಕಿಗೆ ಪರೀಕ್ಷಾ ಜವಾಬ್ದಾರಿ!
ದೇಶದ ಅತ್ಯಂತ ಪ್ರತಿಷ್ಠಿತ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಮತ್ತು ವಿಶ್ವದ ಎರಡನೇ ಅತ್ಯಂತ ಕಠಿಣ ಪರೀಕ್ಷೆ ಎಂದು ಕರೆಯಲಾಗುವ ಜೆಇಇ 2026ರ ಜಂಟಿ ಪ್ರವೇಶ ಪರೀಕ್ಷೆ ಅಡ್ವಾನ್ಸ್ಡ್ ಮೇ 17ರಂದು ನಡೆಯಲಿದ್ದು, ಈ ಬಾರಿ ಪರೀಕ್ಷೆ ಆಯೋಜಿಸುವ ಹೊಣೆಯನ್ನು ಐಐಟಿ ರೂರ್ಕಿಗೆ
ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಕೆ ಶಿವಕುಮಾರ್
“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಮಹಾರಾಷ್ಟ್ರ,ಆಂಧ್ರ ಅಡ್ಡಗಾಲು: ಡಿಸಿಎಂ
“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿ
482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಖಂಡ್ರೆ ಪತ್ರ
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ
ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್ ಅಹಿಂದ ಪರ
ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ
ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ
ಉದ್ಯೋಗಿಗಳಿಗೆ ಋತುಚಕ್ರ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಮಹಿಳಾ ಉದ್ಯೋಗಿಗಳಿಗೆ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರು ಹೋಟೆಲ್ಗಳ ಸಂಘವು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಸಂಘದ ಪರ ವಕೀಲ ಪ್ರಶಾಂತ್ ಬಿ.ಕೆ ಅವರ ವಾದ
ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ




