Tuesday, December 30, 2025
Menu

ನ್ಯಾಷನಲ್ ಹೆರಾಲ್ಡ್ ಕೇಸ್‌: ಡಿಸಿಎಂ ಆಪ್ತ ಇನಾಯತ್‌ ಅಲಿಗೆ ದೆಹಲಿ ಪೊಲೀಸ್‌ ನೋಟಿಸ್‌

ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ, ಮಂಗಳೂರಿನ ಕಾಂಗ್ರೆಸ್‌ ಮುಖಂಡ  ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಡಿ ನೀಡಿದ್ದ ದೂರಿನ ಅನ್ವಯ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸೋದರ ಡಿಕೆ ಸುರೇಶ್‌ಗೂ ಈಗಾಗಲೇ ನೋಟಿಸ್ ಜಾರಿಯಾಗಿದೆ. ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು. ಇನಾಯತ್

ಕೋಲಾರದಲ್ಲಿ ಏಳು ದಿನದ ಹೆಣ್ಣು ಮಗುವನ್ನು ಬಿಟ್ಟು ಅಸ್ಸಾಂ ದಂಪತಿ ಸುಸೈಡ್‌

ಕೋಲಾರದ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿ ಗ್ರಾಮದಲ್ಲಿ ಅಸ್ಸಾಂ ಮೂಲದ ದಂಪತಿ ಏಳು ದಿನಗಳ ಹೆಣ್ಣು ಶಿಶುವನ್ನು ಬಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೆಹಮಾನ್ (28) ಮತ್ತು ಪತ್ನಿ ಫರಿಜಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ದಂಪತಿ ಅಸ್ಸಾಂನವರಾಗಿದ್ದು,

ಬಿಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು

ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್  ಹೇಳಿದ್ದಾರೆ. ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್ ನಲ್ಲಿ  ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ

ಹಣಕ್ಕಾಗಿ ಮೈಸೂರು ಉದ್ಯಮಿಯ ಕಿಡ್ನ್ಯಾಪ್‌ ಮಾಡಿದ್ದ ಗ್ಯಾಂಗ್‌ ಅರೆಸ್ಟ್‌

ಮೈಸೂರಿನ ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ಉದ್ಯಮಿಯನ್ನು ಅಪಹರಿಸಿದ್ದ ಗ್ಯಾಂಗ್‌ ಅನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು ಟಾಟಾ ಸುಮೋದಲ್ಲಿ ಬಂದ ಐದು ಮಂದಿ ಅಪಹರಣ ಮಾಡಿಕೊಂಡು ಹೋಗಿದ್ದರು. ಲೋಕೇಶ್ ಮೊಬೈಲ್‌ನಿಂದ ಅವರ

ಜೈಲಿನಲ್ಲಿ ಸಹ ಕೈದಿಗಳಿಗೆ ಚಿತ್ರಹಿಂಸೆ: ದರ್ಶನ್‌ ವಿರುದ್ಧ ಆರೋಪ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಅವರು ಅಲ್ಲಿನ ಕಠಿಣ ನಿಯಮಗಳಿಂದ ರೋಸಿದ್ದು, ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ಜೈಲಿನ ಪಾರ್ಟಿ ವೀಡಿಯೊ ವೈರಲ್ ಆಗುತ್ತಿದ್ದಂತೆ ಜೈಲಿನಲ್ಲಿ

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಪ್ರತಿಪಕ್ಷದಿಂದ ಅವಿಶ್ವಾಸ ನಿರ್ಣಯ ಮಂಡನೆ ಸಿದ್ಧತೆ, ಸರ್ಕಾರದಿಂದ 33 ಮಸೂದೆ ಮಂಡನೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಹಾಗೂ ಪ್ರತಿಪಕ್ಷ ಸದಸ್ಯರ ಮಧ್ಯೆ ಕಾವೇರಿದ ಚರ್ಚೆ, ಜಟಾಪಟಿ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ.  ಸರ್ಕಾರದಿಂದ 30ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗಲಿದ್ದು, ಒಂದಷ್ಟು ಮಸೂದೆಗಳು ಅಧಿವೇಶನದಲ್ಲಿ

ಗಂಗಾವತಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೊಶೂಟ್‌ ಮುಗಿಸಿ ವಾಪಸಾಗುತ್ತಿದ್ದ ಜೋಡಿ ಅಪಘಾತಕ್ಕೆ ಬಲಿ

ಮದುವೆಗೆ ಎರಡು ವಾರವಿದ್ದು, ಸಿದ್ಧತೆಯಲ್ಲಿದ್ದ ಜೋಡಿ, ಸಂಭ್ರಮದಿಂದ ಪ್ರೀ ವೆಡ್ಡಿಂಗ್ ಫೋಟೊಶೂಟ್‌ ಮಾಡಿಸಿಕೊಂಡು ಮನೆಗೆ ವಾಪಸ್ ಆಗುವಾಗ ರಸ್ತೆ ಅಪಘಾತ ಸಂಭವಿಸಿ ಮೃತಪಟ್ಟಿರುವ ಘಟನೆ ಕೊಪ್ಪಳದ ಗಂಗಾವತಿ ಬಳಿ ನಡೆದಿದೆ. ಬೈಕ್​ಗೆ ಲಾರಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಕರಿಯಪ್ಪ‌ ಮಡಿವಾಳ

ಗಂಡು ಮಗುವಿಗೆ ಹಂಬಲ: ವಿಜಯಪುರದಲ್ಲಿ ಮಾಟಗಾತಿ ಸಲಹೆಯಂತೆ ರಕ್ತ ಬರುವಂತೆ ಪತ್ನಿಯ ಕೂದಲು ಕಿತ್ತ ಗಂಡ

ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದಲ್ಲಿ ಗಂಡು ಮಗು ಬೇಕೆಂದು ಬಯಸುತ್ತಿದ್ದ ವ್ಯಕ್ತಿ ಮಾಟಗಾತಿಯ ಮಾತು ಕೇಳಿ ಪತ್ನಿಯ ನೆತ್ತಿಯಲ್ಲಿ ರಕ್ತ ಬರುವಂತೆ ಬಲವಂತವಾಗಿ ಕೂದಲನ್ನು ಕತ್ತರಿಸಿರುವ ಘಟನೆ ನಡೆದಿದೆ. ದುಂಡೇಶ್‌ ಮತ್ತು ಜ್ಯೋತಿ ದಳವಾಯಿ ದಂಪತಿಗೆ ಮೂರು ಹೆಣ್ಣು ಮಕ್ಕಳಿದ್ದು, ನಾಲ್ಕನೇಯದಾಗಿ

ವಿಜಯೇಂದ್ರನನ್ನು ಅಧ್ಯಕ್ಷಗಿರಿಯಿಂದ ಇಳಿಸದಿದ್ದರೆ ಜೆಸಿಬಿ ಪಕ್ಷ ಕಟ್ಟುತ್ತೇನೆ: ಬಿಜೆಪಿಯ ಉಚ್ಚಾಟಿತ ಶಾಸಕ ಯತ್ನಾಳ

ಯಡಿಯೂರಪ್ಪನ ಚೇಲಾಗಿರಿ ಮಾಡಿ ಅಪ್ಪಾಜಿ‌ ಎಂದು ಹೇಳುವುದಿಲ್ಲ. ನಾನು ಸ್ವಾಭಿಮಾನದಿಂದ ಇದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ಯೋಗಿ ಆದಿತ್ಯನಾಥ, ಆರೆಸ್ಸೆಸ್‌  ನಮ್ಮ ಆದರ್ಶಗಳು. ಭ್ರಷ್ಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನವರನ್ನು ಅಧ್ಯಕ್ಷಗಿರಿಯಿಂದ ಇಳಿಸಿ, ಮನೆಯಲ್ಲಿ ಕೂರಿಸುವವರೆಗೆ ನಾನು ಬಿಜೆಪಿಗೆ ಹೋಗುವುದಿಲ್ಲ. ಜೆಸಿಬಿ

ನನ್ನದು ಕೃಷ್ಣ ತತ್ತ್ವ, ಕಾಂಗ್ರೆಸ್ ಪಕ್ಷದ್ದು ಕಂಸ ತತ್ತ್ವ: ಹೆಚ್‌ಡಿ ಕುಮಾರಸ್ವಾಮಿ

ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಹೇಳಿದ್ದಾರೆ. ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ