kannada news
ಕೆಪಿಎಸ್ಸಿ ಅಕ್ರಮ: ಶಿವಶಂಕರಪ್ಪ ಸಾಹುಕಾರ್ ಎರಡನೇ ಬಾರಿ ಅಮಾನತು
ಕೆಪಿಎಸ್ಸಿ ನೇಮಕದಲ್ಲಿ ಅಕ್ರಮ ಸೇರಿದಂತೆ ವಿವಾದಗಳ ಹಿನ್ನೆಲೆ ಆಯೋಗದ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಎರಡನೇ ಬಾರಿ ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಈ ಹಿಂದಿನ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಈ ಹಿಂದೆ ಅಮಾನತು ಆದೇಶದಲ್ಲಿ ಉಂಟಾಗಿದ್ದ ಆಡಳಿತಾತ್ಮಕ ಮತ್ತು ಕಾನೂನು ತೊಡಕುಗಳನ್ನು ನಿವಾರಿಸಿಕೊಂಡು ರಾಜ್ಯ ಸರ್ಕಾರವು, ನಿಯಮಾನುಸಾರ ಪ್ರಕ್ರಿಯೆ ಪೂರ್ಣಗೊಳಿಸಿ ಈ ಕ್ರಮ ಕೈಗೊಂಡಿದೆ. ರಾಜ್ಯ ಸಚಿವವ ಸಂಪುಟದ ಅಧಿಕೃತ ಅನುಮತಿ ಪಡೆಯದೆ ಕೆಪಿಎಸ್ಸಿ ಅಧ್ಯಕ್ಷರನ್ನು ಅಮಾನತುಗೊಳಿಸಿರುವುದು
ಅಮೆರಿಕ ವೀಸಾ-ವಲಸೆ ನಿಯಮ ಕಠಿಣ: ಭಾರತೀಯರಿಗೆ ಆತಂಕ
ಅಮೆರಿಕದಲ್ಲಿ ಟ್ರಂಪ್ ಆಡಳಿತವು ವೀಸಾ ಹಾಗೂ ವಲಸೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುತ್ತಿದ್ದು, ಅಲ್ಲಿ ಉದ್ಯೋಗ ಮಾಡುತ್ತಿರುವ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುತ್ತಿರುವ ಭಾರತೀಯರಿಗೆ ಹೊಸ ಆತಂಕ ತಂದೊಡ್ಡಿದೆ. ಹೆಚ್‌೧ಬಿ ವೀಸಾ ನವೀಕರಣದಲ್ಲಿ ವಿಳಂಬ ಮತ್ತು ಸಂದರ್ಶನ ದಿನಾಂಕ ಸಿಗದೆ ಭಾರತೀಯರ
ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮಂದಿಯ ಶವ ಪತ್ತೆ
ವಿಜಯಪುರ ನಗರದ ಹೊರಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಜನರ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ
ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ವ್ಯಕ್ತಿಯ ಹತ್ಯೆ
ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಶಂಕೆಯಿಂದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕೊಲೆಗೈದ ವ್ಯಕ್ತಿಯ ಪೋಟೊವನ್ನು ತನ್ನ ಸ್ಟೇಟಸ್‌ಗೆ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಕೊಲೆ ಆರೋಪಿ ಪತ್ನಿಯೊಂದಿಗೆ ಸೇರಿ
ಅಧಿಕಾರ ಇರಲಿ, ಇಲ್ಲದಿರಲಿ ನಾನು ಒಳ ಮೀಸಲಾತಿ ಪರ: ಮಾಜಿ ಸಿಎಂ ಸಿದ್ದರಾಮಯ್ಯ
ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ನಾನು ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ
ಶಾಸಕ ಪ್ರದೀಪ್ ಈಶ್ವರ್‌ಗೆ ಜಾಮೀನು ರಹಿತ ವಾರಂಟ್
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ತನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆಂದು ಮಾನನಷ್ಟ ಕೇಸ್ ದಾಖಲಿಸಿದ್ದರು. ಈ ವಿಚಾರಕ್ಕೆ
ಕೆಪಿಎಸ್ಸಿ ಅಕ್ರಮ: ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಕಚೇರಿ ಮೇಲೆ ಸಿಐಡಿ ಪೊಲೀಸರು ಮತ್ತೊಮ್ಮೆ ಮಂಗಳವಾರ ದಾಳಿ ನಡೆಸಿದ್ದಾರೆ. ಎಸ್ಪಿ ರಾಘವೇಂದ್ರ ಹೆಗ್ಡೆ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳ ತಂಡ ಕೆಪಿಎಸ್ಸಿ ಕಚೇರಿಗೆ ತೆರಳಿ ಹಲವು ದಾಖಲೆಗಳ ಪರಿಶೀಲನೆ ಮುಂದುವರಿಸಿದೆ. ಪರೀಕ್ಷೆ
ಅತ್ಯಾಚಾರ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತೇಜ್‌ಪಾಲ್ 2 ವಾರದಲ್ಲಿ ಶರಣಾಗಲಿ ಎಂದ ಸುಪ್ರೀಂ
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಎರಡು ವಾರಗಳೊಳಗೆ ಶರಣಾಗಬೇಕು ಎಂದು ಸುಪ್ರೀಂಕೋರ್ಟ್ ಖಡಕ್ ಸೂಚನೆ ನೀಡಿದೆ. ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶರಣಾಗತಿಯಿಂದ ವಿನಾಯಿತಿ ನೀಡುವಂತೆ ತೇಜ್‌ಪಾಲ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್ ನೀರು: ಸಿಡಬ್ಲ್ಯುಆರ್‌ಸಿ ಆದೇಶ ಎತ್ತಿ ಹಿಡಿದ ಸಿಡಬ್ಲ್ಯುಎಂಎ
ತಮಿಳುನಾಡಿಗೆ ಪ್ರತಿದಿನ ಒಂಬತ್ತು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ. ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಕರ್ನಾಟಕಕ್ಕೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ದೆಹಲಿಯಲ್ಲಿ ಕಾವೇರಿ
ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ: ಹೆಣ್ಣು ಮಕ್ಕಳಿಬ್ಬರು ನಾಪತ್ತೆ
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದು, ಮಹಿಳೆ ಮತ್ತು ಮಗನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ, ಆದರೆ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗದ ಮಹಿಳೆ ನದಿಗೆ ಹಾರಿದ್ದು, ಮಹಿಳೆ ಹಾಗೂ ಆಕೆಯ 11 ತಿಂಗಳ




