kannada news
ಕಡೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಕೊಲೆ: ಮತ್ತೊಬ್ಬ ಅರೆಸ್ಟ್
ಕಡೂರು ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತರು ಭಾಗಿಯಾಗಿದ್ದು, ಮತ್ತೊಬ್ಬ ಆರೋಪಿ ಮಿಥುನ್ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೊಲೆಯಲ್ಲಿ ಮಿಥುನ್ ಪಾತ್ರ ದೃಢಪಟ್ಟಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ. ಆರೋಪಿ ಮಿಥುನ್ ಪ್ರಕರಣದ ಮೊದಲ ಆರೋಪಿ ಸಂಜಯ್ ಸ್ನೇಹಿತನಾಗಿದ್ದು, ಆರೆಸ್ಸೆಸ್ ಮತ್ತು ಬಜರಂಗದಳದಲ್ಲಿ ಸಕ್ರಿಯ ಕಾರ್ಯಕರ್ತ ಎಂಬುದು ಗೊತ್ತಾಗಿದೆ. ಆರೋಪಿಗಳಾದ
ಹುಬ್ಬಳ್ಳಿ-ಧಾರವಾಡ ನಡುವೆ ವಿದ್ಯುತ್ ಕ್ಷಿಪ್ರ ಸಾರಿಗೆ (ERT): ಸಿಎಂ ಜೊತೆ ಸಚಿವ ಲಾಡ್ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸುಸಜ್ಜಿತ Electric Rapid Transit (E-RT) ಯೋಜನೆ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್
ರೇಡಿಯೋಲಾಜಿಸ್ಟ್‌ನಿಂದ ಲೈಂಗಿಕ ಕಿರುಕುಳ ದೂರು ನೀಡಿದಾಕೆ ವಿರುದ್ಧ ಎಫ್‌ಐಆರ್: ಆನೇಕಲ್ ಪೊಲೀಸ್ ವಿರುದ್ಧ ಸಾರ್ವಜನಿಕರ ಆಕ್ರೋಶ
ರೇಡಿಯೋಲಾಜಿಸ್ಟ್‌ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಪ್ರಕರಣ ದಾಖಲಿಸಿದರೆ ಆನೇಕಲ್ ಪೊಲೀಸರು ಆಕೆಯ ವಿರುದ್ಧವೇ ಎಫ್‌ಐಆರ್ ದಾಖಲಿಸಿದ್ದು, ಇದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣದಾಸೆಗೆ ಪೊಲೀಸರು ಆರೋಪಿ ಪರವಾಗಿ ಸಂತ್ರಸ್ತೆಯ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ನ್ಯಾಯ ದೊರಕಿಸಿ ಕೊಡಿ
ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು: ಸಿಎಂ ಸಿದ್ದರಾಮಯ್ಯ
ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ
ಖರೀದಿ ಮಾಡುವ ಶಕ್ತಿ ನನಗಿದೆ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಕೆ ಶಿವಕುಮಾರ್
ನನ್ನ ಶ್ರಮ, ಸಂಪಾದನೆ, ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ, ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ವಿಮಾನ ಪ್ರಯಾಣ ದರಕ್ಕೆ ಕೇಂದ್ರ ಬ್ರೇಕ್: 500 ಕಿ.ಮೀ. 7500 ರೂ. ನಿಗದಿ!
ನವದೆಹಲಿ: ಇಂಡಿಗೋ ಸಂಸ್ಥೆಯ ಎಲ್ಲಾ ದೇಶೀಯ ವಿಮಾನಗಳ ವಿಳಂಬ ಮತ್ತು ರದ್ದತಿ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಬೇಕಾಬಿಟ್ಟಿ ದರ ನಿಗದಿ ಮಾಡಿ ಪ್ರಯಾಣಿಕರ ಲೂಟಿಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ಕಳೆದ 5 ದಿನಗಳಿಂದ ಇಂಡಿಗೋ ಸಂಸ್ಥೆಯ ವಿಮಾನಗಳ
ಕೊಟ್ಟ ಮಾತಿನಂತೆ 142 ಭರವಸೆ ಈಡೇರಿಸಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್
ಹಾಸನ: “ನಮ್ಮದು ನುಡಿದಂತೆ ನಡೆವ ಸರ್ಕಾರ. ಕೊಟ್ಟ ಮಾತಿನಂತೆ 142 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ನಮ್ಮ ಸರ್ಕಾರದ ಸಾಧನೆಗಳಿಗೆ ಜನರ ಕಣ್ಣುಗಳೇ ಸಾಕ್ಷಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ಶನಿವಾರ ನಡೆದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ
ಕಾರವಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಜೈಲರ್, ಪೊಲೀಸರ ಮೇಲೆ ಹಲ್ಲೆ!
ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ
ಮೀಸಲಾತಿ ಬಗ್ಗೆ ಜನಪ್ರತಿನಿಧಿಗಳು ತುಟಿಬಿಚ್ಚಿ: ಮಾಜಿ ಸಂಸದ ಉಗ್ರಪ್ಪ ಕಿಡಿ
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳದ ಕಾಯ್ದೆಗೆ ಕೆಎಟಿನಲ್ಲಿ ಸೆಟಸೈಡ್ ಹಾಗೂ ಹೈಕೋರ್ಟ್ ನಲ್ಲಿ ಸ್ಟೇ ಮಾಡಲಾಗಿದೆ. ಇದನ್ನು ನೋಡಿದರೆ ಎಸ್ಸಿ, ಎಸ್ಟಿ, OBC ಸಮುದಾಯಕ್ಕೆ ಅನ್ಯಾಯ ಆಗ್ತಿದೆ. ಇದಕ್ಕೆ ತಕ್ಷಣ ಕಾನೂನು ತಿದ್ದುಪಡಿ ತರಬೇಕು ಹಾಗೂ ಶೆಡ್ಯೂಲ್
ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ
ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ




